newsfirstkannada.com

VIDEO: ಬಿಜೆಪಿ ಸಂಸದರು ಗಂಡಸರೇ ಅಲ್ಲ.. ಕಾಂಗ್ರೆಸ್ ಶಾಸಕನಿಂದ ವಿವಾದಾತ್ಮಕ ಹೇಳಿಕೆ!

Share :

Published February 5, 2024 at 4:17pm

Update February 5, 2024 at 4:26pm

  ರಾಜ್ಯದಿಂದ ಗೆದ್ದಿರುವ ಬಿಜೆಪಿ ಸಂಸದರಲ್ಲಿ ಯಾರೂ ಗಂಡಸರು ಇಲ್ಲ

  ಮೋದಿ ಹೆಸರಲ್ಲಿ ಗೆದ್ದಿರುವ ಬಿಜೆಪಿ ಸಂಸದರೆಲ್ಲಾ ಶೋ ಪೀಸ್‌ಗಳು!

  ‘ನಮ್ಮ ಹೋರಾಟ ನೋಡಿ ಬಿಜೆಪಿಯ ಗಂಡಸರು ಹೋರಾಟ ಮಾಡಲಿ’

ರಾಮನಗರ: ಬಿಜೆಪಿ ಸಂಸದರ ವಿರುದ್ಧ ಮಾಗಡಿ ಕಾಂಗ್ರೆಸ್ ಶಾಸಕ ಹೆಚ್‌.ಸಿ ಬಾಲಕೃಷ್ಣ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಮಾತನಾಡುವ ಭರದಲ್ಲಿ ನಾಲಗೆ ಹರಿಬಿಟ್ಟಿದ್ದು ಬಿಜೆಪಿ ಎಂಪಿಗಳು, ಶಾಸಕರು ರಾಜ್ಯ ಪರವಾಗಿ ಧ್ವನಿ ಎತ್ತಿಲ್ಲ. ಇದರ ಅರ್ಥ ರಾಜ್ಯದಿಂದ ಗೆದ್ದಿರುವ ಬಿಜೆಪಿ ಸಂಸದರು ಯಾರೂ ಗಂಡಸರು ಇಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರದಿಂದ ಅನುದಾನ ತಾರತಮ್ಯ ಆಗುತ್ತಿದೆ ಎಂದು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರು ಇದೇ ಫೆಬ್ರವರಿ 7ರಂದು ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಶಾಸಕ ಬಾಲಕೃಷ್ಣ, ನಮಗೆ ಕೊಡಬೇಕಾದ ಅನುದಾನವನ್ನು ಕೇಂದ್ರ ಸರ್ಕಾರ ನಮಗೆ ಕೊಡುತ್ತಿಲ್ಲ. ಬಿಜೆಪಿಯ ಸಂಸದರು ನರೇಂದ್ರ ಮೋದಿ ಮುಂದೆ ಕೂರೋದು ಇಲ್ಲ, ಏಳೋದು ಇಲ್ಲ. ಕೇವಲ ಮೋದಿ ಹೆಸರಲ್ಲಿ ಗೆಲ್ತಾರೆ. ಪಕ್ಕದ ತಮಿಳುನಾಡು ತನ್ನ ಹಕ್ಕಿಗಾಗಿ ಮಾಡುವ ಹೋರಾಟವನ್ನ ನೋಡಿ ಕಲಿಯಲಿ. ಬಿಜೆಪಿ ಸಂಸದರೆಲ್ಲಾ ಶೋ ಪೀಸ್‌ಗಳು ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಲಾಟರಿ ಅಧ್ಯಕ್ಷ.. ಡಿ.ಕೆ ಶಿವಕುಮಾರ್‌ ಹೇಳಿಕೆಗೆ ಬಿ.ವೈ ವಿಜಯೇಂದ್ರ ಖಡಕ್ ಸವಾಲು; ಏನಂದ್ರು?

ಬಿಜೆಪಿ ಸಂಸದರೆಲ್ಲಾ ಕೇವಲ ದೆಹಲಿಗೆ ಹೋಗೋದು ಟಿಎ-ಡಿಎ ತಗೊಂಡು ಬರೋದು ಅಷ್ಟೇ ಇವರ ಕೆಲಸ. ಬಿಜೆಪಿ ಎಂಪಿಗಳು, ಮಂತ್ರಿಗಳು ರಾಜ್ಯದ ಪರವಾಗಿ ಧ್ವನಿ ಎತ್ತಿಲ್ಲ. ಹಾಗಾಗಿ ನಾವು ಹೋರಾಟ ಮಾಡ್ತಿದ್ದೀವಿ. ಪಾಪ ನಮ್ಮ ಹೋರಾಟ ನೋಡಿ ಬಿಜೆಪಿಯ ಗಂಡಸರು ಹೋರಾಟ ಮಾಡ್ತಾರಾ ನೋಡೋಣ. ಇದರ ಅರ್ಥ ಬಿಜೆಪಿಯಲ್ಲಿ ಯಾರು ಗಂಡಸರು ಇಲ್ಲ ಅಂತ. ಈಗಿರುವ ಬಿಜೆಪಿ ಎಂಪಿಗಳು ಯಾರು ಗಂಡಸರಲ್ಲ ಎಂದು ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ಬಿಜೆಪಿ ಸಂಸದರು ಗಂಡಸರೇ ಅಲ್ಲ.. ಕಾಂಗ್ರೆಸ್ ಶಾಸಕನಿಂದ ವಿವಾದಾತ್ಮಕ ಹೇಳಿಕೆ!

https://newsfirstlive.com/wp-content/uploads/2024/02/Congress-MLA-HC-Balakrishna.jpg

Load More