/newsfirstlive-kannada/media/post_attachments/wp-content/uploads/2024/07/TEAM_INDIAN-1.jpg)
ಇಂದಿನಿಂದ ಟೀಮ್ ಇಂಡಿಯಾ, ಬಾಂಗ್ಲಾದೇಶದ ನಡುವಿನ 5 ಪಂದ್ಯಗಳ ಟಿ20 ಸರಣಿ ಶುರುವಾಗಲಿದೆ. ಗ್ವಾಲಿಯರ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ ಮೊದಲ ಟಿ20 ಪಂದ್ಯ ನಡೆಯಲಿದೆ. ಈ ಮಧ್ಯೆ ಟೀಮ್ ಇಂಡಿಯಾಗೆ ಶಾಕಿಂಗ್ ನ್ಯೂಸ್ ಒಂದಿದೆ.
ಪಂದ್ಯಕ್ಕೂ ಮುನ್ನವೇ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಗಾಯಕ್ಕೆ ತುತ್ತಾಗಿದ್ದಾರೆ. ತೀವ್ರ ಗಾಯಕ್ಕೆ ತುತ್ತಾದ ಕಾರಣ ತಂಡದಿಂದಲೇ ಇವರು ಹೊರಬಿದ್ದಿದ್ದಾರೆ. ಗಾಯ ಮಾಡಿಕೊಂಡು ತಂಡದಿಂದ ಹೊರನಡೆದ ಪ್ಲೇಯರ್ ಮತ್ಯಾರು ಅಲ್ಲ ಶಿವಂ ದುಬೆ.
ದುಬೆ ಬದಲಿಗೆ ಯಾರು?
ಶಿವಂ ದುಬೆ ಬದಲಿಗೆ ನಿತೀಶ್ ಕುಮಾರ್ ರೆಡ್ಡಿ ಅಥವಾ ತಿಲಕ್ ವರ್ಮಾಗೆ ತಂಡದಲ್ಲಿ ಸ್ಥಾನ ಸಿಗಲಿದೆ. ತಿಲಕ್ ವರ್ಮಾ ಮುಂಬೈ ಇಂಡಿಯನ್ಸ್ ಪರ ಐಪಿಎಲ್ 2024ರಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಕಳೆದ ಆವೃತ್ತಿಯಲ್ಲಿ ಇವರು ಒಟ್ಟು 416 ರನ್ ಗಳಿಸಿದ್ದಾರೆ. ಇವರು ಭಾರತ ಪರ 16 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 336 ರನ್ ಗಳಿಸಿದ್ದಾರೆ. ಹಾಗಾಗಿ ಇವರಿಗೆ ಸ್ಥಾನ ನೀಡಬಹುದು. ಇನ್ನೊಂದೆಡೆ ಐಪಿಎಲ್‌ನಲ್ಲಿ ಅಬ್ಬರದ ಪ್ರದರ್ಶನ ನೀಡಿರೋ ನಿತೀಶ್ ಕುಮಾರ್ ರೆಡ್ಡಿ ಡೆಬ್ಯೂ ಮಾಡಬಹುದು. ಇವರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಬ್ಬರಿಸುವ ಸಾಮರ್ಥ್ಯ ಹೊಂದಿರುವ ಆಟಗಾರ.
ಅಸಲಿಗೆ ದುಬೆಗೆ ಆಗಿದ್ದೇನು?
ಇತ್ತೀಚಿಗೆ ವೆಸ್ಟ್ ಇಂಡೀಸ್ ಹಾಗೂ ಯುಎಸ್ನಲ್ಲಿ ನಡೆದ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಆಲ್‌ರೌಂಡರ್ ಶಿವಂ ದುಬೆ. ಕಳೆದ ಕೆಲವು ತಿಂಗಳುಗಳಿಂದ ಮಾತ್ರ ಶಿವಂ ದುಬೆ ಟೀಮ್ ಇಂಡಿಯಾ ಪರ ಆಡುತ್ತಿದ್ದಾರೆ. ಬಾಂಗ್ಲಾದೇಶದ ವಿರುದ್ಧದ ಪಂದ್ಯಕ್ಕೂ ಮುನ್ನ ಶಿವಂ ದುಬೆ ಅಭ್ಯಾಸದ ವೇಳೆ ಗಾಯಕ್ಕೆ ತುತ್ತಾಗಿದ್ದಾರೆ. ಇವರ ಗಾಯದಿಂದ ಟೀಮ್ ಇಂಡಿಯಾ ಬೌಲಿಂಗ್ ವಿಭಾಗಕ್ಕೆ ದೊಡ್ಡ ಪೆಟ್ಟು ಬಿದ್ದಿದೆ.
ಇದನ್ನೂ ಓದಿ:ಪಂದ್ಯಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಬಿಗ್ ಶಾಕ್; ತಂಡದಿಂದಲೇ ಸ್ಟಾರ್ ಆಲ್‌ರೌಂಡರ್ ಔಟ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ