newsfirstkannada.com

VIDEO: ಜೈ ಶ್ರೀರಾಮ್‌ ಅಂತ ಪ್ರಧಾನಿ ಮೋದಿಗೆ ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ; ಏನಂದ್ರು?

Share :

Published January 24, 2024 at 6:22pm

  ನೀವು ಎಷ್ಟೇ ದಾರಿ ತಪ್ಪಿಸಿದ್ರೂ ಜನ ನಿಮ್ಮ ಕೈ ಹಿಡಿಯಲ್ಲ!

  ನಾವೆಲ್ಲ ಹಿಂದೂಗಳಲ್ವಾ ಅಂತ ಗುಡುಗಿದ ಸಿಎಂ ಸಿದ್ದರಾಮಯ್ಯ

  ನನ್ನ ಹೆಸರಿನಲ್ಲೇ ರಾಮ ಇದ್ದಾನೆ, ನಾವೆಲ್ಲ ಹಿಂದೂಗಳಲ್ವಾ?

ಮೈಸೂರು: ಶ್ರೀರಾಮನನ್ನು ಬಿಜೆಪಿಯವರು ಗುತ್ತಿಗೆ ತೆಗೆದುಕೊಂಡಿದ್ದಾರಾ? ನಮ್ಮೂರಲ್ಲಿ, ನಿಮ್ಮೂರಲ್ಲಿ ರಾಮಮಂದಿರ ಇಲ್ವಾ. ನನ್ನ ಹೆಸರಿನಲ್ಲೇ ರಾಮ ಇದ್ದಾನೆ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಮಾತನಾಡಿದ ಅವರು, ಶ್ರೀರಾಮನನ್ನು ಬಿಜೆಪಿಯವರು ಗುತ್ತಿಗೆ ತೆಗೆದುಕೊಂಡಿದ್ದಾರಾ? ನಮ್ಮೂರಲ್ಲಿ, ನಿಮ್ಮೂರಲ್ಲಿ ರಾಮಮಂದಿರ ಇಲ್ವಾ. ನನ್ನ ಹೆಸರಿನಲ್ಲೇ ರಾಮ ಇದ್ದಾನೆ. ತಂದೆ ಹೆಸರಲ್ಲೂ ರಾಮ ಇದ್ದಾನೆ. ನಾವೆಲ್ಲ ರಾಮನನ್ನ ಪೂಜೆ ಮಾಡಲ್ವಾ. ನಾವೆಲ್ಲ ಹಿಂದೂಗಳಲ್ವಾ ಎಂದು ಭಾಷಣದ ವೇಳೆ ಗುಡುಗಿದ್ದಾರೆ.

ಮಾತು ಮುಂದುವರೆಸಿದ ಸಿದ್ದರಾಮಯ್ಯ, ಬಿಜೆಪಿಯವರು ಜನರನ್ನು ಮರಳು ಮಾಡುತ್ತಿದ್ದಾರೆ. ಹಿಂದುತ್ವದ ಹೆಸರಲ್ಲಿ ಅಧಿಕಾರ ಹಿಡಿದು ಕುಳಿತಿದ್ದಾರೆ. ರಾಮಮಂದಿರ ಉದ್ಘಾಟನೆ ಮಾಡಿದ್ದಾರೆ. ವ್ರತ ಮಾಡುತ್ತಾರಂತೆ. ನಾವು ರಾಮನ ಪೂಜೆ ಮಾಡಲ್ವಾ? ರಾಮನ ಭಜನೆ ಮಾಡಲ್ವಾ? ಧನುರ್ ಮಾಸದಲ್ಲಿ ನಾನೂ ಬೆಳಗ್ಗೆ ಎದ್ದು ದೇವಸ್ಥಾನಕ್ಕೆ ಹೋಗಿ ರಾಮನ ಭಜನೆ ಹಾಡುತ್ತಿದ್ದೆ. ಮೊನ್ನೆ ಬೆಂಗಳೂರಿನಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ್ದೇನೆ ಎಂದರು.

ಜೈ ಶ್ರೀರಾಮ್ ಅಂತ ಘೋಷಣೆ ಕೂಗಿಸಿದೆ. ಬಿಜೆಪಿಯವರು ಭಾವನೆಗಳ ಮೇಲೆ ಮತ ಕೇಳುತ್ತಾರೆ. ಅವರನ್ನು ನೀವು ನಂಬಬೇಡಿ ಎಂದರು. ಮತ್ತೆ ಉದ್ಯೋಗ ಕೇಳಿದ್ರೆ ಪಕೋಡ ಮಾರಿ ಅಂತ್ರ ಮೋದಿ ಹೇಳಿದ್ದರು. ಮೋದಿಯವರು ನುಡಿದಂತೆ ನಡೆಯಲು ಸಾಧ್ಯವಾಗಿಲ್ವಲ್ಲ. ಅದಕ್ಕೆ ರಾಮನ್ನ ಮುಂದಿಟ್ಟುಕೊಂಡು ಬಂದಿದ್ದಾರೆ. ಜನ ಬುದ್ದಿವಂತರಿದ್ದಾರೆ ನೀವು ಎಷ್ಟೇ ದಾರಿ ತಪ್ಪಿಸಿದ್ರೂ ಜನ ಕೈ ಹಿಡಿಯಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ಜೈ ಶ್ರೀರಾಮ್‌ ಅಂತ ಪ್ರಧಾನಿ ಮೋದಿಗೆ ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ; ಏನಂದ್ರು?

https://newsfirstlive.com/wp-content/uploads/2024/01/siddu-30.jpg

Load More