newsfirstkannada.com

BREAKING: ಮಾಜಿ ಸಚಿವ ಹೆಚ್‌.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು

Share :

Published May 13, 2024 at 6:36pm

Update May 13, 2024 at 6:42pm

    ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಹೆಚ್‌.ಡಿ ರೇವಣ್ಣ ಅವರ ಬಂಧನ

    ಜನಪ್ರತಿನಿಧಿ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ

    ಹೆಚ್‌.ಡಿ ರೇವಣ್ಣ ಪರ ಸೀನಿಯರ್ ಕೌನ್ಸಿಲ್ ಸಿ.ವಿ ನಾಗೇಶ್ ಹಾಜರು

ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಕಡೆಗೂ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

ಕಳೆದ ಮೇ 09ರಂದು ವಾದ, ಪ್ರತಿವಾದ ಆಲಿಸಿದ ನ್ಯಾಯಾಲಯ ಇಂದಿಗೆ ವಿಚಾರಣೆ ಮುಂದೂಡಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ಹೆಚ್‌.ಡಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೀತು. ಎಸ್ಐಟಿ ಪರ SPPಗಳಾದ ಜಯ್ನಾ ಕೋಠಾರಿ & ಅಶೋಕ್ ನಾಯ್ಕ್ ಹಾಜರಿದ್ರೆ, ರೇವಣ್ಣ ಪರ ಸಿ.ವಿ.ನಾಗೇಶ್ ಅವರು ವಾದ ಮಂಡಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್? ಪೆನ್‌ಡ್ರೈವ್ ಪ್ರಕರಣದ ತನಿಖೆ ಏನಾಗುತ್ತೆ? 

ಇವತ್ತು ಇಡೀ ದಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪೀಠ ಮಾಜಿ ಸಚಿವ ಹೆಚ್.​ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ. ಷರತ್ತು ಬದ್ಧ ಜಾಮೀನಿನಲ್ಲಿ ಪರ್ಸನಲ್ ಬಾಂಡ್ ಶ್ಯೂರಿಟಿ ನೀಡಲು ಸೂಚನೆ ನೀಡಲಾಗಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ದೇಶ ಬಿಟ್ಟು ಹೋಗದಂತೆ ಸೂಚಿಸಲಾಗಿದೆ.

ಮೈಸೂರು ಮೂಲದ ಮಹಿಳೆ ಕಿಡ್ನ್ಯಾಪ್ ಮಾಡಿರೋ ಆರೋಪ ಪ್ರಕರಣದಲ್ಲಿ ಹೆಚ್‌.ಡಿ ರೇವಣ್ಣ ಅವರು ಕಳೆದ ಆರು ದಿನಗಳಿಂದ ಜೈಲಲ್ಲಿದ್ದರು. ನಾಳೆ ನ್ಯಾಯಾಂಗ ಬಂಧನ ಅವಧಿ ಅಂತ್ಯ ಆಗುತ್ತಿರುವ ಹಿನ್ನೆಲೆಯಲ್ಲಿ ಜಾಮೀನಿಗಾಗಿ ರೇವಣ್ಣ ಕಾದು ಕುಳಿತಿದ್ದರು. ಕಡೇ ಕ್ಷಣದವರೆಗೂ ಬೇಲ್​ ನಿರೀಕ್ಷೆಯಲ್ಲಿದ್ದ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಮಾಜಿ ಸಚಿವ ಹೆಚ್‌.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು

https://newsfirstlive.com/wp-content/uploads/2023/09/HD-Revanna-1.jpg

Load More