Advertisment

ಅಭಿನಯ ಸರಸ್ವತಿಗೆ ಭಾವುಕ ವಿದಾಯ.. ಗಣ್ಯರಿಂದ ನುಡಿ ನಮನ, ಯಾರು ಏನಂದ್ರು..?

author-image
Ganesh
Updated On
ಅಭಿನಯ ಸರಸ್ವತಿಗೆ ಭಾವುಕ ವಿದಾಯ.. ಗಣ್ಯರಿಂದ ನುಡಿ ನಮನ, ಯಾರು ಏನಂದ್ರು..?
Advertisment
  • ಸ್ಯಾಂಡಲ್​ವುಡ್​ ಹಿರಿಯ ನಟಿ ಸರೋಜಾ ದೇವಿ ಇನ್ನಿಲ್ಲ
  • ‘ಮಹಾಕವಿ ಕಾಳಿದಾಸ’ ಅವರ ಅಭಿನಯದ ಮೊದಲ ಚಿತ್ರ
  • 1955ರಲ್ಲಿ ತನ್ನ 17ನೇ ವಯಸ್ಸಿಗೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ

ಸ್ಯಾಂಡಲ್​​ವುಡ್​ನ ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾ ದೇವಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಬೆಳಗ್ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Advertisment

ಹಿರಿಯ ನಟಿಯ ಅಗಲಿಕೆಗೆ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಂಬನಿ ಮಿಡಿದಿದ್ದಾರೆ. ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು.

ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಸದಭಿರುಚಿಯ ಚಿತ್ರಗಳ‌ ಮೂಲಕ ಹಲವು ದಶಕಗಳ‌ ಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ದುಃಖತಪ್ತ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 13ನೇ ವಯಸ್ಸಿನಲ್ಲಿ ಸಿನಿಮಾ ಆಫರ್​; 60 ವರ್ಷದಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟನೆ.. ಸರೋಜಾದೇವಿ ಸಿನಿ ಬದುಕು..

Advertisment

ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿ.. ಅಭಿನಯ ಸರಸ್ವತಿಗೆ ಪ್ರೀತಿಯ ವಿದಾಯ. ಕನ್ನಡದ ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಬಿ. ಸರೋಜಾ ದೇವಿ ಅವರ ನಿಧನದ ಸುದ್ದಿ ನೋವು ತಂದಿದೆ‌. ಕನ್ನಡ ಸೇರಿದಂತೆ ಪಂಚ ‌ಭಾಷೆಗಳಲ್ಲಿ ನಟಿಸಿ, 6 ದಶಕಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿ, ಸೈ ಎನಿಸಿಕೊಂಡಿದ್ದರು‌. ಅಗಲಿದ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ. ಅಪಾರ ಅಭಿಮಾನಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಓಂ ಶಾಂತಿ​ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Breaking: ಸ್ಯಾಂಡಲ್​​ವುಡ್​ನ ಅಭಿನಯ ಸರಸ್ವತಿ ಬಿ.ಸರೋಜಾದೇವಿ ಇನ್ನಿಲ್ಲ

Advertisment

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment