ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಏರಿಕೆ
19 KG ತೂಕದ ಸಿಲಿಂಡರ್‌ಗೆ 1,773 ರೂ.ನಿಂದ 1,780 ಏರಿಕೆ
ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
LPG Gas Cylinder Price hike: ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ. ಪರಿಣಾಮ ದೇಶದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 7 ರೂಪಾಯಿ ಏರಿಕೆ ಕಂಡಿದೆ. ಆದರೆ ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಸಿಲಿಂಡರ್ ಬೆಲೆಯಲ್ಲಿ ಪರಿಷ್ಕರಣೆಯ ನಂತರ ನವದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 7 ರೂಪಾಯಿ ಏರಿಕೆಯಾಗಿದೆ. ಪ್ರತಿ ಸಿಲಿಂಡರ್‌ಗೆ 1,773 ರೂಪಾಯಿ ಇದ್ದದ್ದು, ಈಗ 1,780 ರೂಪಾಯಿಗೆ ಹೆಚ್ಚಳವಾಗಿದೆ. ಮುಂಬೈನಲ್ಲಿ ಸಿಲಿಂಡರ್ ಬೆಲೆ 1,102.50 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,129 ರೂಪಾಯಿ ಆಗಿದೆ. ಚೆನ್ನೈನಲ್ಲಿ 1,118.50 ರೂಪಾಯಿ ಇದೆ.
ಕಳೆದ ತಿಂಗಳು ಜೂನ್‌ನಲ್ಲಿ ಕಮರ್ಷಿಯಲ್ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಲಾಗಿತ್ತು. ಇದೀಗ ಮತ್ತೆ ಏರಿಕೆ ಮಾಡಲಾಗಿದ್ದು, ಇಳಿಕೆ ಹಂತದಲ್ಲಿದ್ದ ದರ ಏರಿಕೆಯಾಗಿದೆ. ಇದರ ಪರಿಷ್ಕೃತ ದರವು ಜುಲೈ 1ರಿಂದಲೇ ಜಾರಿಗೆ ಬಂದಿದೆ. ಇನ್ನು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ ಹೀಗಾಗಿ ಜನ ನಿಟ್ಟುಸಿರು ಬಿಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ