newsfirstkannada.com

ಮೋದಿ ಸರ್ಕಾರದ ವಿರುದ್ಧ ಬೀದಿಗಿಳಿದ ಕಾಂಗ್ರೆಸ್; ಅಕ್ಕಿ ಯುದ್ಧದ ಹಿಂದಿರೋ ಅಸಲಿ ಕಾರಣ ಏನು ಗೊತ್ತಾ?

Share :

Published June 20, 2023 at 12:38pm

    5 ಕೆಜಿ ಅಕ್ಕಿ ಕೊಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ

    ಹೆಚ್ಚುವರಿ 5 ಕೆಜಿ ಅಕ್ಕಿಗಾಗಿ ಕೇಂದ್ರ ಸರ್ಕಾರದ ಜೊತೆ ಜಟಾಪಟಿ

    ಕೇಂದ್ರ ಸರ್ಕಾರದ ವಿರುದ್ಧ ಅಕ್ಕಿ ಅಸ್ತ್ರ ಪ್ರಯೋಗಿಸಲು ಕಾರಣವೇನು?

ಬೆಂಗಳೂರು: ಬಡವರಿಗೆ 10 ಕೆಜಿ ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರ ತೀವ್ರ ಕಸರತ್ತು ನಡೆಸುತ್ತಿದೆ. ಸರ್ಕಾರಕ್ಕೆ ಸದ್ಯ 5 ಕೆಜಿ ಅಕ್ಕಿ ಕೊಡಲು ಸಮಸ್ಯೆ ಇಲ್ಲ. ಹೆಚ್ಚುವರಿ 5 ಕೆಜಿ ಅಕ್ಕಿ ದಾಸ್ತಾನು ಮಾಡೋದು ದೊಡ್ಡ ಸವಾಲಾಗಿದೆ. ಈ ಮಧ್ಯೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನ್ನಭಾಗ್ಯಕ್ಕೆ ಅಕ್ಕಿ ಕೊಡಲು ನಿರಾಕರಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರು, ಕೆಪಿಸಿಸಿ ಕಾರ್ಯಧ್ಯಕ್ಷರು, ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಕಾಂಗ್ರೆಸ್ ನಾಯಕರು ಇವತ್ತು​ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಬಳಿಕ ಅಕ್ಕಿ ಪೂರೈಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಹೋರಾಟಗಾರರು ಪತ್ರ ಕೂಡ ಬರೆದಿದ್ದಾರೆ.
ಕಾಂಗ್ರೆಸ್ ನಾಯಕರ ಈ ಹೋರಾಟ ಬರೀ ಅನ್ನಭಾಗ್ಯ ಯೋಜನೆಯ ಅಕ್ಕಿಗಷ್ಟೇ ಸೀಮಿತವಾಗಿಲ್ಲ. ಪ್ರತಿಭಟನೆಯ ಮುಖಾಂತರ ಕಾಂಗ್ರೆಸ್ ನಾಯಕರು ಹೊಸ ಪ್ಲಾನ್ ಮಾಡಿದ್ದಾರೆ. ಲೋಕಸಭೆ ಚುನಾವಣೆವರೆಗೂ ಬಿಜೆಪಿ, ಕೇಂದ್ರ ಸರ್ಕಾರದ ವಿರುದ್ಧ ಅಕ್ಕಿ ಅಸ್ತ್ರ ಪ್ರಯೋಗಿಸಲು ಕೈ ನಾಯಕರು ಮುಂದಾಗಿದ್ದಾರೆ.

ಕಾಂಗ್ರೆಸ್ ಅಕ್ಕಿ ಯುದ್ಧದ ತಂತ್ರಗಳೇನು?
ಅನ್ನಭಾಗ್ಯ ಯೋಜನೆಯ ಗ್ಯಾರಂಟಿಗೆ ರಾಜ್ಯ ಸರ್ಕಾರಕ್ಕೆ ಅಕ್ಕಿ ಅವಶ್ಯಕತೆ ಇದೆ. ಕೇಂದ್ರ ಸರ್ಕಾರ ಅಕ್ಕಿ ಕೊಡ್ತಿಲ್ಲ ಅಂತಾ ಕಾಂಗ್ರೆಸ್ ಆರೋಪಿಸುತ್ತಿದೆ. ಈ ಮೂಲಕ ನಾವು ಅಕ್ಕಿ ಕೊಡಲು ಸಿದ್ಧವಿದ್ದೇವೆ. ಕೇಂದ್ರ ಸರ್ಕಾರವೇ ಸಹಕರಿಸುತ್ತಿಲ್ಲ ಎಂಬ ಸಂದೇಶವನ್ನ ಜನರಿಗೆ ತಲುಪಿಸಲು ಕಾಂಗ್ರೆಸ್ ಪ್ಲಾನ್ ಮಾಡಿದೆ. 2024ರ ಲೋಕಸಭೆ ಚುನಾವಣೆವರೆಗೂ ಅಕ್ಕಿ ಯುದ್ಧ ಜೀವಂತವಾಗಿರಿಸೋದು ಕೈ ನಾಯಕರ ತಂತ್ರವಾಗಿದೆ.

ಬಿಜೆಪಿ ನಾಯಕರು ಅಕ್ಕಿ ವಿಚಾರದಲ್ಲಿ ಕೇಂದ್ರದ ಮೇಲೆ ಒತ್ತಡ ಹಾಕಲಿ ಅನ್ನೋದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹವಾಗಿದೆ. ಅಕ್ಕಿ ವಿಚಾರದಲ್ಲಿ ಸಂಸದರು, ಬಿಜೆಪಿ ನಾಯಕರಿಂದ ಸೂಕ್ತ ಸ್ಪಂದನೆ ಸಿಗುತ್ತಿಲ್ಲ. ಈ ಮೂಲಕ ಬಿಜೆಪಿ ನಾಯಕರು ಬಡವರ ವಿರುದ್ಧ ಇದ್ದಾರೆ ಅಂತಾ ಬಿಂಬಿಸುವುದು ಕೈ ನಾಯಕರ ಮಾಸ್ಟರ್‌ ಪ್ಲಾನ್ ಆಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಮೋದಿ ಸರ್ಕಾರದ ವಿರುದ್ಧ ಬೀದಿಗಿಳಿದ ಕಾಂಗ್ರೆಸ್; ಅಕ್ಕಿ ಯುದ್ಧದ ಹಿಂದಿರೋ ಅಸಲಿ ಕಾರಣ ಏನು ಗೊತ್ತಾ?

https://newsfirstlive.com/wp-content/uploads/2023/06/Dk-Shivakumar-2-1.jpg

Load More