/newsfirstlive-kannada/media/post_attachments/wp-content/uploads/2025/06/SIDDARAMAIAH-3.jpg)
ಬೆಂಗಳೂರು: ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಂಪುಟ ಸಭೆ ಕರೆಯಲಾಗಿದೆ. ತೀವ್ರ ವಿರೋಧ ವ್ಯಕ್ತವಾಗಿರುವ ಜಾತಿಗಣತಿ ವರದಿ ಕುರಿತು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನಕ್ಕೆ ಬರಲಾಗುತ್ತಿದೆ.
ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ಜಾತಿ ಜನಗಣತಿಯ ಮರು ಸಮೀಕ್ಷೆಗೆ ಸೂಚನೆ ನೀಡಿದ ಬೆನ್ನಲ್ಲೇ ಇಂದಿನ ವಿಶೇಷ ಸಂಪುಟ ಸಭೆ ಕುತೂಹಲ ಕೆರಳಿಸಿದೆ. ಕ್ಯಾಬಿನೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಜೊತೆಗಿನ ಮಾತುಕತೆಯ ವಿವರಗಳನ್ನು ನೀಡಲಿದ್ದಾರೆ. ಬಳಿಕ ಜಾತಿಗಣತಿ ಮರು ಸಮೀಕ್ಷೆ ಸಂಬಂಧ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ.
ಇಂದಿನ ವಿಶೇಷ ಸಂಪುಟ ಸಭೆಯಲ್ಲಿ ಪರಿಷ್ಕೃತ ಸಮೀಕ್ಷೆ ಹೆಸರಿನಲ್ಲಿ ಮತ್ತೊಮ್ಮೆ ಜಾತಿವಾರು ಮರು ಸಮೀಕ್ಷೆ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಮರು ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸಲು ನಿರ್ಧರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತಿದೆ.
/newsfirstlive-kannada/media/post_attachments/wp-content/uploads/2025/06/Delhi-Congress-Meeting.jpg)
ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮೀಕ್ಷೆ ಮಾದರಿಯಲ್ಲೇ ಮರುಸಮೀಕ್ಷೆಗೆ ಕ್ಯಾಬಿನೆಟ್‌ನಲ್ಲಿ ತೀರ್ಮಾನಿಸುವ ಸಾಧ್ಯತೆ ಇದೆ. ಪ್ರಸ್ತುತ ಹಾಲಿ ವರದಿಯನ್ನು ಪರಿಷ್ಕರಣೆ ಮಾಡಲು ಸಾಧ್ಯವಿಲ್ಲದ ಕಾರಣ ಮರುಸಮೀಕ್ಷೆ ಕೈಗೊಳ್ಳಲಾಗುತ್ತಿದೆ.
ಕಾಂಗ್ರೆಸ್ ನಾಯಕರಿಗೆ ಜಾತಿ ಜನಗಣತಿ ವರದಿ ಪರಿಷ್ಕರಣೆಗೆ ಮುಂದಾದರೆ ರಾಜ್ಯದ ವಿವಿಧ ಪ್ರಬಲ ಸಮುದಾಯಗಳಿಂದ ವಿರೋಧ ವ್ಯಕ್ತವಾಗುವ ಆತಂಕ ಇತ್ತು. ಈ ಹಿನ್ನೆಲೆಯಲ್ಲಿ ಪರಿಷ್ಕೃತ ಸಮೀಕ್ಷೆ ಹೆಸರಿನಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಮರು ಸಮೀಕ್ಷೆಗೆ ನಿರ್ಧಾರಿಸುವ ಸಾಧ್ಯತೆ ಇದೆ.
/newsfirstlive-kannada/media/post_attachments/wp-content/uploads/2025/06/CONGRESS.jpg)
ಮತ್ತೆ ದೆಹಲಿಗೆ ಸಿಎಂ ಪ್ರಯಾಣ!
ಕಳೆದ 2 ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಿದ್ದರು. ಇದೀಗ ಇಂದಿನ ವಿಶೇಷ ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಮತ್ತೆ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಸಿದ್ದರಾಮಯ್ಯಗೆ ಭಾರೀ ಹಿನ್ನಡೆ.. ಮತ್ತೆ ಜಾತಿಗಣತಿ ಮರು ಸಮೀಕ್ಷೆಗೆ ಆದೇಶಿಸಿದ್ದು ಯಾಕೆ..?
ಸಂಜೆ 4 ಗಂಟೆಗೆ ಹೆಚ್ಎಎಲ್‌ನಿಂದ ಪ್ರಯಾಣ ಬೆಳೆಸುವ ಸಿಎಂ ಸಿದ್ದರಾಮಯ್ಯ ಅವರು ಇಂದು ರಾತ್ರಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ 16ನೇ ಹಣಕಾಸು ಆಯೋಗದ ಸಭೆ ನಿಗದಿಯಾಗಿದ್ದು, ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.
ಹಣಕಾಸು ಆಯೋಗದ ಸಭೆಯ ಜೊತೆಗೆ ಸಿಎಂ ಸಿದ್ದರಾಮಯ್ಯ ಎಐಸಿಸಿ ನಾಯಕರನ್ನೂ ಭೇಟಿ ಮಾಡುವ ಸಾಧ್ಯತೆ ಇದೆ. ಕೆಲ ಕೇಂದ್ರ ಸಚಿವರನ್ನೂ ಭೇಟಿ ಮಾಡಲು ಯೋಜಿಸಿದ್ದು, ಜೂನ್ 13ರ ರಾತ್ರಿ ಬೆಂಗಳೂರಿಗೆ ಸಿಎಂ ವಾಪಸ್ಸಾಗಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
 Follow Us