ರಾಹುಲ್ ಗಾಂಧಿ ಅನರ್ಹತೆಯನ್ನು ಖಂಡಿಸಿ ಕಾಂಗ್ರೆಸ್ ಹೋರಾಟ
ಬುಧವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೂ ಪ್ರೊಟೆಸ್ಟ್
ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ವಿರುದ್ಧ ಹೋರಾಟ ಮಾಡಲಿರುವ ಕಾಂಗ್ರೆಸ್
ಬೆಂಗಳೂರು: ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಬಿಜೆಪಿ ನಡೆಸುತ್ತಿರುವ ಷಡ್ಯಂತ್ರವನ್ನು ಖಂಡಿಸಿ ಜುಲೈ 12ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೂ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಮಾಡಿದ ಭಾಷಣ ಮುಂದಿಟ್ಟುಕೊಂಡು ರಾಜಕೀಯವಾಗಿ ಅವರನ್ನು ಮುಗಿಸುವ ಷಡ್ಯಂತ್ರ ನಡೆಯುತ್ತಿದ್ದು ಅದನ್ನು ಖಂಡಿಸುತ್ತೇವೆ. ದೇಶದ ಪರವಾಗಿ, ಸತ್ಯದ ಪರವಾಗಿ ಧ್ವನಿ ಎತ್ತುತ್ತಿರುವ ರಾಹುಲ್ ಗಾಂಧಿ ಅವರ ಪರವಾಗಿ ಇಡೀ ದೇಶ ಹಾಗೂ ವಿರೋಧ ಪಕ್ಷಗಳು ನಿಲ್ಲುವ ಸಂದೇಶ ರವಾನಿಸಬೇಕಾಗಿದೆ ಎಂದರು.
ಭಾರತ ಜೋಡೋ ಯಾತ್ರೆಯಲ್ಲಿ ಅವರಿಗೆ ಜನರಿಂದ ಸಿಕ್ಕ ಪ್ರೀತಿ ವಿಶ್ವಾಸ, ಕರ್ನಾಟಕ ರಾಜ್ಯದಲ್ಲಿ ಅವರಿಗೆ ಸಿಕ್ಕ ಭವ್ಯ ಯಶಸ್ಸು ಸಹಿಸಲಾಗದೇ ರಾತ್ರೋರಾತ್ರಿ ಅವರ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ ಎಂದು ಆರೋಪಿಸಿದರು.
ಏನಿದು ರಾಹುಲ್ ಗಾಂಧಿ ಅನರ್ಹತೆ ವಿವಾದ?
ಮೂರು ವರ್ಷಗಳ ಹಿಂದೆ ಕೋಲಾರದಲ್ಲಿ ನಡೆದ ಸಮಾವೇಶವೊಂದರಲ್ಲಿ “ಎಲ್ಲಾ ಕಳ್ಳರಿಗೂ ಮೋದಿ ಎಂಬ ಸರ್ ನೇಮ್ ಇದೆ ಎಂದಿದ್ದರು. ಈ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಈ ಕೇಸ್ನಲ್ಲಿ 2 ವರ್ಷ ಜೈಲು ಶಿಕ್ಷೆಗೆ ಒಳಗಾದ ರಾಹುಲ್ ಗಾಂಧಿಯವರನ್ನು ಮಾರ್ಚ್ 23ರಂದು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ