newsfirstkannada.com

ಕಾಂಗ್ರೆಸ್‌ ಮುಖಂಡ ಎಂ. ಶ್ರೀನಿವಾಸ್ ಕೊಲೆ ಪ್ರಕರಣ; ಮೂವರು ಆರೋಪಿಗಳ ಮೇಲೆ ಫೈರಿಂಗ್​

Share :

24-10-2023

  ಎಂ.ಶ್ರೀನಿವಾಸ್​​ರನ್ನು ಕೊಲೆಗೈದ ಆರು ಜನ ದುಷ್ಕರ್ಮಿಗಳು

  ಹಲ್ಲೆಗೆ ಯತ್ನಿಸಿದ ದುಷ್ಕರ್ಮಿಗಳ ಮೇಲೆ ಪೊಲೀಸರಿಂದ ಫೈರಿಂಗ್​

  ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ ಪೊಲೀಸರಿಂದ ಫೈರಿಂಗ್

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತ, ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ, ಕಾಂಗ್ರೆಸ್‌ ಮುಖಂಡ ಎಂ.ಶ್ರೀನಿವಾಸ್ ಅವರು ಬರ್ಬರವಾಗಿ ಹತ್ಯೆಯಾಗಿದ್ದಾರೆ. ಶ್ರೀನಿವಾಸಪುರ ಪಟ್ಟಣದ ಹೊರವಲಯದ ಹೊಗಳಗೆರೆ ಬಳಿ ಆರು ಜನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಇದೀಗ ಈ ಕೊಲೆ ಪ್ರಕರಣ ಸಂಬಂಧಿಸಿ ಮೂವರು ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್​ ನಡೆಸಿ ಬಂಧಿಸಿದ್ದಾರೆ.

ಎಂ.ಶ್ರೀನಿವಾಸ್ ಅವರನ್ನು ಕೊಲೆ ಮಾಡಿದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಈ ವೇಳೆ ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು ತಗುಲಿದೆ. ಮತ್ತೊಬ್ಬ ಆರೋಪಿ ಸಂತೋಷ್​ಗೂ ಗಾಯವಾಗಿದೆ.

ಕೋಲಾರ ಜಿಲ್ಲೆ‌ ವೇಮಗಲ್ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ವೆಂಕಟೇಶ್ ರಿಂದ ಫೈರಿಂಗ್ ನಡೆದಿದೆ. ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ ಫೈರಿಂಗ್ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿ ಕರೆತರುವ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕಾರಣ ಫೈರ್​ ಮಾಡಲಾಗಿದೆ.

ಇನ್ನು ಹಲ್ಲೆ ವೇಳೆ ಇನ್ಸ್ಪೆಕ್ಟರ್ ವೆಂಕಟೇಶ್, ಪೊಲೀಸ್ ಸಿಬ್ಬಂದಿ ಮಂಜುನಾಥ್ ಮತ್ತು ನಾಗೇಶ್ ಅವರಿಗೂ ಗಾಯವಾಗಿದೆ. ಗಾಯಾಳುಗಳಿಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀನಿವಾಸ್ ಕೊಲೆ ಪ್ರಕರಣದ ಆರು ಜನರ ಪೈಕಿ ಮೂವರು ಪ್ರಮುಖ ಆರೋಪಿಗಳ ಬಂಧಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾಂಗ್ರೆಸ್‌ ಮುಖಂಡ ಎಂ. ಶ್ರೀನಿವಾಸ್ ಕೊಲೆ ಪ್ರಕರಣ; ಮೂವರು ಆರೋಪಿಗಳ ಮೇಲೆ ಫೈರಿಂಗ್​

https://newsfirstlive.com/wp-content/uploads/2023/10/M-Srinivas.jpg

Load More