newsfirstkannada.com

RSS ನಿಷೇಧ ಬಗ್ಗೆ ಸರ್ಕಾರ ಮಾತೇ ಆಡಿಲ್ಲ- ಸಿಎಂ ಸಿದ್ದರಾಮಯ್ಯ

Share :

Published May 27, 2023 at 8:47am

    RSS ನಿಷೇಧ ಬಗ್ಗೆ ಸರ್ಕಾರ ಮಾತೇ ಆಡಿಲ್ಲ

    ತಾಕತ್ ಇದ್ದರೆ RSS​​ ಅನ್ನು ಬ್ಯಾನ್ ಮಾಡಲಿ-ಬೊಮ್ಮಾಯಿ

    ನೇರವಾಗಿ ಬೊಮ್ಮಾಯಿಗೆ ಟಾಂಗ್​ ಕೊಟ್ಟ ಸಿಎಂ!

ಬೆಂಗಳೂರು: ಕಾಂಗ್ರೆಸ್​ ಸರ್ಕಾರ, ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿದೆ. ರಾಜ್ಯ ಸರ್ಕಾರಕ್ಕೆ ತಾಕತ್ ಇದ್ದರೆ ಆರ್​ಎಸ್​​ಎಸ್​​ ಅನ್ನು ಬ್ಯಾನ್ ಮಾಡಲಿ ನೋಡೋಣ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇರವಾಗಿ ಸವಾಲು ಹಾಕಿದ್ದರು. ಇದೀಗ ಬಸವರಾಜ ಬೊಮ್ಮಾಯಿ ಅವರು ಹಾಕಿದ್ದ ಸವಾಲ್​ಗೆ ನೂತನ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 59 ನೇ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ನೆಹರೂ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ. ಇದಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯ ಕದಡುವ ಕೆಲಸ ಮಾಡುವ ಯಾವುದೇ ಸಂಘಟನೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ನಂತರ ಮಾತು ಮುಂದುವರಿಸಿದ ಅವರು, ಸಂಘ ಪರಿವಾರ (ಆರ್‌ಎಸ್‌ಎಸ್) ನಿಷೇಧ ಮಾಡುವ ಬಗ್ಗೆ ಸರ್ಕಾರ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಬೊಮ್ಮಾಯಿ ಅವರಿಗೆ ಟಾಂಗ್​ ಕೊಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

RSS ನಿಷೇಧ ಬಗ್ಗೆ ಸರ್ಕಾರ ಮಾತೇ ಆಡಿಲ್ಲ- ಸಿಎಂ ಸಿದ್ದರಾಮಯ್ಯ

https://newsfirstlive.com/wp-content/uploads/2023/05/puttaka-2.jpg

Load More