newsfirstkannada.com

ಬಿಜೆಪಿ ಶಾಸಕರ ಕೊಲೆಗೆ ಕೇಂದ್ರ ಸಚಿವ ಭಗವಂತ ಖೂಬಾ ಸಂಚು? ಏನಿದು ಕಾಂಗ್ರೆಸ್​​ ಆರೋಪ?

Share :

Published August 17, 2023 at 4:34pm

  ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಕೊಲೆಗೆ ಸಂಚು ಆರೋಪ

  ನನ್ನ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಶಾಸಕ ಪ್ರಭು ಚೌಹಾಣ್..!

  ಟ್ವೀಟ್​ ಮಾಡಿ ಬಿಜೆಪಿ ಕಾಲೆಳೆದ ಕರ್ನಾಟಕ ಕಾಂಗ್ರೆಸ್​; ಏನಿದು ಕೇಸ್​?

ಬೆಂಗಳೂರು: ಬಿಜೆಪಿ ಆಂತರಿಕ ಕಲಹ ಈಗ ಆಂತರಿಕವಾಗಿಲ್ಲ, ಬದಲಿಗೆ ಬೀದಿ ಜಗಳವಾಗಿ ಪರಿಣಮಿಸಿದೆ ಎಂದು ಕರ್ನಾಟಕ ಕಾಂಗ್ರೆಸ್​ ಟ್ವೀಟ್​ ಮಾಡಿದೆ.

ಈ ಸಂಬಂಧ ಟ್ವೀಟ್​​ ಮಾಡಿರುವ ಕರ್ನಾಟಕ ಕಾಂಗ್ರೆಸ್​, ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರು ಬಿಜೆಪಿ ಸಂಸದರ ಮೇಲೆ ಕೊಲೆ ಷಡ್ಯಂತ್ರದ ಆರೋಪ ಹೊರಿಸಿದ್ದಾರೆ. ಇದಾದ ಬೆನ್ನಲ್ಲೇ ಭಗವಂತ ಖೂಬಾ ಅಹಿತಕರ ಘಟನೆ ನಡೆದರೆ ನಾನು ಹೊಣೆಯಲ್ಲ ಎಂದು ಅಂಟಿಸಿಪೇಟರಿ ಬೇಲ್ ಪಡೆಯುತ್ತಿದ್ದಾರೆ. ಇದರರ್ಥ ಚೌಹಾಣ್ ಮುಂದೆ ಅಹಿತಕರ ಘಟನೆಯನ್ನು ಎದುರಿಸಬೇಕಾಗುತ್ತದೆ ಎಂಬ ಸುಳಿವು ನೀಡಿದ್ದೇ ಎಂದು ಬಿಜೆಪಿಯನ್ನು ಪ್ರಶ್ನಿಸಿದೆ.

ಶಾಸಕರ ಆರೋಪದ ಬಗೆಗಿನ ತನಿಖೆಗೆ ರಾಜ್ಯದ ಪೋಲೀಸರ ಬದಲು ಸಿಬಿಐ ತನಿಖೆಗೆ ಆಗ್ರಹಿಸಿಲ್ಲವೇಕೆ? ಸಂಸದರ ಷಡ್ಯಂತ್ರದ ಬಗ್ಗೆ ಮೋದಿಗೆ ದೂರು ಕೊಡಲಿಲ್ಲವೇಕೆ? ತಮ್ಮ ಶಾಸಕರಿಗೆ ಜೀವ ಬೆದರಿಕೆ ಇದ್ದರೂ ಬಿಜೆಪಿ ಮೌನ ವಹಿಸಿರುವುದೇಕೆ? ಎಂದು ಕುಟುಕಿದೆ.

ಏನಿದು ಕೇಸ್​..?

ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನಿಸಿದರು. ಇವರ ಪ್ರಯತ್ನ ವಿಫಲವಾದ್ದರಿಂದ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಬಿಜೆಪಿ ಶಾಸಕ ಪ್ರಭು ಚೌಹಾಣ್​​​ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಬೀದರ್ ಎಸ್ಪಿಗೆ ಪತ್ರ ಬರೆದಿರೋ ಕೇಂದ್ರ ಸಚಿವ ಭಗವಂತ ಖೂಬಾ ಅಹಿತಕರ ಘಟನೆ ನಡೆದರೆ ನಾನು ಹೊಣೆಯಲ್ಲ ಎಂದು ಉಲ್ಲೇಖಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಿಜೆಪಿ ಶಾಸಕರ ಕೊಲೆಗೆ ಕೇಂದ್ರ ಸಚಿವ ಭಗವಂತ ಖೂಬಾ ಸಂಚು? ಏನಿದು ಕಾಂಗ್ರೆಸ್​​ ಆರೋಪ?

https://newsfirstlive.com/wp-content/uploads/2023/08/Prabhu-Chauhan_Bhagawant-Khubha.jpg

Load More