ಕೆಎಂಎಫ್ ನಿರ್ಧಾರವನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ
ಕರ್ನಾಟಕ ಸರ್ಕಾರದ ಮನವಿಯನ್ನು ಒಪ್ಪಿಕೊಳ್ಳುತ್ತಾ ಟಿಟಿಡಿ?
ಮಾಜಿ CM ಬೊಮ್ಮಾಯಿ ಹಿಂದೂ ವಿರೋಧಿನಾ- ಸಿದ್ದು ಪ್ರಶ್ನೆ
ಬೆಂಗಳೂರು: ನಾಡಿನ ರೈತರ ಹಿತದೃಷ್ಟಿಯಿಂದ ನಾವು ಕೇಳುವ ದರ ನೀಡಲು ತಿರುಪತಿ ದೇವಾಲಯದವರು ಒಪ್ಪುವುದಾದರೆ ತುಪ್ಪ ಪೂರೈಸಲು ನಮಗೆ ಯಾವ ಸಮಸ್ಯೆಗಳಿಲ್ಲ ಎಂದು ಮುಖ್ಯಮಂತ್ರಿಸಿದ್ದರಾಮಯ್ಯ ಹೇಳಿದ್ದಾರೆ.
ತಿರುಪತಿ ಟೆಂಡರ್ ಕೈಬಿಟ್ಟಿರುವ KMF
ಕಳೆದ 20 ವರ್ಷದಿಂದ ತಿರುಪತಿಗೆ ಕೆಎಂಎಫ್ ನಂದಿನಿ ತುಪ್ಪ ಪೂರೈಕೆ ಆಗುತಿತ್ತು. ತಿರುಪತಿಗೆ 6 ತಿಂಗಳಿಗೆ 14 ಲಕ್ಷ ಕೆಜಿಯಷ್ಟು ತುಪ್ಪ ಕೊಡಬೇಕು. ಇಷ್ಟು ದೇವಸ್ಥಾನಕ್ಕೆಂದು ರಿಯಾಯಿತಿ ದರದಲ್ಲಿ ತುಪ್ಪ ಪೂರೈಕೆ ಮಾಡಲಾಗುತ್ತಿತ್ತು. ಆದ್ರೆ ಈ ಬಾರಿ ಕೆಎಂಎಫ್ ರಿಯಾಯಿತಿ ದರದಲ್ಲಿ ನಂದಿನಿ ತುಪ್ಪ ನೀಡುವ ತಿರುಪತಿ ಟೆಂಡರ್ ಅನ್ನು ಕೈ ಬಿಟ್ಟಿದೆ. ಕಡಿಮೆ ಬೆಲೆಗೆ ತುಪ್ಪ ಕೊಡಲಾಗಲ್ಲ ಅಂತಾ ಟೆಂಡರ್ ಕಟ್ ಮಾಡಿಕೊಂಡಿದೆ.
ಇದನ್ನೂ ಓದಿ: ಇನ್ಮುಂದೆ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿರಲ್ಲ ನಂದಿನಿ ತುಪ್ಪ; ತಿರುಪತಿಗೂ KMFಗೂ ಇದ್ದ 20 ವರ್ಷದ ಸಂಬಂಧ ಕಡಿತ
ಕಟೀಲ್ಗೆ ಕೌಂಟರ್ ಕೊಟ್ಟ ಸಿದ್ದರಾಮಯ್ಯ
ಸರ್ಕಾರದ ಈ ನಿರ್ಧಾರವನ್ನು ಟೀಕಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ, ನಳಿನ್ ಕುಮಾರ್ ಕಟೀಲ್.. ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರದಲ್ಲಿ ಅಸಡ್ಡೆ ತೋರುವ ಕಾಂಗ್ರೆಸ್ ನೀತಿಯಿಂದಾಗಿ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತಗೊಂಡಿದೆ. ತಿರುಪತಿಯೊಂದಿಗಿನ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದ್ದು, ಹಿಂದೂಗಳೆಡಗಿನ ಸಿದ್ದರಾಮಯ್ಯ ಅವರ ತಾತ್ಸಾರ ನೀತಿ ರುಜುವಾತಾಗಿದೆ ಎಂದು ಕುಟುಕಿದ್ದರು.
ಕಟೀಲ್ ಟ್ವಿಟರ್ಗೆ ಕೌಂಟರ್ ಕೊಟ್ಟಿರುವ ಸಿದ್ದರಾಮಯ್ಯ, ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಇಂದು, ನಿನ್ನೆಯ ವಿಚಾರವಲ್ಲ. ಕಳೆದ ಒಂದೂವರೆ ವರ್ಷದ ಹಿಂದೆಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ. ಮಾನ್ಯ ಸಂಸದ ಕಟೀಲ್ ಅವರೇ ಈಗ ಹೇಳಿ, ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ? ಅಥವಾ ಮುಖ್ಯಮಂತ್ರಿಯಾಗಿದ್ದ ಬೊಮ್ಮಾಯಿ ಮಾತ್ರ ಹಿಂದೂ ವಿರೋಧಿಯೋ ಎಂದು ಪ್ರಶ್ನಿಸಿದ್ದಾರೆ.
ನಮಗೆ ಜನರ ಧಾರ್ಮಿಕ ನಂಬಿಕೆಯ ಜೊತೆಗೆ ಹೈನುಗಾರರ ಬದುಕು ಮುಖ್ಯ. ಹೀಗಾಗಿ ನಾಡಿನ ರೈತರ ಹಿತದೃಷ್ಟಿಯಿಂದ ನಾವು ಕೇಳುವ ದರ ನೀಡಲು ತಿರುಪತಿ ದೇವಾಲಯದವರು ಒಪ್ಪುವುದಾದರೆ ತುಪ್ಪ ಪೂರೈಸಲು ನಮಗೆ ಯಾವ ಸಮಸ್ಯೆಗಳಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ