newsfirstkannada.com

Karnataka Rain: ರಾಜ್ಯದಲ್ಲಿ ಮುಂದುವರಿದ ಮಳೆ.. ಇಂದು ಈ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ

Share :

25-07-2023

    ರಾಜ್ಯದಲ್ಲಿ ಇಂದು ಕೂಡ ಮುಂದುವರಿದ ಮಳೆಯಾರ್ಭಟ

    ಧಾರಾಕಾರ ಮಳೆಗೆ ಹಳ್ಳ, ನದಿಗಳು ತುಂಬಿ ಹರಿಯುತ್ತಿವೆ

    ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

ರಾಜ್ಯದಲ್ಲಿ ಮಳೆಯಾರ್ಭಟ ಮುಂದುವರಿದಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಇಂದು ರೆಡ್‌ ಅಲರ್ಟ್‌ ನೀಡಲಾಗಿದೆ. ನಿನ್ನೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಅಲ್ಲಿನ ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಉಡುಪಿಯಲ್ಲಿ ಇಂದೂ ಸಹ ಅತ್ಯಧಿಕ ಮಳೆ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 25ರವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಈ ಆದೇಶ ಹೊರಡಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ ಪದವಿ ಕಾಳೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್​ ಈ ಆದೇಶ ಹೊರಡಿಸಿದ್ದಾರೆ.

ಮೈಸೂರು ಭಾಗದಲ್ಲಿ ನಿರಂತರ ಮಳೆ ಹಿನ್ನೆಲೆ ಎಚ್.ಡಿ.ಕೋಟೆ ಹಾಗು ಸರಗೂರಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಸರ್ಕಾರಿ ಅನುದಾನಿತ, ಕಿರಿಯ ಹಾಗು ಹಿರಿಯ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರೊಂದಿಗೆ ಕೊಡಗು ಜಿಲ್ಲೆಯ ಕೆಲವು ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Karnataka Rain: ರಾಜ್ಯದಲ್ಲಿ ಮುಂದುವರಿದ ಮಳೆ.. ಇಂದು ಈ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ

https://newsfirstlive.com/wp-content/uploads/2023/07/Rain-and-School-Students.jpg

Load More