ರಾಜ್ಯ ಬಿಜೆಪಿಯಲ್ಲಿ ಭುಗಿಲ್ಲೆದ್ದ ಮೂಲ vs ವಲಸಿಗ ಬಂಡಾಯ
ಬಾಂಬೆ ಟೀಂ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಕೆಂಡಾಮಂಡಲ
ಈಶ್ವರಪ್ಪ ಬಾಯಿಯನ್ನು ಮುಚ್ಚಿಸುತ್ತೀರಾ? ಎಂದು ಕಾಂಗ್ರೆಸ್ ಟ್ವೀಟ್
ಬೆಂಗಳೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರೋಬ್ಬರಿ ಒಂದು ತಿಂಗಳಾಗಿದೆ. ಈಗಾಗಲೇ ಕೊಟ್ಟ ಭರವಸೆಯನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ತನ್ನ ಐದು ಗ್ಯಾರಂಟಿಗಳನ್ನು ಜಾರಿ ಮಾಡಲು ಮುಂದಾಗಿದೆ. ಇಷ್ಟಾದ್ರೂ ಇನ್ನೂ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಇದರ ಮಧ್ಯೆ ಬಿಜೆಪಿಯಲ್ಲಿ ವಲಸಿಗ vs ಮೂಲ ಎಂಬ ಬಿಗ್ ಫೈಟ್ ಶುರುವಾಗಿದೆ.
ಸದ್ಯ ಬಿಜೆಪಿಯಲ್ಲಿ ಅಶಿಸ್ತು ಹೆಚ್ಚಾಗಿದೆ. ಕಾಂಗ್ರೆಸ್ಸಿನಿಂದ ಬಿಜೆಪಿಗೆ ವಲಸಿಗರಿಂದಲೇ ಪಕ್ಷದಲ್ಲಿ ಅಶಿಸ್ತು ಬಂದಿರುವುದು. ಅಶಿಸ್ತು ತೋರುವವರ ಬಾಲ ಕಟ್ ಮಾಡ್ತೇವೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದರು. ಅಲ್ಲದೇ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಪರೇಷನ್ ಕಮಲ ಮುಳುವಾಯ್ತು. ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಕರೆದುಕೊಂಡು ಬಂದಿರುವುದಕ್ಕೆ ಸಮಸ್ಯೆ ಅನುಭವಿಸುತ್ತಿದ್ದೇವೆ ಎಂದಿದ್ದರು. ಈ ಬೆನ್ನಲ್ಲೇ ಬಿಜೆಪಿ ವಿರುದ್ಧ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬಾಂಬೆ ಟೀಮ್ ಈಗ ಬಿಜೆಪಿಯಲ್ಲಿ ಅನಾಥರ ಟೀಮ್ ಆಗಿದೆ. “ವಲಸಿಗ vs ಮೂಲ” ಎಂಬ ಒಳಬೇಗುದಿಗೆ ಈಶ್ವರಪ್ಪ ತುಪ್ಪ ಸುರಿದಿದ್ದಾರೆ. ವಲಸೆ ಬಂದವರಿಂದಲೇ ಶಿಸ್ತು ಮಾಯವಾಗಿದೆ ಎಂಬ ಹೇಳಿಕೆಯನ್ನು ಒಪ್ಪಿಕೊಳ್ಳುತ್ತೀರಾ ಅಥವಾ ಈಶ್ವರಪ್ಪ ಬಾಯಿ ಮುಚ್ಚಿಸುತ್ತೀರಾ? ಎಂದು ರಾಜ್ಯ ಬಿಜೆಪಿ ನಾಯಕರಿಗೆ ಪ್ರಶ್ನೆ ಕೇಳಿದೆ. ಜತೆಗೆ ನಾಯಕನಿಲ್ಲದ ಬಿಜೆಪಿ, ನಾವಿಕನಿಲ್ಲದ ಹಡಗಿನಂತಾಗಿ ಮುಳುಗಿದೆ, ನೆಲ ಕಚ್ಚುವುದೊಂದೇ ಬಾಕಿ ಎಂದು ಭವಿಷ್ಯ ನುಡಿದಿದೆ.
ಕಾಂಗ್ರೆಸ್ನಿಂದ ಬಿಜೆಪಿಗೆ ವಲಸೆ
ಕಳೆದ 4 ವರ್ಷಗಳ ಹಿಂದೆ ಕಾಂಗ್ರೆಸ್, ಜೆಡಿಎಸ್ನಿಂದ 17 ರೆಬೆಲ್ ಮಂದಿ ಶಾಸಕರು ಬಿಜೆಪಿ ಸೇರಿದ್ದರು. ಈ ಮೂಲಕ ಅಂದು ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು ಪತನಗೊಳಿಸಿದರು. ವಲಸಿಗರ ಸಹಾಯದಿಂದ ಅಂದು ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆ ಆಗಿತ್ತು. ಇಡೀ 17 ಮಂದಿ ವಲಸಿಗರನ್ನು ಬಿಜೆಪಿ ಬಾಂಬೆಯ ಪ್ರತಿಷ್ಠಿತ ಹೋಟೆಲ್ವೊಂದರಲ್ಲಿ ಇರಿಸಿ ಸರ್ಕಾರ ರಚನೆಯಾದ ಬಳಿಕ ಕರೆಸಿತ್ತು. ಹೀಗಾಗಿ ವಲಸಿಗರನ್ನು ಬಾಂಬೆ ಬಾಯ್ಸ್ ಎಂದು ಕರೆಯಲಾಗುತ್ತದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ