/newsfirstlive-kannada/media/post_attachments/wp-content/uploads/2025/02/METRO_CM.jpg)
2025-26ನೇ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ನಿರೀಕ್ಷೆಯಂತೆ ರಾಜಧಾನಿ ಬೆಂಗಳೂರಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಬೆಂಗಳೂರು ನಗರದ ಮೂಲ ಸೌಕರ್ಯ ಅಭಿವೃದ್ಧಿಗೆ 7 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.
ಪ್ರಮುಖವಾಗಿ ದೇವನಹಳ್ಳಿಯವರೆಗೆ ಮೆಟ್ರೋ ಜಾಲ ವಿಸ್ತರಿಸುವುದಕ್ಕೆ ಯೋಜನೆ ರೂಪಿಸಲಾಗುತ್ತಿದೆ. ನಮ್ಮ ಮೆಟ್ರೋ 3ನೇ ಹಂತದ ಯೋಜನೆಯೊಂದಿಗೆ ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ 8,916 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ.
ಬೆಂಗಳೂರಿನ ವಿವಿಧೆಡೆ 40.50 ಕಿಲೋ ಮೀಟರ್ ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣ. ಕಾಲುವೆ ಬಫರ್ ಪ್ರದೇಶ ಬಳಸಿ 300 ಕಿ.ಮೀ. ಹೆಚ್ಚುವರಿ ರಸ್ತೆ ಜಾಲ ವಿಸ್ತರಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ 3 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಅತಿಥಿ ಶಿಕ್ಷಕರಿಗೆ ಸಿದ್ದರಾಮಯ್ಯ ಗುಡ್ನ್ಯೂಸ್.. ಬಿಸಿಯೂಟ ಕಾರ್ಯಕರ್ತೆಯರಿಗೂ ಸಿಹಿಸುದ್ದಿ..!
ಉತ್ತರ-ದಕ್ಷಿಣ, ಪೂರ್ವ-ಪಶ್ಚಿಮ ಟನಲ್ ಕಾರಿಡಾರ್ಗೆ 19 ಸಾವಿರ ಕೋಟಿ ರೂಪಾಯಿ ಮತ್ತು 660 ಕೋಟಿ ರೂ. ವೆಚ್ಚದಲ್ಲಿ ಬಿಬಿಎಂಪಿ ವ್ಯಾಪ್ತಿಯ 460 ಕಿ.ಮೀ ಆರ್ಟೀರಿಯಲ್ ರಸ್ತೆ ಜಾಲ ಅಭಿವೃದ್ಧಿಪಡಿಸಲಾಗುವುದು. 120 ಕಿ.ಮೀ. ಉದ್ದದ ಫ್ಲೈಓವರ್, ಗ್ರೇಡರ್ ಸಪರೇಟರ್ ನಿರ್ಮಾಣ, ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ 1800 ಕೋಟಿ ವೆಚ್ಚದಲ್ಲಿ 21 ಯೋಜನೆ ಕೈಗೆತ್ತಿಗೊಳ್ಳಲಾಗುತ್ತಿದೆ. ವಾಹನ ದಟ್ಟನೆ ನಿವಾರಣೆಗೆ ಸಿಗ್ನಲ್ ಫ್ರೀ ಕಾರಿಡಾರ್ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ.
ಬೆಂಗಳೂರಿಗೆ ಬಂಪರ್ ಕೊಡುಗೆ!
1. ನಮ್ಮ ಮೆಟ್ರೋ ಹಂತ-3 ಯೋಜನೆಯೊಂದಿಗೆ 8916 ಕೋಟಿ ರೂಪಾಯಿ ವೆಚ್ಚದಲ್ಲಿ 40.50 ಕಿಮೀ ಉದ್ದದ ಡಬಲ್ ಡೆಕ್ಕರ್ ಫ್ಲೈ ಓವರ್ ರಸ್ತೆ ನಿರ್ಮಾಣ
2. ಕಾಲುವೆಯ ಬಫರ್ ಪ್ರದೇಶವನ್ನು ಬಳಸಿಕೊಂಡು 3 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 300 ಕಿಮೀ ಹೆಚ್ಚುವರಿ ರಸ್ತೆ ಜಾಲ ಅಭಿವೃದ್ಧಿ
3. ಬಿಬಿಎಂಪಿ ವ್ಯಾಪ್ತಿಯಲ್ಲಿನ 460 ಕಿಮೀ ಆರ್ಟಿರಿಯಲ್ ಮತ್ತು ಸಬ್ ಅರ್ಟಿರಿಯಲ್ ರಸ್ತೆ ಜಾಲ 660 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ
4. ನಗರದಲ್ಲಿ 120 ಕಿಮೀ ಉದ್ದದ ಫ್ಲೈ ಓವರ್ ಹಾಗೂ ಗ್ರೇಡ್ ಸಪರೇಟರ್ ನಿರ್ಮಾಣ.
5. ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿಯಲ್ಲಿ 2024-25ರಲ್ಲಿ ಅನುಮೋದನೆಗೊಂಡ 21 ಯೋಜನೆಗಳನ್ನು 1800 ಕೋಟಿ ರೂಪಾಯಿ ಮೊತ್ತದಲ್ಲಿ ಅನುಷ್ಠಾನ.
6. ಬೆಂಗಳೂರು ಅಂತರಾಷ್ಟ್ರೀಯ ಆರೋಗ್ಯ ಮಾನದಂಡಗಳ ನಗರವನ್ನಾಗಿ ಮಾಡಲು, ಬ್ರ್ಯಾಂಡ್ ಬೆಂಗಳೂರು ಅಭಿಯಾನದ ಮುಂದಿನ ಮೂರು ವರ್ಷಗಳಲ್ಲಿ 413 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರ ಆರೋಗ್ಯ ಯೋಜನೆ ಜಾರಿ.
7. ಹವಾಮಾನ ವೈಪರೀತ್ಯ ಪರಿಣಾಮವಾಗಿ ಬೆಂಗಳೂರು ಎದುರಿಸುತ್ತಿರುವ ಪ್ರವಾಹವನ್ನು ನಿಯಂತ್ರಿಸಲು ವ್ಯವಸ್ಥಿತ ಒಳಚರಂಡಿ ಜಾಲ ಮತ್ತುಎಸ್‌ಟಿಪಿಗಳ ನಿರ್ಮಿಸಲು ಬಿಬಿಎಂಪಿ ಹಾಗೂ ಜಲಮಂಡಳಿಗೆ 3 ಸಾವಿರ ಕೋಟಿ ಆರ್ಥಿಕ ನೆರವು.
8. 110 ಹಳ್ಳಿಗಳಿಗೆ ಕಾವೇರಿ 5 ನೇ ಹಂತ ನಿರು ಒದಗಿಸುವುದು.
9. ಹುಡ್ಕೋ ನೆರವಿನೊಂದಿಗೆ ಪೆರಿಫರಲ್ ರಿಂಗ್ ರೋಡ್ ಯೋಜನೆಯನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂದು ಮರು ನಾಮಕರಣಗೊಳಿಸುವುದು. ಜೊತೆಗೆ 27 ಸಾವಿರ ಕೋಟಿ ರೂಪಾಯಿ ಯೋಜನೆ ರೂಪಿಸುವುದು.
10. BWSSB ವತಿಯಿಂದ ಎಸ್‌ಟಿಪಿ ಘಟಕಗಳಲ್ಲಿ ತ್ಯಾಜ್ಯವನ್ನು ಬಳಸಿ ಬಯೋಗ್ಯಾಸ್ ಆಧಾರಿತ ಆದಾಯ ಮತ್ತು ಜಾರ್ಬನ್ ಕ್ರೆಡಿಟ್‌ಗಳ ಉಪಯೋಗವನ್ನು ಪಡೆಯಲು PPP ಮಾದರಿಯಲ್ಲಿ ಯೋಜನೆ.
11. ನಮ್ಮ ಮೆಟ್ರೋ ಪ್ರತಿ ದಿನ ಸರಾಸರಿ 8.5 ಲಕ್ಷ ಪ್ರಯಾಣಿಕರು ಒದಗಿಸುತ್ತಿದೆ. ಪ್ರಸ್ತುತ 68 ನಿಲ್ದಾಣಗಳನ್ನೊಳಗೊಂಡು 79.65 ಕಿಮೀ ಕಾರ್ಯಾಚರಣೆ ಮಾಡುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ 98.60 ಕಿಮೀ ಹೆಚ್ಚುವರಿ ಮಾರ್ಗಕ್ಕೆ ಜಾಲ ರೂಪಿಸಿ ಅಭಿವೃದ್ಧಿ ಪಡಿಸುವ ಗುರಿಯಿದ್ದು, ದೇವನಹಳ್ಳಿಯವರೆಗೆ ಮೆಟ್ರೋ ವಿಸ್ತರಣೆ.
12. ಕಾವೇರಿ 6 ನೇ ಹಂತ ಅನುಷ್ಠಾನಕ್ಕಾಗಿ ವಿಸ್ತೃತ ಯೋಜನೆ.
13. ಬ್ರ್ಯಾಂಡ್ ಬೆಂಗಳೂರು, ಹಸಿರು ಬೆಂಗಳೂರು ಕಾರ್ಯಕ್ರಮದಲ್ಲಿ ಬಿಡಿಎ ವತಿಯಿಂದ ಬೆಳ್ಳಂದೂರು ವರ್ತೂರು ಕೆರೆಗಳಿಗೆ ಪುನರುಜ್ಜೀವನ ಕಾಮಗಾರಿಗೆ 234 ಕೋಟಿ ರೂಪಾಯಿ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ