newsfirstkannada.com

ಮಾಜಿ ಸಿಎಂ ಮಕ್ಕಳಿಗೆ ಮಣೆ ಹಾಕಿದ ಕಾಂಗ್ರೆಸ್‌.. 2ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Share :

Published March 12, 2024 at 8:43pm

Update March 12, 2024 at 8:51pm

  4 ರಾಜ್ಯಗಳ 43 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ

  ಕಾಂಗ್ರೆಸ್ 2ನೇ ಪಟ್ಟಿಯಲ್ಲಿ ಇಬ್ಬರು ಮಾಜಿ ಸಿಎಂ ಪುತ್ರರಿಗೆ ಅದೃಷ್ಟ

  ಮಾರ್ಚ್ 15 ರಂದು ಕಾಂಗ್ರೆಸ್‌ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ

ನವದೆಹಲಿ: ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನ ಕಾಂಗ್ರೆಸ್ ಪಕ್ಷ ತನ್ನ 2ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. 2ನೇ ಪಟ್ಟಿಯಲ್ಲಿ 4 ರಾಜ್ಯಗಳ 43 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿದೆ.

ದೆಹಲಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನದ 43 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದರು. 2ನೇ ಪಟ್ಟಿಯಲ್ಲಿ ಕರ್ನಾಟಕದ ಯಾವ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಹೈಕಮಾಂಡ್ ಪರಿಗಣಿಸಿಲ್ಲ.

ಕಮಲ್ ನಾಥ್ ಮಗ ನಕುಲ್ ಮತ್ತು ಅಶೋಕ್ ಗೆಹ್ಲೋಟ್ ಪುತ್ರ ವೈಭವ್ ಗೆಹ್ಲೋಟ್

ಕಾಂಗ್ರೆಸ್ ಬಿಡುಗಡೆ ಮಾಡಿರುವ 2ನೇ ಪಟ್ಟಿಯಲ್ಲಿ ಪ್ರಮುಖವಾಗ ಮಾಜಿ ಸಿಎಂ ಪುತ್ರರಿಗೆ ಮಣೆ ಹಾಕಲಾಗಿದೆ. ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಮಗ ನಕುಲ್ ಅವರಿಗೆ ಛಿಂದ್ವಾರಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ರಾಜಸ್ಥಾನದ ಜಾಲೋರ್‌ನಿಂದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಮಂಡ್ಯ ಜಿದ್ದಾಜಿದ್ದಿನಲ್ಲಿ ಸುಮಲತಾಗೆ ಬಿಗ್‌ಶಾಕ್‌.. ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಫೈನಲ್‌?

ಕಳೆದ ಮಾರ್ಚ್ 8 ರಂದು ಕಾಂಗ್ರೆಸ್ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು. 39 ಪಟ್ಟಿಯಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟವಾಗಿತ್ತು. ಮಾರ್ಚ್ 15 ರಂದು ಕಾಂಗ್ರೆಸ್‌ ಮೂರನೇ ಸುತ್ತಿನ ಸಭೆ ನಡೆಸಲಿದ್ದಾರೆ. ಅಂದು ಕರ್ನಾಟಕದ 23 ಲೋಕಸಭಾ ಕ್ಷೇತ್ರಗಳ ಬಗ್ಗೆ ಚರ್ಚಿಸಲಿದ್ದು, ಅಂದೇ ಅಭ್ಯರ್ಥಿಗಳ ಹೆಸರು ಫೈನಲ್ ಆಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಾಜಿ ಸಿಎಂ ಮಕ್ಕಳಿಗೆ ಮಣೆ ಹಾಕಿದ ಕಾಂಗ್ರೆಸ್‌.. 2ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

https://newsfirstlive.com/wp-content/uploads/2023/12/KHARGE.jpg

Load More