newsfirstkannada.com

Share :

02-06-2023

    ಇಡೀ ರಾಜ್ಯದ ಜನತೆ ಗ್ಯಾರಂಟಿ ಘೋಷಣೆ!

    ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ

    ಟ್ವೀಟ್​ ಮಾಡುವ ಮೂಲಕ ಕಾಂಗ್ರೆಸ್​​ ವ್ಯಂಗ್ಯ

ಬೆಂಗಳೂರು: ಇಡೀ ರಾಜ್ಯದ ಜನತೆ ಗ್ಯಾರಂಟಿ ಘೋಷಣೆ ಮೇಲೆ ನಿರೀಕ್ಷೆಗಳನ್ನು ಇಟ್ಟುಕೊಂಡು ಕಾದು ಕುಳಿತಿದ್ದ ದಿನ ಬಂದಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ತನ್ನ ಐದು ಗ್ಯಾರಂಟಿಗಳ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಇದೀಗ ಗ್ಯಾರಂಟಿಗಳದ್ದೇ ಕಾರುಬಾರು, ದರ್ಬಾರು ನಡೀತಿದೆ.

ಇನ್ನು, ಸಿಎಂ ಸಿದ್ದರಾಮಯ್ಯನವರು ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ಸರಣಿ ಟ್ವೀಟ್ ಮೂಲಕ ಬಿಜೆಪಿಯನ್ನು ಗೇಲಿ ಮಾಡಿದೆ. “ನಳಿನ್ ಅವರೇ ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ! ಬೊಮ್ಮಾಯಿ ಅವರೇ, ನಿಮ್ಮ ಮನೆಗೂ ಫ್ರೀ! ಶೋಭಾ ಕರಂದ್ಲಾಜೆ ಅವರೇ, ನಿಮಗೂ ಪ್ರಯಾಣ ಫ್ರೀ! ಸಿಟಿ ರವಿ ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ! ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)! ಎಂದು ಅದು ಟ್ವೀಟ್​ ಮಾಡುವ ಮೂಲಕ ವ್ಯಂಗ್ಯವಾಡಿದೆ.

ಇದಾದ ಬಳಿಕ ಮತ್ತೊಂದು ಟ್ವೀಟ್​ ಮಾಡಿದ ಕಾಂಗ್ರೆಸ್ ಪಕ್ಷ ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ ಎಂದು ಹೇಳಿದೆ. ಸದ್ಯ ಈ ಟ್ವೀಟ್​ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More