/newsfirstlive-kannada/media/post_attachments/wp-content/uploads/2024/12/TMK_CM_2.jpg)
ಸಿಎಂ ಸಿದ್ದರಾಮಯ್ಯ ತುಮಕೂರಿನಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತು ವಿತರಣೆ ನೆಪದಲ್ಲಿ ಸ್ವಾಭಿಮಾನಿ ಸಮಾವೇಶಕ್ಕೆ ಸಿದ್ಧತೆ ನಡೀತಿದೆ. ಸರ್ಕಾರಿ ದುಡ್ಡಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಲಿದೆ ಎಂದು ಬಿಜೆಪಿ-ಜೆಡಿಎಸ್ ಟೀಕಿಸಿವೆ.
ಇಂದು ತುಮಕೂರಿನಲ್ಲಿ ಸಿದ್ದರಾಮಯ್ಯರಿಂದ ಬೃಹತ್ ಕಾರ್ಯಕ್ರಮ
ಕಾಂಗ್ರೆಸ್​ನ ಶಕ್ತಿ ಪ್ರದರ್ಶನಕ್ಕೆ ಕಲ್ಪತರು ನಾಡು ತುಮಕೂರು ಸಜ್ಜಾಗಿದೆ. ಇವತ್ತು ಸಿಎಂ ಸಿದ್ದರಾಮಯ್ಯ ತುಮಕೂರಿಗೆ ಭೇಟಿ ನೀಡಲಿದ್ದು, ಸವಲತ್ತು ವಿತರಣೆ ನೆಪದಲ್ಲಿ ಕಾಂಗ್ರೆಸ್ ಸ್ವಾಭಿಮಾನಿ ಸಮಾವೇಶದ ಕಹಳೆ ಮೊಳಗಿಸಲಿದ್ದಾರೆ.
/newsfirstlive-kannada/media/post_attachments/wp-content/uploads/2024/12/TMK_CM.jpg)
ತುಮಕೂರಿನ ಸರ್ಕಾರಿ ಜೂನಿಯರ್​ ಕಾಲೇಜು ಮೈದಾನದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10.45ಕ್ಕೆ ತುಮಕೂರು ಗ್ರಾಮಾಂತರದಲ್ಲಿ 150 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್​ ಸ್ಟೇಡಿಯಂಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಬಳಿಕ ಜೂನಿಯರ್ ಕಾಲೇಜು ಮೈದಾನಕ್ಕೆ ಆಗಮಿಸಲಿದ್ದು, ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನಲೆ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದ್ದು, ತುಮಕೂರಿನಲ್ಲಿ ಕಾಂಗ್ರೆಸ್​ ಬಾವುಟಗಳು ರಾರಾಜಿಸುತ್ತಿವೆ.
ಬಿಜೆಪಿ ಪಾದಯಾತ್ರೆಗೆ ಸಡ್ಡು
ಮೇಲ್ನೋಟಕ್ಕೆ ಇದು ಸವಲತ್ತು ವಿತರಣೆ ಕಾರ್ಯಕ್ರಮ ಎನಿಸಿದರೂ, ಮತ್ತೊಂದು ಕಡೆ ಇದು ಸಿದ್ದರಾಮಯ್ಯರ ಸ್ವಾಭಿಮಾನಿ ಸಮಾವೇಶ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಮುಡಾ ಹಗರಣದ ಆರೋಪ ಹೊತ್ತ ಸಿಎಂ ಸಿದ್ದರಾಮಯ್ಯ ಬಿಜೆಪಿ ಪಾದಯಾತ್ರೆಗೆ ಸೆಡ್ಡು ಹೊಡೆಯಲು ಪ್ರತಿ ಜಿಲ್ಲೆಗೂ ಪ್ರವಾಸ ಮಾಡೋದಾಗಿ ಹೇಳಿದ್ರು. ಇದರ ಭಾಗವಾಗಿ ಈ ಸಮಾವೇಶ ಎಂದು ಬಿಜೆಪಿ ಟೀಕಿಸಿದೆ.
ಇದನ್ನೂ ಓದಿ: Fengal Cyclone; ಬೆಟ್ಟದಿಂದ ಮನೆಗಳ ಮೇಲೆ ಉರುಳಿದ ಬೃಹತ್​ ಬಂಡೆಗಳು.. ಮಕ್ಕಳು ಸಿಲುಕಿರುವ ಶಂಕೆ
/newsfirstlive-kannada/media/post_attachments/wp-content/uploads/2024/12/TMK_CM_1.jpg)
ಕಾಂಗ್ರೆಸ್ ಸಮಾವೇಶಕ್ಕೆ ಸರ್ಕಾರಿ ದುಡ್ಡು ಎಂದು ಮೈತ್ರಿ ಪಕ್ಷದ ನಾಯಕರು ಖಂಡಿಸಿದ್ದಾರೆ. ಮತ್ತೊಂದೆಡೆ ಸಿಎಂಗೆ ಇವತ್ತು ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ಅದೇನೆ ಇರಲಿ.. ಇವತ್ತು ಕಲ್ಪತರು ನಾಡು ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್​ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ಧವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us