newsfirstkannada.com

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ದೆಹಲಿ ಆಸ್ಪತ್ರೆಗೆ ದಾಖಲು; ವೈದ್ಯರು ಹೇಳಿದ್ದೇನು?

Share :

03-09-2023

  ಶ್ರೀ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ

  ಕಳೆದ ಜನವರಿಯಲ್ಲೂ ಉಸಿರಾಟದ ಸೋಂಕಿಗೆ ತುತ್ತಾಗಿದ್ದರು

  ಸೋನಿಯಾ ಗಾಂಧಿ ಆರೋಗ್ಯದ ಮೇಲೆ ವೈದ್ಯರ ತಂಡ ನಿಗಾ

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ದೆಹಲಿಯ ಶ್ರೀ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಕಳೆದ 2 ದಿನದ ಹಿಂದಷ್ಟೇ ಮುಂಬೈನಲ್ಲಿ ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾ ನಾಯಕರ ಮಹತ್ವದ ಸಭೆ ನಡೆದಿತ್ತು. ಈ ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಮಂಡಳಿ ಮುಖ್ಯಸ್ಥರು ಆಗಿರುವ ಸೋನಿಯಾ ಗಾಂಧಿ ಅವರು ಭಾಗಿಯಾಗಿದ್ದರು. ಆ ಬಳಿಕ ಸೋನಿಯಾ ಗಾಂಧಿ ಅವರಿಗೆ ಜ್ವರ ಕಾಣಿಸಿಕೊಂಡಿದೆ. ದೆಹಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಬಿಜೆಪಿ ನಾಯಕರ ಜೊತೆ ಡಿ.ಕೆ ಶಿವಕುಮಾರ್ ರಹಸ್ಯ ಚರ್ಚೆ; ಆಪರೇಷನ್ ಹಸ್ತಕ್ಕೆ ಪೋಟೋ ಸಾಕ್ಷಿ ಬಿಡುಗಡೆ

ಇದೇ ವರ್ಷ ಸೋನಿಯಾ ಗಾಂಧಿ ಅವರು ಎರಡನೇ ಬಾರಿ ಇದೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ಸೋಂಕಿಗೆ ತುತ್ತಾಗಿದ್ದ ಸೋನಿಯಾ ಗಾಂಧಿ ಅವರು ಕಳೆದ ಜನವರಿ 12ರಂದು ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಸತತ 5 ದಿನಗಳ ಚಿಕಿತ್ಸೆ ಬಳಿಕ ಸೋನಿಯಾ ಗಾಂಧಿ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಇಂದು ಸೋನಿಯಾ ಗಾಂಧಿ ಅವರ ಆರೋಗ್ಯದ ಮೇಲೆ ವೈದ್ಯರು ನಿಗಾ ಇರಿಸಿದ್ದು, ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ದೆಹಲಿ ಆಸ್ಪತ್ರೆಗೆ ದಾಖಲು; ವೈದ್ಯರು ಹೇಳಿದ್ದೇನು?

https://newsfirstlive.com/wp-content/uploads/2023/09/Sonia-Gandhi.jpg

Load More