/newsfirstlive-kannada/media/post_attachments/wp-content/uploads/2024/11/Harish.jpg)
ಹಾಸನ: ಕಾನ್ಸ್‌ಟೇಬಲ್‌ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿದ ಘಟನೆ ಹಾಸನ ತಾಲ್ಲೂಕಿನ ದುದ್ದ ಗ್ರಾಮದಲ್ಲಿ ನಡೆದಿದೆ. ಹರೀಶ್.ವಿ (32) ಕೊಲೆಯಾದ ಕಾನ್ಸ್‌ಟೇಬಲ್.
ಕೊಲೆಯಾದ ಹರೀಶ್ ಅರಸೀಕೆರೆ ತಾಲ್ಲೂಕಿನ ಬಾಗೇಶಪುರ ಗ್ರಾಮದವರಾಗಿದ್ದು, ಬೆಂಗಳೂರಿನ KSISFನಲ್ಲಿ ಕಾನ್ಸ್‌ಟೇಬಲ್ ಆಗಿದ್ದರು. ಇದೇ ತಿಂಗಳು 11 ರಂದು ಹರೀಶ್ಗೆ ವಿವಾಹ ನಿಶ್ಚಯವಾಗಿತ್ತು. ಮದುವೆ ಆಮಂತ್ರಣ ಪತ್ರ ಹಂಚಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ಹರೀಶ್ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಇದನ್ನೂ ಓದಿ: VIDEO: ಚಿಕ್ಕಮ್ಮ ರೀಲ್ಸ್ ಮಾಡೋದರಲ್ಲೇ ಬ್ಯುಸಿ.. ಕಣ್ಮೆದುರೇ ಕೊಚ್ಚಿಕೊಂಡು ಹೋದಳು ಪುಟ್ಟ ಬಾಲಕಿ!
ನಿನ್ನೆ ರಾತ್ರಿ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್ ಬಳಿ ದುಷ್ಕರ್ಮಿಗಳು ಹರೀಶ್ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ