/newsfirstlive-kannada/media/post_attachments/wp-content/uploads/2024/06/Kohli_Rohit.jpg)
ಇತ್ತೀಚೆಗೆ ನಡೆದ ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಗೆದ್ದ ನಂತರ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಇದರ ಮಧ್ಯೆ ರೋಹಿತ್ ಮತ್ತು ಕೊಹ್ಲಿ 2028ರ ಸಾಲಿನ ಒಲಿಂಪಿಕ್ಸ್ ಕ್ರೀಡಾಕೂಟ ಆಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಮಾತಾಡಿರೋ ಟೀಮ್ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ನಾವು ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದ್ದೇವೆ. ಮುಂದೆ 2028ರ ಸಾಲಿನ ಒಲಿಂಪಿಕ್ಸ್ ಕ್ರೀಡಾಕೂಟ ಎದುರಾಗಲಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ರೀತಿಯ ಯುವ ಆಟಗಾರರು 2028ರ ಸಾಲಿನ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದರು.
Rahul Dravid hinted that Rohit & Virat might play in the 2028 Olympics pic.twitter.com/2nTXk8mZAk
— SUPRVIRAT (@ishantraj51) July 5, 2024
2028ರ ಒಲಿಂಪಿಕ್ಸ್ ಮೇಲೆ ಟೀಮ್ ಇಂಡಿಯಾ ಟಾರ್ಗೆಟ್!
ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ನಡೆಯಲಿರೋ 2028ರ ಸಾಲಿನ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಈಗಾಗಲೇ ಕ್ರಿಕೆಟ್ ಸೇರ್ಪಡೆಯಾಗಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಕ್ರಿಕೆಟ್ ಎಂಬ ಅತ್ಯುತ್ತಮ ಕ್ರೀಡೆಗೆ ಒಲಿಂಪಿಕ್ಸ್‌ನಲ್ಲಿ ವೇದಿಕೆ ಒದಗಿಸಲು ಅಸ್ತು ಎಂದಿದೆ. ಬರೋಬ್ಬರಿ 1 ಶತಮಾನದ ಬಳಿಕ ಕ್ರಿಕೆಟ್ ಒಲಿಂಪಿಕ್ಸ್‌ಗೆ ಕಮ್‌ಬ್ಯಾಕ್ ಮಾಡುತ್ತಿದೆ.
ಇದನ್ನೂ ಓದಿ:ಪ್ರಧಾನಿ ಮೋದಿ ಮುಂದೆ ಅಹಂಕಾರ ಇರಬಾರದು ಎಂದ ಕೊಹ್ಲಿ.. ಆಮೇಲೇನಾಯ್ತು?
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ