newsfirstkannada.com

ಮೈಸೂರು, ಚಾಮರಾಜನಗರದಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಕಾಂಗ್ರೆಸ್ ಆಪರೇಷನ್; ಮೊದಲ ವಿಕೆಟ್ ಪತನ!

Share :

Published March 30, 2024 at 2:18pm

  ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯತಂತ್ರ

  ಬಿಜೆಪಿ ವಿರುದ್ಧ ಚಾಮರಾಜನಗರದ ಟಿಕೆಟ್ ಆಕಾಂಕ್ಷಿ ಅಸಮಾಧಾನ

  ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಬೆಂಬಲ ಕೋರಿದ ಕಾಂಗ್ರೆಸ್‌

ಮೈಸೂರು: ಲೋಕಸಭಾ ಚುನಾವಣೆಯ ಕಣದಲ್ಲಿ ಅಭ್ಯರ್ಥಿಗಳ ಪ್ರಚಾರ, ರಾಜಕೀಯ ಪಕ್ಷಗಳ ತಂತ್ರಗಾರಿಕೆ ಜೋರಾಗಿದೆ. ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್, ಬಿಜೆಪಿ ನಾಯಕರು ಎದುರಾಳಿಯ ತಂತ್ರಕ್ಕೆ ರಣತಂತ್ರ ಹೆಣೆಯುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಮೈಸೂರು, ಚಾಮರಾಜನಗರ ಕೂಡ ಬಹಳ ಪ್ರಮುಖವಾದದ್ದು. ಈ ಬಾರಿ ಗೆದ್ದೇ ಗೆಲ್ಲಲು ಕಾಂಗ್ರೆಸ್ ನಾಯಕರು ನಾನಾ ಕಸರತ್ತು ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತವರು ಜಿಲ್ಲೆಯಲ್ಲಿ ಗೆಲುವಿನ ಗಿಫ್ಟ್ ಕೊಡಲು ಬಹಳಷ್ಟು ಕಸರತ್ತು ನಡೆಸುತ್ತಿದ್ದಾರೆ.

ಲೋಕಸಭಾ ಚುನಾವಣೆಯ ಮೆಗಾ ಆಪರೇಷನ್ ಭಾಗವಾಗಿ ಬಿಜೆಪಿ ಅತೃಪ್ತರಿಗೆ ಕಾಂಗ್ರೆಸ್ ನಾಯಕರು ಗಾಳ ಹಾಕಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಕುಟುಂಬದ ಮೊದಲ ವಿಕೆಟ್ ಪತನವಾಗಿದೆ.

ಇದನ್ನೂ ಓದಿ: ಎಲ್ರಿ ಇದೆ ಮೋದಿ ಅಲೆ.. ಬಿಜೆಪಿ ಬಿಟ್ಟು ಕಾಂಗ್ರೆಸ್‌ ಪಕ್ಷ ಸೇರಿಕೊಂಡ ತೇಜಸ್ವಿನಿ ಗೌಡ ವಾಗ್ದಾಳಿ!

ಸಂಸದ ವಿ.ಶ್ರೀನಿವಾಸ ಪ್ರಸಾದ್ ತಂಗಿಯ ಮಗ, ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಾಗಿದ್ದ ಧೀರಜ್ ಪ್ರಸಾದ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ತೀರ್ಮಾನ ಮಾಡಿದ್ದಾರೆ. ಇಂದು ಅಥವಾ ನಾಳೆ ಧೀರಜ್ ಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇತ್ತೀಚೆಗೆ ಕಾಂಗ್ರೆಸ್ ಮುಖಂಡರು ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿಯಾಗಿ ಬೆಂಬಲ ಕೋರಿದ್ದರು. ಆಗ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದೇನೆ, ನೋಡೋಣ ಎಂದಷ್ಟೇ ಪ್ರಸಾದ್ ಹೇಳಿದ್ದರು.

ಚಾಮರಾಜನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಶ್ರೀನಿವಾಸ ಪ್ರಸಾದ್ ಅಳಿಯ ಡಾ.ಮೋಹನ್ ಕುಮಾರ್ ಅವರನ್ನು ಕಾಂಗ್ರೆಸ್ ನಾಯಕರು ಸಂಪರ್ಕಿಸಿದ್ದಾರೆ. ಧೀರಜ್ ಪ್ರಸಾದ್ ಅವರ ಬಳಿಕ ಡಾ. ಮೋಹನ್ ಕುಮಾರ್‌ ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರಾ ಅನ್ನೋದು ಕುತೂಹಲ ಕೆರಳಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮೈಸೂರು, ಚಾಮರಾಜನಗರದಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಕಾಂಗ್ರೆಸ್ ಆಪರೇಷನ್; ಮೊದಲ ವಿಕೆಟ್ ಪತನ!

https://newsfirstlive.com/wp-content/uploads/2024/03/Mysore-Srinivas-Prasad.jpg

Load More