/newsfirstlive-kannada/media/post_attachments/wp-content/uploads/2024/04/RAHUL_GANDHI-1.jpg)
ಲೋಕಸಭಾ ಚುನಾವಣೆಯ ಕಾವು ದಿನೇ ದಿನೇ ರಂಗೇರುತ್ತಿದೆ. ಕಮಲ ಪಾಳಯ ಪ್ರಧಾನಿ ಮೋದಿಯನ್ನು ಕರೆಸಿ ರಾಜ್ಯದಲ್ಲಿ ಅದ್ಧೂರಿಯಾಗಿ ಪ್ರಚಾರ ನಡೆಸಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ಪರವಾಗಿ ಮತ ಬೇಟೆ ನಡೆಸಲು ರಾಹುಲ್ ಗಾಂಧಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಾವು ಜೋರಾಗಿದೆ. ಅದೆಷ್ಟರ ಮಟ್ಟಿಗೆ ಅಂದ್ರೆ ಭಾಸ್ಕರನ ಬಿಸಿಲಿಗೂ ಟಕ್ಕರ್ ಕೊಡುವಷ್ಟು. ಕಮಲ-ದಳ ಹಾಗೂ ಕಾಂಗ್ರೆಸ್ ಸೇನಾನಿಗಳು ಲೋಕಸಮರ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಕೇಸರಿ ಸೇನೆಯಂತೂ ಪ್ರಚಾರದ ಅಖಾಡಕ್ಕೆ ತಮ್ಮ ಬತ್ತಳಿಕೆಯಲ್ಲಿರುವ ಬ್ರಹ್ಮಾಸ್ತ್ರ ಪ್ರಧಾನಿ ಮೋದಿಯನ್ನು ಕರೆಸಿ ಅಬ್ಬರದ ನಡೆಸಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಅಖಾಡಕ್ಕಿಳಿದಿದೆ.
ಮಂಡ್ಯದಲ್ಲಿ ಮಧ್ಯಾಹ್ನ 2 ರಿಂದ 3ರ ವರೆಗೆ ಸಮಾವೇಶ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ. ಮಧ್ಯಾಹ್ನ 1.20ಕ್ಕೆ ಬೆಂಗಳೂರಿನ ಹೆಚ್ಎಎಲ್ಗೆ ಆಗಮಿಸಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಮಂಡ್ಯದಲ್ಲಿ ಮಧ್ಯಾಹ್ನ 2 ರಿಂದ 3 ರವರೆಗೆ ಸಮಾವೇಶ ನಡೆಯಲಿದ್ದು ರಾಗಾ ಭಾಗಿಯಾಗಲಿದ್ದಾರೆ.
ಇಂದು ರಾಹುಲ್ ಗಾಂಧಿ ಮತಬೇಟೆ
- ದೋಸ್ತಿಗಳ ಹಣಿಯಲು ಕಾಂಗ್ರೆಸ್ ರಣತಂತ್ರ, ಘಟಾನುಘಟಿಗಳಿಂದ ಪ್ರಚಾರ
- ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ
- ಬೃಹತ್ ಸಮಾವೇಶ ಮೂಲಕ ಕೈ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ
- ಮಂಡ್ಯ ವಿವಿ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಆಯೋಜನೆ
- ಸಮಾವೇಶಕ್ಕೆ ಒಂದು ಲಕ್ಷಕ್ಕೂ ಅಧಿಕ ಜನರನ್ನ ಕರೆತರುವ ಪ್ಲಾನ್
- ಈಗಾಗಲೇ ಜರ್ಮನ್ ಟೆಂಟ್ನಲ್ಲಿ ಬೃಹತ್ ವೇದಿಕೆ ನಿರ್ಮಾಣ
- ಮಧ್ಯಾಹ್ನ 1 ಗಂಟೆಗೆ ಸಮಾವೇಶ, 1.30ಕ್ಕೆ ರಾಹುಲ್ ಗಾಂಧಿ ಭಾಗಿ
- ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ನಾಯಕರು ಸಾಥ್
ಇದನ್ನೂ ಓದಿ:ಇಂದು ರಾಮನವಮಿ ಸಂಭ್ರಮ.. ಅಯೋಧ್ಯೆಯ ಬಾಲರಾಮನ ಸ್ಪರ್ಶಿಸಲಿವೆ ಸೂರ್ಯನ ಹೊಂಗಿರಣಗಳು, ಹೇಗೆ?
ಇನ್ನು ಸಮಾವೇಶ ಮುಗಿಸಿ ಮಧ್ಯಾಹ್ನ 3.10ಕ್ಕೆ ಮಂಡ್ಯದಿಂದ ಚಿನ್ನದ ಗಣಿಗೆ ರಾಹುಲ್ ಗಾಂಧಿ ಪ್ರಯಾಣ ಬೆಳೆಸಲಿದ್ದಾರೆ. ಕೋಲಾರದಲ್ಲಿ ಪ್ರಜಾಧ್ವನಿ 2.0ಗೆ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಅದಕ್ಕಾಗಿ ಮಾಲೂರು ಪಟ್ಟಣದ ಹೊರವಲಯ ಚೊಕ್ಕಂಡಹಳ್ಳಿ ಗ್ರಾಮದ ಬಳಿ ಬೃಹತ್ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಂಡಿದೆ. ಸುಮಾರು 50 ಎಕರೆ ಪ್ರದೇಶದಲ್ಲಿ ಬೃಹತ್ ವೇದಿಕೆ ಹಾಕಲಾಗಿದೆ. ಇಂದು ಕೋಲಾರ ಅಭ್ಯರ್ಥಿ ಕೆ.ವಿ.ಗೌತಮ್ ಪರ ರಾಹುಲ್ ಮತಯಾಚನೆ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಕೋಲಾರ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದಿಂದ 50ರಿಂದ 60 ಸಾವಿರ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇದೆ.
ಟಿಕೆಟ್ ಹಂಚಿಕೆ ವೇಳೆ ರಾಷ್ಟ್ರಮಟ್ಟದಲ್ಲಿ ಗುಂಪುಗಾರಿಕೆ ಪ್ರದರ್ಶನ ಮಾಡಿ ಗಮನ ಸೆಳೆದಿದ್ದ ಕೋಲಾರ ಜಿಲ್ಲಾ ಕಾಂಗ್ರೇಸ್ ಇಂದು ಪಕ್ಷದ ರಾಷ್ಟ್ರೀಯ ನಾಯಕರ ಎದುರಲ್ಲಿ ಒಗ್ಗಟ್ಟು ಪ್ರದರ್ಶನ ಮಾಡುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿಯಿರುವಾಗಲೇ ಕಾಂಗ್ರೆಸ್ ರಾಜ್ಯ ಹಾಗೂ ರಾಷ್ಟ್ರ ನಾಯಕರು ರಾಜ್ಯಕ್ಕೆ ಲಗ್ಗೆ ಇಡಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ