newsfirstkannada.com

ಬಿಜೆಪಿ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಪತ್ರ; ‘ದೆಹಲಿ ಚಲೋ’ಗೆ ಬೆಂಬಲ ನೀಡುವಂತೆ ಮನವಿ

Share :

Published February 6, 2024 at 11:28am

Update February 6, 2024 at 12:08pm

    ಕೇಂದ್ರ ಸರ್ಕಾರದಿಂದ ಅನುದಾನ ತಾರತಮ್ಯ

    ನಾಳೆ ದೆಹಲಿಯಲ್ಲಿ ಪ್ರತಿಭಟಿಸಲು ಮುಂದಾದ ರಾಜ್ಯ ಸರ್ಕಾರ

    ಜಂತರ್ ಮಂತರ್​ನಲ್ಲಿ ಭಾಗಿಯಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಅನುದಾನ ತಾರತಮ್ಯ ಮಾಡುವ ವಿಚಾರಕ್ಕೆ ರಾಜ್ಯ ಸರ್ಕಾರ ನಾಳೆ ದೆಹಲಿಯಲ್ಲಿ ಪ್ರತಿಭಟಿಸಲು ಮುಂದಾಗಿದೆ. ಈ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗುತ್ತಿದ್ದು, ಎಲ್ಲರೂ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಬಿಜೆಪಿ ಸೇರಿ ರಾಜ್ಯದ ಎಲ್ಲಾ ಸಂಸದರಿಗೆ ಪತ್ರ ಬರೆದಿದ್ದಾರೆ. ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುವ ಹೋರಾಟದಲ್ಲಿ ಭಾಗವಹಿಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ. ಈ ಹೋರಾಟಕ್ಕೆ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಇಷ್ಟು ಮಾತ್ರವಲ್ಲದೆ, ದೆಹಲಿಯ ನಡೆಯುವ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕೇಂದ್ರ ಹಣಕಾಸು ಸಚಿವರು ನಿರ್ಮಲಾ ಸೀತಾರಮನ್​ಗೂ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಇದರ ಜೊತೆಗೆ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಮಾಜಿ ಸಿಎಂ ಸದಾನಂದ ಗೌಡ ಮತ್ತು ಕೇಂದ್ರ ಸಚಿವರು, ಸಂಸದರು, ರಾಜ್ಯಸಭಾ ಸದಸ್ಯರಿಗೂ ಸಿಎಂ ಪತ್ರ ಬರೆದಿದ್ದಾರೆ.

ಆಹ್ವಾನ ಕೊಟ್ಟ ಡಿಕೆಶಿ

ನಿನ್ನೆ ದಿಢೀರನೆ ದೆಹಲಿಗೆ ಭೇಟಿ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್​, ರಾತ್ರೋರಾತ್ರಿ ಪ್ರತಿಭಟನೆ ನಡೆಸಲಿರುವ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ರು. ಪ್ರತಿಭಟನೆಗೆ ವೇದಿಕೆ ಹಾಕುವ ಬಗ್ಗೆ ಸಲಹೆ ಸೂಚನೆ ಕೊಟ್ರು. ಈ ವೇಳೆ ಸಂಸದ ಡಿ.ಕೆ.ಸುರೇಶ್​, ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್​ ಡಿ.ಕೆ.ಶಿವಕುಮಾರ್​ಗೆ ಸಾಥ್​ ನೀಡಿದ್ರು.

ಪ್ರತಿಭಟನಾ ನಡೆಸಲಿರುವ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿ ಡಿಸಿಎಂ ಡಿ.ಕೆ.ಶಿವಕುಮಾರ್​, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು. ಇದು‌ ಸರ್ಕಾರದ ಹೋರಾಟ, ಕಾಂಗ್ರೆಸ್, ಬಿಜೆಪಿಗೆ ಸಂಬಂಧವಿಲ್ಲ. ಕೇಂದ್ರದ ಗಮನ ಸೆಳೆಯಲು ಹೋರಾಟ ಮಾಡುತ್ತಿದ್ದೇವೆ. ನಮ್ಮ ಅನುದಾನ ನಮ್ಮ ಹಕ್ಕು, ನಮಗೆ ಸಿಗಬೇಕಾದ ಪಾಲು ಕೊಡಿಸುವುದು ನಮ್ಮ ಕರ್ತವ್ಯ. ಕೇಂದ್ರ ಸರ್ಕಾರದ ಬಳಿ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ನಮ್ಮ ಸರ್ಕಾರ ಮತ್ತು ನಾವು ಜನರ ಧ್ವನಿ. ಇದು ನಮ್ಮ ಧ್ವನಿಗಿಂತ ಜನರ ಧ್ವನಿಯಾಗಿದೆ. ನಮ್ಮ ತೆರಿಗೆ ನಮ್ಮ ಹಕ್ಕು. ನಮ್ಮ ನಾಡನ್ನು ನಾವು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ಕನ್ನಡದ ಸ್ವಾಭಿಮಾನದ ಪ್ರಶ್ನೆಯಾಗಿದೆ. ಬೇರೆ ರಾಜ್ಯಕ್ಕೆ ಎಷ್ಟು ಕೊಟ್ರಿ, ಬಿಟ್ರಿ ಚರ್ಚೆ ಮಾಡಲ್ಲ. ನಾವು ಎಷ್ಟು ಟ್ಯಾಕ್ಸ್​ ಕಟ್ಟುತ್ತಿದ್ದೇವೆ ಅದರಲ್ಲಿ ಅರ್ಧ ಕೊಡ್ರಿ ಸಾಕು.

ಡಿ.ಕೆ.ಶಿವಕುಮಾರ್​, ಡಿಸಿಎಂ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಿಜೆಪಿ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಪತ್ರ; ‘ದೆಹಲಿ ಚಲೋ’ಗೆ ಬೆಂಬಲ ನೀಡುವಂತೆ ಮನವಿ

https://newsfirstlive.com/wp-content/uploads/2024/01/Siddaramaiah-5.jpg

Load More