/newsfirstlive-kannada/media/post_attachments/wp-content/uploads/2024/01/KL_Rahul_Test.jpg)
ಟೀಮ್ ಇಂಡಿಯಾ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಮೇಲೆ ಫುಲ್ ಫೋಕಸ್ ಮಾಡುತ್ತಿದೆ. ಇದಕ್ಕಾಗಿ ಭಾರತ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ಗೌತಮ್ ಗಂಭೀರ್ ಭಾರೀ ತಯಾರಿ ನಡೆಸಿಕೊಂಡಿದ್ದಾರೆ. ಹಾಗಾಗಿ ಟೀಮ್ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಭಾರೀ ರೋಚಕತೆಯಿಂದ ಕೂಡಿರಲಿದೆ.
ಮುಂದಿನ ತಿಂಗಳು ಸೆಪ್ಟೆಂಬರ್ 19ನೇ ತಾರೀಕಿನಿಂದ ಭಾರತ ಮತ್ತು ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಶುರುವಾಗಲಿದೆ. ಇದು ಅಕ್ಟೋಬರ್ 1 ರವರೆಗೆ ನಡೆಯಲಿದೆ. ಬಾಂಗ್ಲಾದೇಶ ವಿರುದ್ಧ ಗೆದ್ದರೆ ಟೀಮ್ ಇಂಡಿಯಾ ನೇರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಲಿದೆ.
ಇನ್ನು, ಈ ಮಹತ್ವದ ಸರಣಿಗಾಗಿ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಮುಖ್ಯ ಗೌತಮ್ ಗಂಭೀರ್ ಮಹತ್ವದ ಪ್ಲಾನ್ ಮಾಡಿಕೊಂಡಿದ್ದಾರೆ. ಬಾಂಗ್ಲಾದೇಶದ ವಿರುದ್ಧ ಸರಣಿಗಾಗಿ ಭಾರತ ಟೆಸ್ಟ್ ತಂಡದಲ್ಲಿ ಭಾರೀ ಬದಲಾವಣೆ ಮಾಡಲಿದ್ದಾರೆ. ವಿಶೇಷ ಎಂದರೆ ಭಾರತದ ಟೆಸ್ಟ್ ತಂಡದಲ್ಲಿ ಕೆ.ಎಲ್ ರಾಹುಲ್‌ಗೆ ಮಣೆ ಹಾಕಲಿದ್ದಾರೆ.
ರಾಹುಲ್‌ಗೆ ಅವಕಾಶ ನೀಡಲು ನಿರ್ಧಾರ
ಕೆ.ಎಲ್ ರಾಹುಲ್ ಅತ್ಯಂತ ಯಶಸ್ವಿ ಟೆಸ್ಟ್ ಕ್ರಿಕೆಟರ್. ಇವರು 6ನೇ ಕ್ರಮಾಂಕದವರೆಗೂ ಬ್ಯಾಟಿಂಗ್ ಮಾಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಜತೆಗೆ ಕೆಎಲ್ ರಾಹುಲ್ ವಿಕೆಟ್ ಕೀಪರ್ ಪಾತ್ರವನ್ನು ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಒಂದು ಕಾರಣಕ್ಕೆ ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್‌ಗೆ ಖಂಡಿತವಾಗಿ ಅವಕಾಶ ನೀಡಬಹುದು.
ಕೆಎಲ್ ರಾಹುಲ್ ಬ್ಯಾಟಿಂಗ್, ವಿಕೆಟ್ ಕೀಪಿಂಗ್ ಮತ್ತು ಫೀಲ್ಡಿಂಗ್‌ನಲ್ಲಿ ಅತ್ಯಂತ ಪ್ರವೀಣರು. ವಿಕೆಟ್ ಕೀಪಿಂಗ್ನಲ್ಲಿ ರಾಹುಲ್ ಕ್ಯಾಚಿಂಗ್ ಮತ್ತು ಸ್ಟಂಪಿಂಗ್ ಕೂಡ ಅತ್ಯುತ್ತಮವಾಗಿದೆ. ಭಾರತ ಪರ ರಾಹುಲ್ 50 ಟೆಸ್ಟ್ ಪಂದ್ಯಗಳಲ್ಲಿ 34.08 ಸರಾಸರಿಯಲ್ಲಿ 2863 ರನ್ ಗಳಿಸಿದ್ದಾರೆ. ಈ ಪೈಕಿ 8 ಶತಕ ಮತ್ತು 14 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಇವರ ಹೈಎಸ್ಟ್ ಸ್ಕೋರ್ 199 ರನ್ ಆಗಿದೆ.
ಇದನ್ನೂ ಓದಿ:‘ಆರ್ಸಿಬಿ ಮುಂದಿನ ಕ್ಯಾಪ್ಟನ್ ಇವರೇ’- ಸ್ಫೋಟಕ ಸುಳಿವು ಕೊಟ್ಟ ಬ್ಯಾಟಿಂಗ್ ಕೋಚ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ