ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ
ಉಡುಪಿ ಕಾಲೇಜು ವಿಡಿಯೋ ಪ್ರಕರಣ ಕುರಿತು ಚರ್ಚೆ ಸಾಧ್ಯತೆ
ಕಾಪು ತಾಲೂಕು ಪಡುಬಿದ್ರೆ ಬೀಚ್ ಗೆ ಭೇಟಿ ನೀಡಲಿರುವ ಸಿಎಂ
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾಗುತ್ತಿದ್ದಾರೆ. ಇಂದು ನಡೆಯುವ ಕೆಡಿಪಿ ಸಭೆಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಸಿಎಂ ಜೊತೆ ಕಾಣಿಸಿಕೊಳ್ಳಲಿದ್ದಾರೆ.
ಉಡುಪಿಯ ಮಣಿಪಾಲದಲ್ಲಿರುವ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಲಿದೆ. ಈ ಸಮಯದಲ್ಲಿ ಸದ್ಯ ರಾಜ್ಯದಲ್ಲೇ ಚರ್ಚೆಯಲ್ಲಿರುವ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಪ್ರಕರಣ ಕುರಿತಾಗಿ ಚರ್ಚಿಸಲಿದ್ದಾರೆ ಎನ್ನಲಾಗಿದೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಡುಪಿಯ ಐದು ಬಿಜೆಪಿ ಶಾಸಕರು ಕೂಡ ಭಾಗಿಯಾಗಲಿದ್ದು, ಕಾಲೇಜಿನ ವಿಡಿಯೋ ಪ್ರಕರಣ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ.
ಇದರ ಜೊತೆಗೆ ಸಿಎಂ ಸಿದ್ದರಾಮಯ್ಯ ಉಡುಪಿಯಲ್ಲಿ ಮುಂಗಾರು ಮಳೆ ಅಬ್ಬರ ಹಾನಿ ಕುರಿತಂತೆ ಚರ್ಚೆ ನಡೆಸಲಿದ್ದಾರೆ. ಉಡುಪಿ ಜಿಲ್ಲೆಯ ಅಭಿವೃದ್ಧಿ ಕುರಿತಂತೆ ಸಭೆಯಲ್ಲಿ ಚರ್ಚಿಸುವ ನಿರೀಕ್ಷೆಯಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಪು ತಾಲೂಕು ಪಡುಬಿದ್ರೆ ಬೀಚ್ ಗೆ 11.30 ಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12:30ಕ್ಕೆ ನಡೆಯಲಿರುವ ಪ್ರಗತಿ ಪರಿಶೀಲಿಸುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಜಿಲ್ಲೆಯಾದ್ಯಂತ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಇವತ್ತು CM ಸಿದ್ದರಾಮಯ್ಯ ಉಡುಪಿಗೆ ಭೇಟಿ ನೀಡ್ತಿರೋ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ರಸ್ತೆಗೆ ತೇಪೆ ಹಾಕುವ ಕಾರ್ಯ ನಡೆದಿದೆ. ಜಿಲ್ಲೆಯಲ್ಲಿ ಮಳೆ ಬರುವ ಕೆಲ ದಿನಗಳ ಮೊದಲು ಹೆದ್ದಾರಿಯ ಕೆಲ ಕಡೆಗಳಲ್ಲಿ ಮರು ಡಾಂಬರೀಕರಣ ಮಾಡಲಾಗಿತ್ತು. ಇತ್ತೀಚಿಗೆ ಸುರಿದ ಭಾರೀ ಮಳೆಗೆ ಹೆದ್ದಾರಿ ಹಾಗೂ ಒಳ ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದವು..… pic.twitter.com/5sOrYA1cAZ
— NewsFirst Kannada (@NewsFirstKan) August 1, 2023
ಸಿಎಂ ಭೇಟಿ ಹಿನ್ನಲೆ ರಸ್ತೆಗೆ ತೇಪೆ
ಇವತ್ತು ಸಿಎಂ ಸಿದ್ದರಾಮಯ್ಯ ಉಡುಪಿಗೆ ಭೇಟಿ ನೀಡ್ತಿರೋ ಹಿನ್ನಲೆಯಲ್ಲಿ ತರಾತುರಿಯಲ್ಲಿ ರಸ್ತೆಗೆ ತೇಪೆ ಹಾಕುವ ಕಾರ್ಯ ನಡೆದಿದೆ.
ಉಡುಪಿ ಜಿಲ್ಲೆಯಲ್ಲಿ ಮಳೆ ಬರುವ ಕೆಲ ದಿನಗಳ ಮೊದಲು ಹೆದ್ದಾರಿಯ ಕೆಲ ಕಡೆಗಳಲ್ಲಿ ಮರು ಡಾಂಬರೀಕರಣ ಮಾಡಲಾಗಿತ್ತು. ಆದರೆ ಇತ್ತೀಚಿಗೆ ಸುರಿದ ಭಾರೀ ಮಳೆಗೆ ಹೆದ್ದಾರಿ ಹಾಗೂ ಒಳ ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದವು. ಇದರಿಂದ ವಾಹನ ಸವಾರರು ಕಷ್ಟ ಪಟ್ಟು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೇ ಸಾರ್ವಜನಿಕ ವಲಯದಲ್ಲೂ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆಗ ಈ ಬಗ್ಗೆ ಗಮನ ಕೊಡದ ಅಧಿಕಾರಿಗಳು ಈಗ ಸಿದ್ದರಾಮಯ್ಯ ಭೇಟಿ ಹಿನ್ನೆಲೆ ಕಾಟಾಚಾರಕ್ಕೆ ರಸ್ತೆಗೆ ಸಿಮೆಂಟ್ ಮಿಶ್ರಿತ ಜಲ್ಲಿ ತುಂಬಿ ತೇಪೆ ಹಾಕಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ