/newsfirstlive-kannada/media/post_attachments/wp-content/uploads/2024/10/BBK-116.jpg)
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಭಾನುವಾರ ಗ್ರ್ಯಾಂಡ್ ಆಗಿ ಓಪನಿಂಗ್ ಕಂಡಿದೆ. ಹೊಸ ಅಧ್ಯಾಯದೊಂದಿಗೆ ಶುರುವಾದ ಬಿಗ್ಬಾಸ್ಗೆ ಕಂಟಕವೊಂದು ಎದುರಾಗಿದೆ.
ಹೌದು, ಮೊನ್ನೆಯಷ್ಟೇ ಬಹಳ ಅದ್ಧೂರಿಯಾಗಿ ಬಿಗ್ಬಾಸ್ ಸೀಸನ್ 11 ಓಪನಿಂಗ್ ಪಡೆದುಕೊಂಡಿತ್ತು. ಒಟ್ಟು 17 ಸ್ಪರ್ಧಿಗಳು ಬಿಗ್ಬಾಸ್ ಮನೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಅದರಲ್ಲೂ ಹೊಸ ಅಧ್ಯಾಯದೊಂದಿಗೆ ಶುರುವಾದ ಈ ಶೋನಲ್ಲಿ ಸ್ವರ್ಗ ಹಾಗೂ ನರಕ ಎಂಬ ಎರಡು ಕಾನ್ಸೆಪ್ಟ್ ಇಟ್ಟುಕೊಂಡಿದೆ. ಆದರೆ ಶುರುವಾಗಿ ಒಂದೇ ವಾರಕ್ಕೆ ಬಿಗ್ಬಾಸ್ ಶೋ ವಿರುದ್ಧ ವಕೀಲೆಯೊಬ್ಬರು ದೂರು ದಾಖಲಿಸಿದ್ದಾರೆ. ರಾಜ್ಯ ಮಹಿಳಾ ಆಯೋಗಕ್ಕೆ ವಕೀಲೆ ದೂರು ಕೊಟ್ಟಿದ್ದಾರೆ.
ಇದನ್ನೂ ಓದಿ:ಬಿಗ್ ಬಾಸ್ನಿಂದ ಚೈತ್ರಾರನ್ನು ಹೊರಗೆ ಹಾಕಿ, ಇಲ್ಲದಿದ್ರೆ ಕಾರ್ಯಕ್ರಮ ಸ್ಥಗಿತ ಮಾಡಿಸುತ್ತೇನೆ ಎಂದ ವಕೀಲ!
ದೂರಿನಲ್ಲಿ ಏನಿದೆ?
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರೋ ಹಾಗೂ ನಟ ಸುದೀಪ್ ಅವರು ನಿರೂಪಣೆ ಮಾಡುವ ಬಿಗ್ಬಾಸ್ ಸೀಸನ್ 11 ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಪುರುಷ ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ. ಬಿಗ್ಬಾಸ್ 11ರ ಕಾರ್ಯಕ್ರಮದಲ್ಲಿ ಸ್ವರ್ಗ ಮತ್ತು ನರಕ ಎಂಬ ಎರಡು ವಿಚಾರದ ಮೇಲೆ ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಭಾರತದ ನಾಗರಿಕರನ್ನು ಖಾಸಗಿ ವ್ಯಕ್ತಿಗಳು ಬಂಧನದಲ್ಲಿರಿಸುವ ಹಕ್ಕನ್ನು ಹೊಂದಿರುವುದಿಲ್ಲ. ಪ್ರಸ್ತುತ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮದಲ್ಲಿ ಪುರುಷ ಮತ್ತು ಮಹಿಳೆಯರನ್ನು ಒಂದು ಜೈಲಿನ ರೂಪದಲ್ಲಿರುವ ಬಂದಿಖಾನೆಯಂತಹ ಕೊಠಡಿಯಲ್ಲಿ ನೂರಾರು ಕ್ಯಾಮೆರಾಗಳಲ್ಲಿ ರೆಕಾರ್ಡ್ ಆಗುವಂತೆ ಅಕ್ರಮ ಬಂಧನದಲ್ಲಿ ಇರಿಸಲಾಗಿದೆ.
ಆ ಸ್ಪರ್ಧಿಗಳಿಗೆ ಕೇವಲ ಗಂಜಿಯನ್ನು ಆಹಾರವಾಗಿ ನೀಡಲಾಗುತ್ತಿರುವುದು ಸಂವಿಧಾನ ಪ್ರಕಾರ ನಾಗರಿಕರಿಗೆ ಪೌಷ್ಟಿಕ ಆಹಾರವನ್ನು ಕೊಡದಿರುವುದು ಅಪರಾಧವಾಗುತ್ತದೆ. ಅದರಲ್ಲೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಲಗುವ ವ್ಯವಸ್ಥೆ ನೀಡದೆ ಅವರನ್ನು ದೈಹಿಕ ಬಾದ ತೀರಿಸಿಕೊಳ್ಳಲು ಮತ್ತೊಬ್ಬರ ಅನುಮತಿ ಮೇರೆಗೆ ಶೌಚಾಲಯ ಉಪಯೋಗಿಸಲು ಬಲವಂತಕ್ಕೆ ಒಳಪಡಿಸುವುದು ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ. ಬಿಗ್ಬಾಸ್ 11ರ ಕಾರ್ಯಕ್ರಮದಲ್ಲಿ ಸ್ಪರ್ಧಿಗಳೊಂದಿಗೆ ಕಾನೂನು ಬದ್ಧವಾಗಿ ಒಪ್ಪಂದ ಮಾಡಿಕೊಂಡಿದ್ದು ಇಂತಹ ನಿರ್ಬಂಧಗಳನ್ನು ಹೇರುವುದು ಸಂವಿಧಾನ ಬಾಹಿರವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ