newsfirstkannada.com

Breaking: ತರೀಕೆರೆ ಕಾಂಗ್ರೆಸ್ ಶಾಸಕನಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಕಾರ್ಯಕರ್ತನ ಬರ್ಬರ ಕೊಲೆ

Share :

04-06-2023

    ತರೀಕೆರೆ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊಲೆ

    ಕೈ ಹಾಗೂ ಕಾಲಿಗೆ ಚಾಕು ಇರಿದು ಬರ್ಬರ ಹತ್ಯೆ

    ಘಟನಾ ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ

ಚಿಕ್ಕಮಗಳೂರು: ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಕಾರ್ಯಕರ್ತನ ಬರ್ಬರ ಕೊಲೆ ಆಗಿದೆ. ವರುಣ್ (28) ಕೊಲೆಯಾದ ಕಾಂಗ್ರೆಸ್​ ಕಾರ್ಯಕರ್ತ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಏನಿದು ಘಟನೆ..?
ತರೀಕೆರೆ ಶಾಸಕ ಶ್ರೀನಿವಾಸ್​ಗೆ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಈ ವೇಳೆ ಆರ್ಕೆಸ್ಟ್ರಾ ಕೂಡ ಕರೆಸಲಾಗಿತ್ತು. ಈ ವೇಳೆ ಹಾಡು ಬದಲಿಸುವ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ಗಲಾಟೆ ಆಗಿದೆ. ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಗಲಾಟೆ ಜೋರಾಗಿದೆ. ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ವರುಣ್​ಗೆ ಕಬಾಬ್ ಮೂರ್ತಿ ಚಾಕುವಿನಿಂದ ಇರಿದ್ದಾನೆ. ಗಲಾಟೆ ಬಿಡಿಸಲು ಹೋದ ಮಂಜು ಹಾಗೂ ಸಂಜು ಕೈ ಹಾಗೂ ಕಾಲಿಗೆ ಚಾಕು ಚುಚ್ಚಿದ್ದಾನೆ.

ವರುಣ್ ಹೊಟ್ಟೆಗೆ ಚಾಕು ಇರಿದಿದ್ದರಿಂದ ಗಂಭೀರವಾಗಿ ಗಾಯಗೊಂಡು ಅಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಶಿವಮೊಗ್ಗಕ್ಕೆ ವರುಣ್​ನನ್ನು ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ವರುಣ್ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಎಸ್‌.ಪಿ.ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking: ತರೀಕೆರೆ ಕಾಂಗ್ರೆಸ್ ಶಾಸಕನಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಕಾರ್ಯಕರ್ತನ ಬರ್ಬರ ಕೊಲೆ

https://newsfirstlive.com/wp-content/uploads/2023/06/CKM_CONG.jpg

Load More