/newsfirstlive-kannada/media/post_attachments/wp-content/uploads/2023/09/Sonia-Gandhi.jpg)
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಆರೋಗ್ಯ ಹದಗೆಡುತ್ತಿದ್ದಂತೆ ಶಿಮ್ಲಾದ ಇಂದಿರಾ ಗಾಂಧಿ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 78 ವರ್ಷದ ಸೋನಿಯಾ ಗಾಂಧಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ.
ಶಿಮ್ಲಾದಲ್ಲಿ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾದ ಸುದ್ದಿಗೆ ಕಾಂಗ್ರೆಸ್ ನಾಯಕರು ಆತಂಕಕ್ಕೆ ಒಳಗಾಗಿದ್ದರು. ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು ಅವರ ಮಾಧ್ಯಮ ಸಲಹೆಗಾರರು ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಸೋನಿಯಾ ಗಾಂಧಿ ಅವರು ಆರೋಗ್ಯವಾಗಿದ್ದಾರೆ. ಸಾಮಾನ್ಯವಾದ ಆರೋಗ್ಯ ತಪಾಸಣೆಗೆ ಸೋನಿಯಾ ಗಾಂಧಿ ಅವರು ದಾಖಲಾಗಿದ್ದರು ಅನ್ನೋ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಕಮಲ್ ಹಾಸನ್ ಬಳಿಕ ರಾಮ್ ಗೋಪಾಲ್ ವರ್ಮಾ ಕನ್ನಡ ವಿರೋಧಿ ಹೇಳಿಕೆ; ಗೋಲ್ಡನ್ ಸ್ಟಾರ್ ಗಣೇಶ್ ತಿರುಗೇಟು
ಕಳೆದ 5 ದಿನಗಳ ಹಿಂದೆ ಸೋನಿಯಾ ಗಾಂಧಿ ಅವರು ಪ್ರಿಯಾಂಕಾ ಗಾಂಧಿ ಅವರ ಹಿಮಾಚಲ ಪ್ರದೇಶದ ಚರಬ್ರದಲ್ಲಿರುವ ಮನೆಗೆ ತೆರಳಿದ್ದರು. ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದ ಅವರು ಶಿಮ್ಲಾದಲ್ಲಿ ವೈದ್ಯಕೀಯ ಪರೀಕ್ಷೆಯ ಬಳಿಕ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us