newsfirstkannada.com

‘ಮೋದಿ ಹೀಗೆ ಮಾಡಿದ್ರೆ ಪ್ರತ್ಯೇಕ ರಾಷ್ಟ್ರದ ಕೂಗು ಅನಿವಾರ್ಯ’- ಸಂಸದ ಡಿ.ಕೆ ಸುರೇಶ್

Share :

Published February 1, 2024 at 3:27pm

Update February 1, 2024 at 3:18pm

    ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ

    ಬಜೆಟ್‌ನಲ್ಲಿ ಬೇರೆ ಬೇರೆ ದೇಸಿ ಹೆಸರುಗಳನ್ನ ಇಡಲಾಗಿದೆ

    ದೆಹಲಿಯಲ್ಲಿ ಪ್ರತ್ಯೇಕ ರಾಷ್ಟ್ರಕ್ಕೆ ಒತ್ತಾಯಿಸಿದ ಸಂಸದ ಡಿ.ಕೆ ಸುರೇಶ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂಡಿಸಿದ ಮಧ್ಯಂತರ ಬಜೆಟ್‌ಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಬಜೆಟ್‌ನಲ್ಲಿ ಏನೂ ಇಲ್ಲ. ನಾಮಫಲಕ ಮಾತ್ರ ಬದಲಾಯಿಸಲಾಗಿದೆ ಎಂದಿರುವ ಸಂಸದ ಡಿ.ಕೆ ಸುರೇಶ್ ಅವರು ಪ್ರತ್ಯೇಕ ರಾಷ್ಟ್ರಕ್ಕೂ ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಬಜೆಟ್ 2024ರ ಬಗ್ಗೆ ಮಾತನಾಡಿದ ಡಿ.ಕೆ ಸುರೇಶ್, ಬಜೆಟ್‌ನಲ್ಲಿ ಬೇರೆ ಬೇರೆ ದೇಸಿ ಹೆಸರುಗಳನ್ನ ಇಡಲಾಗಿದೆ. ಅದು ಬಿಟ್ಟರೆ ಬೇರ ಏನೂ ಬದಲಾಗಿಲ್ಲ. ಎಕನಾಮಿಕ್ ಸರ್ವೇ ರಿಲೀಸ್ ಮಾಡಿದ್ರೆ ಇವರ ಪರಿಸ್ಥಿತಿ ಏನಿದೆ ಅನ್ನೋದು ಗೊತ್ತಾಗುತ್ತಿತ್ತು. ಯಾವ ರೀತಿ ದೇಶ ಕಳೆದ ಸಾಲಿನಲ್ಲಿ ಸಾಧನೆಯನ್ನು ಸಾಧಿಸಿದೆ ಅನ್ನೋ ಅನುಮಾನಗಳು ಪ್ರಾರಂಭವಾಗಿದೆ ಎಂದು ಡಿಕೆ ಸುರೇಶ್ ಹೇಳಿದ್ದಾರೆ.

ಇದನ್ನೂ ಓದಿ: 9 ಕೋಟಿ ಮಹಿಳೆಯರ ಲಕ್ ಬದಲಿಸಲಿದೆ ಲಕ್​ಪತಿ ದೀದಿ ಯೋಜನೆ; ಏನಿದು? 10 ಲಾಭಗಳು ಏನು?

ಕೇಂದ್ರ ಸರ್ಕಾರದ ಈ ಬಜೆಟ್ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಒಂದಷ್ಟು ಘೋಷಣೆಗಳನ್ನು ಮಾಡಿದ್ದಾರೆ. ಮೂಗಿಗೆ ತುಪ್ಪ ವರೆಸುವ ಕೆಲಸ ಮಾಡಿದ್ದಾರೆ. ಇವತ್ತು ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದಂತವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರೆದರೆ ದಕ್ಷಿಣ ಭಾರತದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ಸಂಸದ ಡಿಕೆ ಸುರೇಶ್ ಎಚ್ಚರಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಮೋದಿ ಹೀಗೆ ಮಾಡಿದ್ರೆ ಪ್ರತ್ಯೇಕ ರಾಷ್ಟ್ರದ ಕೂಗು ಅನಿವಾರ್ಯ’- ಸಂಸದ ಡಿ.ಕೆ ಸುರೇಶ್

https://newsfirstlive.com/wp-content/uploads/2023/06/DK-Suresh1.jpg

Load More