ನಾಳೆ ಕಾಂಗ್ರೆಸ್ನ ಮಹತ್ವದ ಸರ್ವ ಸದಸ್ಯರ ಸಭೆ
ಕ್ವೀನ್ಸ್ ರಸ್ತೆಯ ಇಂದಿರಾಗಾಂಧಿ ಭವನದಲ್ಲಿ ಸಭೆ
ಕಾಂಗ್ರೆಸ್ ನಾಯಕರಿಂದ ಲೋಕಸಭಾ ಚುನಾವಣೆ ಸಂಬಂಧ ಚರ್ಚೆ
ನಾಳೆ ಕಾಂಗ್ರೆಸ್ನ ಮಹತ್ವದ ಸರ್ವ ಸದಸ್ಯರ ಸಭೆ ನಡೆಯಲಿಕ್ಕಿದೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ನಡೆಯುತ್ತಿರುವ ಮೊದಲ ಸಭೆಯಾಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಮಹತ್ವದ ಸಭೆ ನಡೆಯುತ್ತಿದೆ. ಕ್ವೀನ್ಸ್ ರಸ್ತೆಯ ಇಂದಿರಾಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿಕ್ಕಿದೆ.
ಇನ್ನು ಈ ಸಭೆಯಲ್ಲಿ ಕೆಪಿಸಿಸಿ ಪದಾಧಿಕಾರಿಗಳು, ಎಐಸಿಸಿ ಸದಸ್ಯರು, ಶಾಸಕರು, ಮಾಜಿ ಸಂಸದರು, ಶಾಸಕರು, ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿಗಳು, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ನಾಯಕರೆಲ್ಲರು ಈ ಸಭೆಯಲ್ಲಿ ಲೋಕಸಭಾ ಚುನಾವಣೆ ಸಂಬಂಧ ಚರ್ಚೆ ನಡೆಸಲಿದ್ದಾರೆ. ಈಗಿನಿಂದಲೇ ಪಕ್ಷ ಸಂಘಟನೆಯನ್ನ ಚುರುಕುಗೊಳಿಸುವ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಗ್ಯಾರಂಟಿ ಯೋಜನೆ ಅನುಷ್ಠಾನವನ್ನು ಪ್ರಚಾರಕ್ಕೆ ಬಳಸಿಕೊಳ್ಳಲು ಅಗತ್ಯ ಮಾಹಿತಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದರ ಜೊತೆಗೆ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ತಯಾರಾಗುವುದು. ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ರೂಪಿಸುವುದು. ಬಿಜೆಪಿ ಹಾಗೂ ಜೆಡಿಎಸ್‌ನ ರಾಜಕೀಯ ಟೀಕೆಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡುವುದು ಸೇರಿದಂತೆ ಹಲ ವಿಚಾರಗಳ ಕುರಿತು ಚರ್ಚೆ ನಡೆಯಲಿಕ್ಕಿದೆ ಎಂದು ಹೇಲಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ