ಜೈ ಹಿಂದ್.. ಯೋಧರ ಕುಟುಂಬ, ನಿವೃತ್ತ ಯೋಧರ ಕಲ್ಯಾಣಕ್ಕೆ ಸಿದ್ದರಾಮಯ್ಯ ಮಹತ್ವದ ಘೋಷಣೆ

author-image
admin
Updated On
ಜೈ ಹಿಂದ್.. ಯೋಧರ ಕುಟುಂಬ, ನಿವೃತ್ತ ಯೋಧರ ಕಲ್ಯಾಣಕ್ಕೆ ಸಿದ್ದರಾಮಯ್ಯ ಮಹತ್ವದ ಘೋಷಣೆ
Advertisment
  • ಸೈನಿಕರು, ರೈತರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು
  • ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ರಾಜಿ ಆಗಬಾರದು
  • ನೀವೆಲ್ಲಾ ದೇಶದ ಜೊತೆ ಇದ್ದೀರಾ ನಾವೆಲ್ಲಾ ನಿಮ್ಮ ಜೊತೆ ಇರ್ತೇವೆ

ಬೆಂಗಳೂರು: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಗರದ ಟೌನ್ ಹಾಲ್‌ನಲ್ಲಿ ಬೃಹತ್ "ಜೈ ಹಿಂದ್ ಸಭಾ" ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋಧ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನ ಪುರಸ್ಕರಿಸಿ ಸಿಎಂ ಮಾತನಾಡಿದರು.

publive-image

ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ. ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಸಿದ್ದರಾಮಯ್ಯ ಶ್ಲಾಘಿಸಿದರು.

ಸಿಎಂ ಮಹತ್ವದ ಘೋಷಣೆ
ಇದೇ ಸಂದರ್ಭದಲ್ಲಿ ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

publive-image

ನಮ್ಮ ಸೈನಿಕರು ಪಹಲ್ಗಾಮ್ ಘಟನೆ ಆದ ಮೇಲೆ ಉಗ್ರರ ನೆಲೆಗಳನ್ನ ಪತ್ತೆ ಹಚ್ಚಿ ಧ್ವಂಸ ಮಾಡಿದ್ದಾರೆ. ಇದು ಇಡೀ ಭಾರತದ ಹೆಮ್ಮೆಯ ವಿಚಾರ. ಶಿಷ್ಟರ ರಕ್ಷಣೆ ದುಷ್ಟರ ಸಂಹಾರದ ರೀತಿಯಲ್ಲಿ ಉಗ್ರರ ತಾಣಗಳನ್ನ ಗುರುತಿಸಿ ಧ್ವಂಸ ಮಾಡಿದ್ದಾರೆ.

ಇದನ್ನೂ ಓದಿ: ಮತ್ತೆ ಕೋರ್ಟ್​ ಮೆಟ್ಟಿಲೇರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಈಗ ಏನಾಯ್ತು..? 

ನಾಡಿನ ವೀರ ಮಾತೆಯರು ದೇಶ ಕಾಯುವವರಿಗೆ ಜನ್ಮ ಕೊಟ್ಟಿದ್ದೇ ಪುಣ್ಯ. ಸೈನಿಕರ ಕಲ್ಯಾಣ ಮಂಡಳಿ ರಚನೆಗೆ ಎಲ್ಲಾ ಪ್ರಯತ್ನ ಮಾಡ್ತೇವೆ. ನೀವೆಲ್ಲಾ ದೇಶದ ಜೊತೆ ಇದ್ದೀರಾ ನಾವೆಲ್ಲಾ ನಿಮ್ಮ ಜೊತೆ ಇರ್ತೇವೆ ಎಂದ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment