newsfirstkannada.com

ಅಪ್ರಾಪ್ತೆ ಮೇಲೆ ಅತ್ಯಾಚಾರ, ಅರೆನಗ್ನ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್​ ಮೇಲ್​; ಆರೋಪಿಗೆ ​20 ವರ್ಷ ಜೈಲು ಶಿಕ್ಷೆ

Share :

Published January 26, 2024 at 10:06am

Update January 26, 2024 at 10:41am

    ಅಪ್ರಾಪ್ತೆಯನ್ನು ಆಟೋದಲ್ಲಿ ಶಾಲೆಗೆ ಬಿಡುತ್ತಿದ್ದ ಅತ್ಯಾಚಾರಿ

    ಬಾಲಕಿಯನ್ನು ಲಾಡ್ಜ್, ರೆಸಾರ್ಟ್ ಗೆ ಕರೆದುಕೊಂಡು ಹೋಗಿದ್ದ

    ಬಾಲಕಿ ತಾಯಿ ಮೊಬೈಲ್‌ಗೆ ವಿಡಿಯೋ ಕಳುಹಿಸಿದ ಅತ್ಯಾಚಾರಿ

ಉಡುಪಿ: ವ್ಯಕ್ತಿಯೋರ್ವ ಅಪ್ರಾಪ್ತ ಬಾಲಕಿಯ ಅರೆನಗ್ನ ವಿಡಿಯೋ ಚಿತ್ರೀಕರಣ ಮಾಡಿ ಬ್ಲಾಕ್ ಮೇಲ್ ಮಾಡಿದ್ದಲ್ಲದೆ, ವಿಡಿಯೋ ವೈರಲ್ ನೆಪದಲ್ಲಿ ರೆಸಾರ್ಟ್, ಲಾಡ್ಜ್ ಗೆ ಕರೆದುಕೊಂಡು ಹೋಗಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ ವೆಸಗಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರವೆಸಗಿದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ಜೊತೆ 62 ಸಾವಿರ ದಂಡವನ್ನು ನ್ಯಾಯಾಲಯ ವಿಧಿಸಿದೆ.

ಅತ್ಯಾಚಾರಿ ಆರೋಪಿ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಬಿಡುತ್ತಿದ್ದ. ಬಿಡುತ್ತಿದ್ದ ವೇಳೆ‌ಯಲ್ಲಿ ಒತ್ತಾಯ ಪೂರ್ವಕವಾಗಿ ಬಾಲಕಿಯ ಫೋಟೋ, ವಿಡಿಯೋ ಮಾಡಿ ವೈರಲ್ ಮಾಡುವುದಾಗಿ ಬೆದರಿಸುತ್ತಿದ್ದ. ನನ್ನ ಜೊತೆ ಬಂದಲ್ಲಿ ವಿಡಿಯೋ ಡಿಲೀಟ್ ಮಾಡುವುದಾಗಿ ನಂಬಿಸಿದ್ದ. ಅದರಂತೆ ಬಾಲಕಿಯನ್ನು ಲಾಡ್ಜ್, ರೆಸಾರ್ಟ್ ಗೆ ಕರೆದುಕೊಂಡು ಹೋಗಿ ನಿರಂತರ ಅತ್ಯಾಚಾರವೆಸಗಿದ್ದಾನೆ. ಮತ್ತೆ ಕರೆದಾಗ ಬಾಲಕಿ ಹೋಗಲು ನಿರಾಕರಿಸಿದಕ್ಕೆ ಆರೋಪಿ ಅರೆನಗ್ನ ವಿಡಿಯೋವನ್ನು ಆಕೆಯ ತಾಯಿಗೆ ಕಳುಹಿಸಿದ್ದಾನೆ.

ಬಾಲಕಿಯ ವಿಡಿಯೋ ತಾಯಿಯ ಮೊಬೈಲ್‌ಗೆ ಕಳುಹಿಸಿ ಲಕ್ಷಾಂತರ ರೂಪಾಯಿ ಬೇಡಿಕೆ ಇಟ್ಟಿದ್ದಾನೆ. ಈ ಬಗ್ಗೆ ನೊಂದ ಬಾಲಕಿಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲಾ ಫೋಕ್ಸೋ ವಿಶೇಷ ನ್ಯಾಯಾಲಯ ಪ್ರಕರಣವನ್ನು ತನಿಖೆ ಮಾಡಿ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಪ್ರಾಪ್ತೆ ಮೇಲೆ ಅತ್ಯಾಚಾರ, ಅರೆನಗ್ನ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್​ ಮೇಲ್​; ಆರೋಪಿಗೆ ​20 ವರ್ಷ ಜೈಲು ಶಿಕ್ಷೆ

https://newsfirstlive.com/wp-content/uploads/2023/12/Court-1.jpg

Load More