newsfirstkannada.com

‘ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಆಗೋದು ಸತ್ಯ’- ಕಾಂಗ್ರೆಸ್‌ ಶಾಸಕನಿಂದ ಸ್ಫೋಟಕ ಸುಳಿವು

Share :

21-11-2023

    ಉತ್ತರ ಕರ್ನಾಟಕದ ಪಕ್ಷಾತೀತ ನಾಯಕ ಸತೀಶ್ ಜಾರಕಿಹೊಳಿ

    ಸೂರ್ಯ ಹುಟ್ಟೋದು ಎಷ್ಟು ಸತ್ಯವೋ ಸಿಎಂ ಆಗೋದು ಅಷ್ಟೇ ಸತ್ಯ

    ಹೈಕಮಾಂಡ್‌ ಆದೇಶ ನೀಡಿದ್ದರೂ ಕಾಂಗ್ರೆಸ್ ಶಾಸಕನಿಂದ ಹೇಳಿಕೆ

ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಸಿಎಂ ಕುರ್ಚಿಯ ಹಗ್ಗಜಗ್ಗಾಟ ಇನ್ನೂ ನಿಂತಿಲ್ಲ. ನಾನೇ ಮುಖ್ಯಮಂತ್ರಿ ಅಂತ ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ ಮೇಲೂ ಸಚಿವರು, ಕಾಂಗ್ರೆಸ್‌ ಶಾಸಕರು ತಮ್ಮ ಕೂಗು ನಿಲ್ಲಿಸಿಲ್ಲ. ಅಧಿಕಾರದಲ್ಲಿರುವಾಗಲೇ ತಮ್ಮ ನಾಯಕರ ಪರವಾಗಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಬೆಳಗಾವಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಸವದತ್ತಿ ಶಾಸಕ ವಿಶ್ವಾಸ ವೈದ್ಯ ಅವರು ಸಚಿವ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಆಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡಿದ ಶಾಸಕ ವಿಶ್ವಾಸ ವೈದ್ಯ, ಸತೀಶ್ ಜಾರಕಿಹೊಳಿ ಅವರು ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಾತೀತವಾಗಿ ಪ್ರಭಾವ ಬೆಳೆಸಿಕೊಂಡಿದ್ದಾರೆ. ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ ಅವರು ಸಿಎಂ ಆಗುವುದು ಅಷ್ಟೇ ಸತ್ಯ ಎಂದರು.

ಬೆಳಗಾವಿ ಜಿಲ್ಲೆ ಯರಗಟ್ಟಿ ಪಟ್ಟಣದಲ್ಲಿ ದೀಪಾವಳಿ ಹಾಗೂ ರಾಜ್ಯೋತ್ಸವದ ಅಂಗವಾಗಿ ರಸಮಂಜರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟಕರಾಗಿ ಭಾಗಿಯಾಗಿದ್ದ ಸವದತ್ತಿ ಶಾಸಕರು, ನಮ್ಮ ಸತೀಶ್‌ ಅಣ್ಣ ಮುಂದಿನ ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ. ಬೆಳಗಾವಿ ರಾಜಕೀಯ ಒಂದು ರೀತಿಯ ನಿಗೂಢ ಸಂದೇಶವನ್ನೇ ನೀಡುತ್ತೆ. ಹೀಗಾಗಿ ಕಾಂಗ್ರೆಸ್ ಶಾಸಕರ ಈ ಹೇಳಿಕೆ ಹೊಸ ಸಂಚಲನವನ್ನೇ ಸೃಷ್ಟಿಸಿದೆ.
ಇತ್ತೀಚೆಗೆ ಗೃಹ ಸಚಿವ ಪರಮೇಶ್ವರ್ ಅವರು ಮುಂದಿನ ಮುಖ್ಯಮಂತ್ರಿ ಆಗಬೇಕು ಅಂತ ತುಮಕೂರಲ್ಲಿ ಸಚಿವ ಕೆ.ಎನ್‌ ರಾಜಣ್ಣ ಧ್ವನಿ ಎತ್ತಿದ್ದರು. ಇದಾದ ಬಳಿಕ ಬೆಳಗಾವಿಯ ಶಾಸಕರು ಸಚಿವ ಸತೀಶ್ ಜಾರಕಿಹೊಳಿ ಪರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.

ಮುಂದಿನ ಸಿಎಂ ಯಾರಾಗಬೇಕು ಅನ್ನೋ ವಿಚಾರದ ಬಗ್ಗೆ ಯಾರು ಚರ್ಚೆ ಮಾಡಬಾರದು ಅಂತಾ ಕಾಂಗ್ರೆಸ್ ಹೈಕಮಾಂಡ್‌ ಕಟ್ಟು ನಿಟ್ಟಿನ ಆದೇಶ ಮಾಡಿದೆ. ಇಷ್ಟಾದ್ರೂ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಕುರ್ಚಿ ಮೇಲೆ ಹಲವು ನಾಯಕರು ಕಣ್ಣಿಟ್ಟಿರೋದಂತೂ ಸುಳ್ಳಲ್ಲ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಆಗೋದು ಸತ್ಯ’- ಕಾಂಗ್ರೆಸ್‌ ಶಾಸಕನಿಂದ ಸ್ಫೋಟಕ ಸುಳಿವು

https://newsfirstlive.com/wp-content/uploads/2023/11/Minister-satish-Jarkiholi.jpg

Load More