newsfirstkannada.com

ರಾಜ್ಯದಲ್ಲಿ ಮುಂದುವರಿದ ಮಳೆ.. ಯಾವ್ಯಾವ ಜಿಲ್ಲೆಗಳಲ್ಲಿ ರೆಡ್ ಅಲರ್ಟ್? ಶಾಲೆಗೆ ರಜೆ? ಇಲ್ಲಿದೆ ಮಾಹಿತಿ

Share :

26-07-2023

    ರಾಜ್ಯದ 14 ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಜೋರು

    ಕರ್ನಾಟಕದ 9 ಜಿಲ್ಲೆಗಳಲ್ಲಿ ಮುಂದುವರಿದ ಪ್ರವಾಹ, ಎಚ್ಚರಿಕೆಯಿಂದ ಜನರು

    ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ, ಶಾಲಾ ಕಾಲೇಜುಗಳಿಗೆ ರಜೆ

ರಾಜ್ಯದಲ್ಲಿ ಮಳೆಯ ಅವಾಂತರವೇನು ಕಡಿಮೆಯಾಗಿಲ್ಲ. ನಿರಂತರ ಮಳೆಯಿಂದ ಜನರು ಗುಡ್ಡ ಕುಸಿತ, ಪ್ರವಾಹ ಭೀತಿ ಹೀಗೆ ನಾನಾ ಸಂಕಷ್ಟ ಎದುರಿಸುತ್ತಿದ್ದಾರೆ. ಮತ್ತೊಂದೆಡೆ ಹವಾಮಾನ ಇಲಾಖೆ ಇನ್ನೂ 9 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಇವೆಲ್ಲವನ್ನು ಅರಿತು ಕೆಲವು ಜಿಲ್ಲೆಗಳಿಗೆ ಮುನ್ನೆಚ್ಚರಿಕೆಯ ಕ್ರಮವಾಗಿ ರೆಡ್​​ ಅಲರ್ಟ್​ ಘೋಷಿಸಲಾಗಿದೆ. ಅಂದಹಾಗೆಯೇ ಯಾವೆಲ್ಲಾ ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಿಸಲಾಗಿದೆ? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ರಾಜ್ಯದ 14 ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ ಸೇರಿ 9 ಜಿಲ್ಲೆಗಳಲ್ಲಿ ಪ್ರವಾಹ ಮುಂದುವರಿದಿದೆ. ಹೀಗಿರುವಾಗ ಬೆಳಗಾವಿಯ 6, ಉತ್ತರ ಕನ್ನಡದ 5 ತಾಲೂಕುಗಳಿಗೆ, ಉಡುಪಿ, ದಕ್ಷಿಣ ಕನ್ನಡ ಕೊಡಗು ಜಿಲ್ಲೆಯ ಜನರಿಗೆ ಎಚ್ಚರಿಯಿಂದ ಇರಬೇಕು ಎಂದು ಜಿಲ್ಲಾಡಳಿತ ಎಚ್ಚರಿಕೆ ರವಾನಿಸಿದೆ.

ಬೀದರ್

ಬೀದರ್ ಜಿಲ್ಲೆಯಲ್ಲಿ 26 ರಿಂದ 28 ರ ವರೆಗೆ ಅತೀ ಹೆಚ್ಚು ಮಳೆ ಸಾಧ್ಯತೆ ಇದ್ದು, ಜಿಲ್ಲಾಡಳಿತದಿಂದ ಹಳ್ಳ-ಕೊಳ್ಳಗಳ‌ ಹತ್ತಿರ ತೆರಳದಂತೆ ಸೂಚನೆ ಹೊರಡಿಸಲಾಗಿದೆ. ನಿರಂತರ ಮಳೆಯಿಂದಾಗಿ ಹಳ್ಳ- ಕೊಳ್ಳಗಳು ಈಗಾಗಲೇ ತುಂಬಿ ಹರಿಯುತ್ತಿವೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಬೀದರ್ ಜಿಲ್ಲೆಗೆ 26 ರಿಂದ ಎರಡು ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಈಗಾಗಲೇ ಕಾರಂಜಾ ಜಲಾಶಯ ಶೇ. 90ರಷ್ಡು ಭರ್ತಿಯಾಗಿದೆ.  ಮಳೆಯಿಂದ ಹಾನಿಯಾದ್ರೆ ತುರ್ತು ಸಹಾಯವಾಣಿಗೆ ಕರೆ ಮಾಡುವಂತೆ ಸೂಚನೆ ಹೊರಡಿಸಲಾಗಿದೆ. ಕಾರಂಜಾ ಜಲಾಶಯಕ್ಕೆ ಐದು ಸಾವಿರ ಹೆಚ್ಚು ಕ್ಯೂಸೆಕ್ಸ್​ ಒಳ ಹರಿವು ಹೆಚ್ಚಳವಾಗಿದೆ.

ಉಡುಪಿ

ಉಡುಪಿಯಲ್ಲಿ ಇಂದು ಬಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಇಂದು ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸದ್ಯ ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಜಿಲ್ಲೆಯಾದ್ಯಂತ ಮೋದ ಮೂಡಕವಿದ ವಾತಾವರಣ ಸೃಷ್ಟಿಯಾಗಿದೆ.

ನಿರಂತರ ಮಳೆ ಸುರಿಯತ್ತಿರುವುದರಿಂದ ನದಿ, ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ಹೊರಡಿಸಲಾಗಿದೆ. ಮೀನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ  ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಶಾಲೆಗಳಿಗೆ ರಜೆ

ಬೆಳಗಾವಿ ಜಿಲ್ಲೆಯ 6 ತಾಲೂಕು, ಉತ್ತರ ಕನ್ನಡದ ಜಿಲ್ಲೆಯ 5 ತಾಲೂಕು, ದ.ಕ, ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ. ಚಿತ್ರದುರ್ಗದಲ್ಲಿ 2 ದಿನ ಶಾಲೆಗಳಿಗೆ ರಜೆ ನೀಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯದಲ್ಲಿ ಮುಂದುವರಿದ ಮಳೆ.. ಯಾವ್ಯಾವ ಜಿಲ್ಲೆಗಳಲ್ಲಿ ರೆಡ್ ಅಲರ್ಟ್? ಶಾಲೆಗೆ ರಜೆ? ಇಲ್ಲಿದೆ ಮಾಹಿತಿ

https://newsfirstlive.com/wp-content/uploads/2023/07/rain-9-2.jpg

Load More