newsfirstkannada.com

ಕಾಂಗ್ರೆಸ್​ ಬ್ಯಾಂಕ್ ಅಕೌಂಟ್​ ಸ್ಥಗಿತ.. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ

Share :

Published March 31, 2024 at 10:44am

    ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಮಾಜಿ ಸಚಿವರಿಂದ ಸತ್ಯಾಗ್ರಹ

    ಕಾಂಗ್ರೆಸ್​​ ಅನ್ನು ವಿವಿಧ ಮೂಲಗಳಿಂದ ಕಟ್ಟಿ ಹಾಕಲು ಬಿಜೆಪಿ ಪ್ಲಾನ್

    ಬ್ಯಾಂಕ್​ ಕಾತೆಗಳನ್ನು ಸ್ಥಗಿತ ಮಾಡಿದ್ದ ಆದಾಯ ತೆರಿಗೆ ಇಲಾಖೆಯವ್ರು ​

ಶಿವಮೊಗ್ಗ: ಲೋಕಸಭಾ ಎಲೆಕ್ಷನ್​ ವೇಳೆಯೇ ಕಾಂಗ್ರೆಸ್​ನ ಬ್ಯಾಂಕ್​​ ಖಾತೆಗಳನ್ನ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರು ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.

ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರು ಏಪ್ರಿಲ್ 2ರಂದು ಶಿವಮೊಗ್ಗದ ತೀರ್ಥಹಳ್ಳಿ ತಾಲೂಕು ಕಚೇರಿ ಮುಂಭಾಗ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಮಂಗಳವಾರ ಬೆಳಗ್ಗೆ 10.30 ರಿಂದ ಸಂಜೆ 5 ಗಂಟೆವರೆಗೆ ಉಪವಾಸ ಸತ್ಯಾಗ್ರಹವನ್ನು ಮಾಜಿ ಸಚಿವರು ಮಾಡಲಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಲೋಕಸಭಾ ಚುನಾವಣೆ ಸಮಯದಲ್ಲೇ ಕಾಂಗ್ರೆಸ್​ನ ಬ್ಯಾಂಕ್​ ಖಾತೆಗಳನ್ನು ಬೇಕಂತಲೇ ಸ್ಥಗಿತ ಮಾಡಿದೆ. ಇದರಿಂದ ಸರ್ವಾಧಿಕಾರ ಧೋರಣೆ ತೋರುತ್ತಿದ್ದು ಪಕ್ಷದ ಮೇಲೆ ಆರ್ಥಿಕ ದಿಗ್ಬಂಧನ ಏರಲಾಗಿದೆ. ಇದನ್ನು ವಿರೋಧಿಸಿ ಮೋದಿ ಸರ್ಕಾರದ ವಿರುದ್ಧ ಕಿಮ್ಮನೆ ರತ್ನಾಕರ್ ಅವರು ಉಪವಾಸ ಸತ್ಯಗ್ರಹ ಮಾಡಲು ನಿರ್ಧಾರ ಮಾಡಿದ್ದಾರೆ. ಇದೇ ವೇಳೆ ಜನರು ಇದರಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವವನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಆದಾಯ ತೆರಿಗೆ ರಿಟರ್ನ್ ಅನ್ನು ತಡವಾಗಿ ಸಲ್ಲಿಸಿದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಂಗ್ರೆಸ್‌ನ ಪ್ರಮುಖ ಬ್ಯಾಂಕ್ ಖಾತೆಗಳನ್ನು ಸ್ಥಗಿತ ಮಾಡಿದ್ದರು. ಕ್ಷುಲ್ಲಕ ಕಾರಣಗಳಿಗಾಗಿ ಆದಾಯ ತೆರಿಗೆ ಇಲಾಖೆ ಪ್ರಮುಖ ಬ್ಯಾಂಕ್ ಖಾತೆಗಳನ್ನು ಸ್ಥಗಿತ ಮಾಡಿದೆ. ವಿವಿಧ ಮೂಲಗಳಿಂದ ಕಾಂಗ್ರೆಸ್​ ಅನ್ನು ಕಟ್ಟಿ ಹಾಕಲು ಕೇಂದ್ರ ಸರ್ಕಾರ ಹೀಗೆ ಮಾಡುತ್ತಿದೆ ಎಂದು ಕಾಂಗ್ರೆಸ್​ ನಾಯಕರು ದೆಹಲಿಯಲ್ಲಿನ ಪ್ರತಿಭಟನೆ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದರು.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಕಾಂಗ್ರೆಸ್​ ಬ್ಯಾಂಕ್ ಅಕೌಂಟ್​ ಸ್ಥಗಿತ.. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ

https://newsfirstlive.com/wp-content/uploads/2024/03/KIMMANE_RATNAKAR.jpg

Load More