newsfirstkannada.com

‘ಇದು ನನ್ನ ಕೊನೇ ಚುನಾವಣೆ, ಆದರೆ..’- ಸಿಎಂ ಸಿದ್ದರಾಮಯ್ಯ ಹೀಗೆ ಅಂದಿದ್ಯಾಕೆ..?

Share :

10-06-2023

    ಇದು ನನ್ನ ಕೊನೇ ಚುನಾವಣೆ ಎಂದ ಸಿಎಂ ಸಿದ್ದರಾಮಯ್ಯ

    ಕೃತಜ್ಞತಾ ಸಮರ್ಪಣಾ ಸಭೆಯಲ್ಲಿ ಸಿದ್ದರಾಮಯ್ಯ ಭಾವುಕ

    ಗೆಲ್ಲಿಸಿದ್ದಕ್ಕೆ ನಾಡಿನ ಜನತೆಗೆ ಕೃತಜ್ಞತೆ ತಿಳಿಸಿದ ಸಿಎಂ ಸಿದ್ದು!

ಮೈಸೂರು: ಇಂದು ವರುಣಾ ವಿಧಾನಸಭಾ ಕ್ಷೇತ್ರದ ಸುತ್ತೂರಿನಲ್ಲಿ ನಡೆದ ಕೃತಜ್ಞತಾ ಸಮರ್ಪಣಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ಈ ವೇಳೆ ಮಾತಾಡಿದ ಸಿಎಂ ಸಿದ್ದರಾಮಯ್ಯ ಅವರು, ಭ್ರಷ್ಟಚಾರ, ದುರಾಡಳಿತ, ಅಭಿವೃದ್ಧಿಹೀನ ಮತ್ತು ಸಮಾಜವನ್ನು ಒಡೆಯುವ ದುಷ್ಟ ರಾಜಕಾರಣವನ್ನು ರಾಜ್ಯದ ಜನತೆ ಸೋಲಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಕಾರಣಕ್ಕಾಗಿ ನಾಡಿನ ಜನತೆಗೆ ನಾನು ಕೃತಜ್ಞ ಎಂದರು.

ಇದು ನನ್ನ ಕೊನೆಯ ಚುನಾವಣೆ. ಆದರೆ ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರೆಸುತ್ತೇನೆ. 2013 ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನುಡಿದಂತೆ ನಡೆದು ಸಮಾಜದ ಎಲ್ಲಾ ಜಾತಿ, ಧರ್ಮ ಮತ್ತು ಎಲ್ಲಾ ವರ್ಗಗಳ ಪರವಾಗಿ ಕಲ್ಯಾಣ ಕಾರ್ಯಕ್ರಮ ರೂಪಿಸಿದ್ದೆ. ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾದ ಕಲ್ಯಾಣ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ನಾಡಿಗೆ ನೀಡಲಿದೆ ಎಂದರು.

ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ಅದನ್ನೇ ಮಾದರಿಯನ್ನಾಗಿ ಇಟ್ಟುಕೊಂಡು, ನಾನು ಮೊದಲ ಬಾರಿ ಬಸವ ಜಯಂತಿ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನುಡಿದಂತೆ ನಡೆದಿದ್ದೆ. ಮುಖ್ಯಮಂತ್ರಿ ಕುರ್ಚಿ ಎಂದರೆ ಸುಖದ ಸುಪ್ಪತ್ತಿಗೆ ಅಲ್ಲ, ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ ಎಂಬುದು ನನ್ನ ಭಾವನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಪ್ರಧಾನಿ ನರೇಂದ್ರ ಮೋದಿಯವರು ಕಾಂಗ್ರೆಸ್ ಗ್ಯಾರಂಟಿಗಳು ಜಾರಿ ಆಗುವುದಿಲ್ಲ, ರಾಜ್ಯ ದಿವಾಳಿ ಆಗುತ್ತದೆ ಎಂದಿದ್ದರು. ನಾವು ಈಗ ಐದನ್ನೂ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಬಡವರ-ಮಧ್ಯಮ ವರ್ಗದವರ ಪರವಾದ ಯೋಜನೆ ಘೋಷಿಸಿದಾಗ ಪ್ರಧಾನ ಮಂತ್ರಿ ಮೋದಿಯವರು ಜನರಿಗೆ ಅನುಕೂಲ ಮಾಡುವ ನಮ್ಮ ಯೋಜನೆಗೆ ತಮ್ಮ ಸಹಕಾರ ನೀಡಬೇಕಿತ್ತು. ಆದರೆ ಮೋದಿ ಅವರಿಗೆ ಬಡವರ-ಮಧ್ಯಮ ವರ್ಗದವರ ಪ್ರಗತಿ, ಅಭಿವೃದ್ಧಿ ಬೇಕಾಗಿಲ್ಲ. ಅದಕ್ಕೇ ಬಿಜೆಪಿಯವರು ಜನರಲ್ಲಿ ತಮ್ಮ ಸಂಪ್ರದಾಯದಂತೆ ಸುಳ್ಳುಗಳನ್ನು ಎರಚಾಡುತ್ತಾ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಇದು ನನ್ನ ಕೊನೇ ಚುನಾವಣೆ, ಆದರೆ..’- ಸಿಎಂ ಸಿದ್ದರಾಮಯ್ಯ ಹೀಗೆ ಅಂದಿದ್ಯಾಕೆ..?

https://newsfirstlive.com/wp-content/uploads/2023/06/Siddu1.jpg

Load More