/newsfirstlive-kannada/media/post_attachments/wp-content/uploads/2025/06/SIDDARAMAIAH-2-1.jpg)
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂಗಳಿಗೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಮೊದಲು ಸರ್ಕಾರ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂಗಳಿಗೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಮೊದಲು ಸರ್ಕಾರ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು. 10 ಲಕ್ಷ ರೂಪಾಯಿ ಸಾಕಾಗಲ್ಲ. ಸರ್ಕಾರ, ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂಬ ಆಗ್ರಹಗಳು ಕೇಳಿಬಂದಿದ್ದವು.
ಇದನ್ನೂ ಓದಿ: ಬೆಂಗಳೂರಲ್ಲಿ ಒಂದು ಪಾಪದ ಕೆಲಸ.. ಪತ್ನಿಯ ರುಂಡ ಕಡಿದು ಠಾಣೆಗೆ ಬಂದ ಪತಿ, ಕಂದಮ್ಮ ಅನಾಥ
ಜೂನ್ 4 ರಂದು ಆರ್ಸಿಬಿ ಚಿನ್ನಸ್ವಾಮಿ ಮೈದಾನದಲ್ಲಿ ವಿಕ್ಟರಿ ಪರೇಡ್ ಇಟ್ಟುಕೊಂಡಿತ್ತು. ಇದನ್ನು ವೀಕ್ಷಿಸಲು ಲಕ್ಷಾಂತರ ಆರ್ಸಿಬಿ ಅಭಿಮಾನಿಗಳು ಬಂದಿದ್ದರು. ಆಗ ನೂಕು, ನುಗ್ಗಲು ಸಂಭವಿಸಿ ಭೀಕರ ಕಾಲ್ತುಳಿತ ಸಂಭವಿಸಿತ್ತು.
ಈ ದುರಂತದಲ್ಲಿ ಒಟ್ಟು 11 ಆರ್ಸಿಬಿ ಅಭಿಮಾನಿಗಳು ಜೀವ ಕಳೆದುಕೊಂಡಿದ್ದಾರೆ. 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಗಾಯಗೊಂಡವರಿಗೆ ಸರ್ಕಾರ ಉಚಿತ ಚಿಕಿತ್ಸೆ ನೀಡುವ ಭರವಸೆ ನೀಡಿದೆ. ಇನ್ನು ಪ್ರಕರಣದ ತನಿಖೆಯನ್ನು ನಿವೃತ್ತ ಜಸ್ಟೀಸ್ ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ ಮಾಡಿದೆ. ಇನ್ನು ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ಗಳ ವಿಚಾರಣೆಯನ್ನು ಸಿಐಡಿಗೆ ನೀಡಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಒಂದು ಪಾಪದ ಕೆಲಸ.. ಪತ್ನಿಯ ರುಂಡ ಕಡಿದು ಠಾಣೆಗೆ ಬಂದ ಪತಿ, ಕಂದಮ್ಮ ಅನಾಥ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ