newsfirstkannada.com

ರಾಜ್ಯ ಸರ್ಕಾರದಿಂದ ಸಂವಿಧಾನ ಮತ್ತು ಏಕತೆಯ ಸಂದೇಶ; ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ

Share :

Published February 25, 2024 at 8:27pm

    ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಸಂದಿವೆ

    ಏಕತೆಯ ಮಂತ್ರ ಪಠಿಸಿದ ಸಿಎಂ ಸಿದ್ದರಾಮಯ್ಯ ಸರ್ಕಾರ

    ನಗಾರಿ ಭಾರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಗಣ್ಯರು

ಡಾ.ಬಿ.ಆರ್.ಅಂಬೇಡ್ಕರ್ ರಚಿತ, ಭಾರತದ ಬೈಬಲ್ ಅಂತ ಕರೆಸಿಕೊಳ್ಳುವ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಸಂದಿವೆ. ಸಂವಿಧಾನಕ್ಕೆ 75 ವರ್ಷಗಳು ಸಂದ ಘಳಿಗೆಯಲ್ಲಿ ಇವತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ ನಡೆಸಿ ಸಂವಿಧಾನದ ಸಂದೇಶಗಳನ್ನು ಸಾರಲಾಯ್ತು.

ವಿಶ್ವದಲ್ಲೇ ಅತಿ ದೊಡ್ಡ ಸಂವಿಧಾನ. ಅವಿರತ ಅಧ್ಯಯನ, ಸಂಶೋಧನೆ, ವಿದ್ವತ್​ಪೂರ್ಣ ಬರಹಗಳಿಂದ ಡಾ.ಬಿ.ಆರ್.ಅಂಬೇಡ್ಕರ್​ರಿಂದ ರಚಿತವಾಗಿರುವ ಶ್ರೇಷ್ಠ ಭಾರತೀಯ ಸಂವಿಧಾನದ ಆಶಯದಂತೆ ನಡೆಯುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ಏಕತೆಯ ಮಂತ್ರ ಪಠಿಸುತ್ತಿದೆ.

‘ನನ್ನ ಸಂವಿಧಾನ, ನನ್ನ ಜೀವನ’ ಧ್ಯೇಯ ವಾಕ್ಯದೊಂದಿಗೆ ಇವತ್ತು ರಾಜ್ಯದ ಕಾಂಗ್ರೆಸ್ ಸರ್ಕಾರ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಆಯೋಜಿಸಿತ್ತು. ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಿ ಗ್ಯಾರಂಟಿ ಯೋಜನೆಗಳ ಮೂಲಕ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಸಂದೇಶ ಸಾರಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿವಿಧ ರಾಜ್ಯಗಳ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.

ನಗಾರಿ ಭಾರಿಸುವ ಮೂಲಕ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರು ಕಾರ್ಯಕ್ರಮ ಉದ್ಘಾಟಿಸಿದ್ರು. ಬಳಿಕ ಮಹನೀಯರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದ್ರು.

ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ

ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಜಮ್ಮುಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರುಕ್ ಅಬ್ದುಲ್ಲಾ ಸೇರಿ ಹಲವು ಗಣ್ಯರು ಸಾಕ್ಷಿಯಾದ್ರು. ಮೊದಲಿಗೆ ಇವತ್ತು ಅಗಲಿದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಸೇರಿ ಅಗಲಿದ ಗಣ್ಯರಿಗೆ ಶ್ರದ್ದಾಂಜಲಿ ಸಲ್ಲಿಸಲಾಯ್ತು.

ಸಂವಿಧಾನ ನಮ್ಮದು

ಮನೆಮನೆಗೆ ಸಂವಿಧಾನ ಕೊಂಡೊಯ್ಯುವ ಸಂಕಲ್ಪ ತೊಟ್ಟಿರುವ ಸಮಾಜ ಕಲ್ಯಾಣ ಸಚಿವ ಹೆಚ್​.ಸಿ.ಮಹದೇವಪ್ಪ ಸ್ವಾಗತ ಭಾಷಣ ಮಾಡಿದ್ರು. ವೈವಿಧ್ಯತೆಯಲ್ಲೇ ಏಕತೆಯನ್ನು ಕಾಣುವ ಸಂವಿಧಾನ ನಮ್ಮದು, ಸ್ವಾತಂತ್ರ್ಯ ಸಿಕ್ಕಿದ್ರೂ ದೇಶದಲ್ಲಿ ಅಸಮಾನತೆ ಕಡಿಮೆಯಾಗಬೇಕು, ಸಂವಿಧಾನದ ನೈತಿಕತೆಯನ್ನು ಉಳಿಸಬೇಕು ಅಂತ ಕರೆ ಕೊಟ್ರು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಮ್ಮ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳು ಸಂವಿಧಾನದ ಸದಾಶಯಗಳನ್ನು ಸಾಕಾರಗೊಳಿಸುವಲ್ಲಿ ಪ್ರಾಮಾಣಿಕ ಪ್ರಯತ್ನವಾಗಿದೆ ಅಂದ್ರು

ಇನ್ನು ರಾಜ್ಯದ ಎಲ್ಲಾ ಶಾಲೆಗಳು ಹಾಗೂ ವಿಶ್ವವಿದ್ಯಾನಿಲಯಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಕಡ್ಡಾಯವಾಗಿ ಓದಿಸಬೇಕು ಅಂತ ಸರ್ಕಾರ ನಿಯಮ ರೂಪಿಸಿದೆ. ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಹಾಗೂ ಉಪಾಸನಾ ಸ್ವಾತಂತ್ರ್ಯಕ್ಕಾಗಿ ಏಕತಾ ಸಮಾವೇಶ ನಡೆಸಿದ ಸಿದ್ದರಾಮಯ್ಯ ಸರ್ಕಾರ ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುತ್ತೇವೆ ಅಂತ ಪಣ ತೊಟ್ಟಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯ ಸರ್ಕಾರದಿಂದ ಸಂವಿಧಾನ ಮತ್ತು ಏಕತೆಯ ಸಂದೇಶ; ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ

https://newsfirstlive.com/wp-content/uploads/2024/02/Siddaramaiah-5-1.jpg

Load More