newsfirstkannada.com

‘ನಾಳೆ ನಾನು ರಾಮ ಮಂದಿರ ಉದ್ಘಾಟನೆಗೆ ಹೋಗುತ್ತೇನೆ, ಆದರೆ..’- ಸಿಎಂ ಸಿದ್ದರಾಮಯ್ಯ

Share :

Published January 21, 2024 at 5:23pm

  ನಾಳೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ!

  ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

  ಕರ್ನಾಟಕದಲ್ಲಿ ಸರ್ಕಾರಿ ರಜೆ ಇಲ್ಲ ಎಂದು ಸಿಎಂ ಸ್ಪಷ್ಟನೆ

ತುಮಕೂರು: ಇಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆದ ಶಿವಕುಮಾರ ಸ್ವಾಮೀಜಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ರು. ಈ ವೇಳೆ ಮಾತಾಡಿದ ಅವರು ನಾಳೆ ಎಲ್ಲಾ ಮುಜರಾಯಿ ಇಲಾಖೆ ದೇವಸ್ಥಾನದಲ್ಲಿ ಪೂಜೆ ನಡೆಯಲಿದೆ ಎಂದರು.

ಇನ್ನು, ನಾಳೆ ಸರ್ಕಾರ ರಜೆ ಘೋಷಣೆ ಮಾಡೋದಿಲ್ಲ. ನನಗೆ ಮಹಾದೇಪುರದಲ್ಲಿ ನಿರ್ಮಾಣ ಆಗಿರೋ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಿದ್ದಾರೆ, ಅಲ್ಲಿಗೆ ಹೋಗುತ್ತೇನೆ ಎಂದಿದ್ದಾರೆ ಸಿದ್ದರಾಮಯ್ಯ.

ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆ ಹೊಸ ರಾಮಮಂದಿರದ ಗರ್ಭಗುಡಿಯಲ್ಲಿ ಇಂದು ರಾತ್ರಿ ಹಳೆಯ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮಾಡಲಿದ್ದಾರೆ. ಅಯೋಧ್ಯೆಯ ರಾಮಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನೇತೃತ್ವದಲ್ಲಿ ಶಯನ ಪೂಜೆಯೊಂದಿಗೆ ರಾಮಲಲ್ಲಾ ಮೂರ್ತಿಯನ್ನ ಭವ್ಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲಿದ್ದಾರೆ. ಹಳೆಯ ರಾಮಲಲ್ಲಾ ಮೂರ್ತಿಯ ಜೊತೆಗೆ ಸೀತೆ, ಲಕ್ಷ್ಮಣ್, ಭರತ, ಶತ್ರುಘ್ನ ಮೂರ್ತಿಗಳು ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ನಾಳೆ ನಾನು ರಾಮ ಮಂದಿರ ಉದ್ಘಾಟನೆಗೆ ಹೋಗುತ್ತೇನೆ, ಆದರೆ..’- ಸಿಎಂ ಸಿದ್ದರಾಮಯ್ಯ

https://newsfirstlive.com/wp-content/uploads/2024/01/Siddaramaiah_CM.jpg

Load More