/newsfirstlive-kannada/media/post_attachments/wp-content/uploads/2024/11/JOB_COAL_INDIA.jpg)
ವಿಶ್ವದ ಏಕೈಕ ಅತಿದೊಡ್ಡ ಕಲ್ಲಿದ್ದಲು ಉತ್ಪಾದನಾ ಕಂಪನಿಯಾದ ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) ನಲ್ಲಿ ಉದ್ಯೋಗಗಳನ್ನು ಆಹ್ವಾನ ಮಾಡಲಾಗಿದೆ. ಭಾರತ ಸರ್ಕಾರದ ಸಚಿವಾಲಯದ ಅಡಿಯಲ್ಲಿ ಸಿಐಎಲ್ ಕಾರ್ಯನಿರ್ವಹಿಸುತ್ತಿದ್ದು ಕೋಲ್ಕತ್ತಾದಲ್ಲಿ ಕಾರ್ಪೊರೇಟ್ ಪ್ರಧಾನ ಕಚೇರಿಯನ್ನು ಹೊಂದಿದೆ. ಈ ಕಂಪನಿಯಲ್ಲಿ 2.25 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಸದ್ಯ ಇದೀಗ ಕೆಲ ಉದ್ಯೋಗಗಳನ್ನು ಕೋಲ್ ಇಂಡಿಯಾ ಲಿಮಿಟೆಡ್ ಭರ್ತಿ ಮಾಡುತ್ತಿದೆ.
ಮ್ಯಾನೇಜ್‌ಮೆಂಟ್ ಟ್ರೈನಿಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಉದ್ಯೋಗಗಳಿಗೆ ಅಪ್ಲೇ ಮಾಡಬಹುದಾಗಿದೆ. ಇನ್ನು ನಿಮಗೆ ಬೇಕಾದಂತಹ ವಿವರವಾದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಈ ಎಲ್ಲವನ್ನು ಸರಿಯಾಗಿ ಗಮನಿಸಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ coalindia.in ನಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.
ಹುದ್ದೆಯ ಹೆಸರು- ಮ್ಯಾನೇಜ್‌ಮೆಂಟ್ ಟ್ರೈನಿ (ಇ-2 ಗ್ರೇಡ್)
ಒಟ್ಟು ಹುದ್ದೆಗಳು- 640
ಕೆಲಸ ಮಾಡುವ ಸ್ಥಳ- ಭಾರತದ್ಯಾಂತ
ಸ್ಯಾಲರಿ-
- ತಿಂಗಳ ಸಂಬಳ- ಟ್ರೈನಿಯಲ್ಲಿ 50,000
- ಟ್ರೈನಿಂಗ್ ಮುಗಿದ ಮೇಲೆ 60,000- 1,80,000
ಇದನ್ನೂ ಓದಿ:ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನ.. ನಾಳೆ ಬಾಗಿಲು ಮುಚ್ಚಲಿರುವ ಆಡಳಿತ ಮಂಡಳಿ
ವಯಸ್ಸಿನ ಮಿತಿ- 30 ವರ್ಷದ ಒಳಗಿನ ಅಭ್ಯರ್ಥಿಗಳು
ವಯೋಮಿತಿ ಸಡಿಲಿಕೆ-
- ಒಬಿಸಿ- 3 ವರ್ಷಗಳು
- ಎಸ್ಸಿ, ಎಸ್ಟಿ- 5 ವರ್ಷಗಳು
- ವಿಶೇಷ ಚೇತನರು- 10 ವರ್ಷಗಳು
ಶೈಕ್ಷಣಿಕ ಅರ್ಹತೆ
ಬಿಇ, ಬಿಟೆಕ್, ಬಿಎಸ್ಸಿ, ಎಂಸಿಎ,
ಅರ್ಜಿ ಶುಲ್ಕ ಎಷ್ಟು ಇರುತ್ತೆ..?
ಸಾಮಾನ್ಯ ಅಭ್ಯರ್ಥಿಗಳು, ಒಬಿಸಿ- 1180 ರೂ.ಗಳು
ಎಸ್ಸಿ, ಎಸ್ಟಿ- ಶುಲ್ಕ ವಿನಾಯಿತಿ ನೀಡಲಾಗಿದೆ
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?
ಗೇಟ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಅನ್ನು 1:3 ಅಂತೆ ಸಿದ್ಧಪಡಿಸಲಾಗುತ್ತೆ.
ದಾಖಲಾತಿ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 28 ನವೆಂಬರ್ 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ