newsfirstkannada.com

ಕಾಲೇಜು ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್​​ ಪ್ರಕರಣ; ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು

Share :

28-07-2023

    ಉಡುಪಿ ಕಾಲೇಜು ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್​​ ಪ್ರಕರಣ

    ಕೋರ್ಟ್​ನಿಂದ ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು

    ಉಡುಪಿ ಡಿಸ್ಟ್ರಿಕ್ಟ್​​ ಕೋರ್ಟ್​​ ನ್ಯಾಯಾಧೀಶರಾದ ಶ್ಯಾಮ್​ ಪ್ರಕಾಶ್​​​ ಆದೇಶ

ಉಡುಪಿ: ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಯುವತಿಯರ ವಿಡಿಯೋ ರೆಕಾರ್ಡ್​ ಮಾಡಿದ್ದರು ಎನ್ನಲಾದ ಕೇಸ್​ನಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಕೋರ್ಟ್​ ಜಾಮೀನು ಮಂಜೂರು ಮಾಡಿದೆ.

ಇಂದು ಕೇಸ್​ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಉಡುಪಿ ಡಿಸ್ಟ್ರಿಕ್ಟ್​​ ಕೋರ್ಟ್​​ ನ್ಯಾಯಾಧೀಶರಾದ ಶ್ಯಾಮ್​ ಪ್ರಕಾಶ್​​​ ನೇತೃತ್ವದ ಏಕಸದಸ್ಯ ಪೀಠ ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.

20 ಸಾವಿರ ರೂ. ಮೊತ್ತದ ಬಾಂಡ್​ ಬರೆಸಿಕೊಂಡು ಷರತ್ತುಬದ್ಧ ಜಾಮೀನು ನೀಡಿದ ಕೋರ್ಟ್​​, ಕೇಸ್​ ಸಂಬಂಧ ತನಿಖೆಗೆ ಸಹಕರಿಸಬೇಕು ಎಂದಿದೆ. ವಿಚಾರಣೆ ದಿನ ಕಡ್ಡಾಯವಾಗಿ ಕೋರ್ಟ್​ಗೆ ಹಾಜರು ಆಗಬೇಕು. ಸಾಕ್ಷಿಗಳಿಗೆ ಯಾವುದೇ ಕಾರಣಕ್ಕೂ ಬೆದರಿಕೆ ಹಾಕಬಾರದು ಎಂದು ನಿರ್ದೇಶನ ನೀಡಿದೆ.

ಏನಿದು ಘಟನೆ?

ಇತ್ತೀಚೆಗೆ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಒಂದು ಕೋಮಿನ ವಿದ್ಯಾರ್ಥಿನಿಯರು ಮತ್ತೊಂದು ಧರ್ಮಕ್ಕೆ ಸೇರಿದ ಯುವತಿ ವಿಡಿಯೋ ಚಿತ್ರೀಕರಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಸುದ್ದಿಗೋಷ್ಠಿ ನಡೆಸಿ, ತಮಾಷೆಗಾಗಿ ವಿಡಿಯೋ ಮಾಡಿರುವುದಾಗಿ ಯುವತಿರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು. ಸದ್ಯ ಈ ಕೇಸ್​ ಸಂಬಂಧ ಪೊಲೀಸರು ಮೂವರು ವಿದ್ಯಾರ್ಥಿನಿಯರ ಮೇಲೆ ಎಫ್​ಐಆರ್​ ಮಾಡಿದ್ದಾರೆ. ಜತೆಗೆ ಸೋಷಿಯಲ್​ ಮೀಡಿಯಾದಲ್ಲಿ ಇದರ ಬಗ್ಗೆ ಪೋಸ್ಟ್​ ಹಾಕಿದ್ದ ಯುವತಿ ವಿರುದ್ಧವೂ ಸುಳ್ಳು ಸುದ್ದಿ ಹರಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಿದ್ದರು ಎಂದು ಕೇಸ್​ ಹಾಕಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾಲೇಜು ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್​​ ಪ್ರಕರಣ; ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು

https://newsfirstlive.com/wp-content/uploads/2023/07/Udupi.jpg

Load More