/newsfirstlive-kannada/media/post_attachments/wp-content/uploads/2023/11/death-ambikapati-1.jpg)
ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆರ್.ಅಂಬಿಕಾಪತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರ್.ಅಂಬಿಕಾಪತಿ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಂಜೆ 6:40ಕ್ಕೆ ಆರ್.ಅಂಬಿಕಾಪತಿ ಸಾವನ್ನಪ್ಪಿದ್ದಾರೆ.
/newsfirstlive-kannada/media/post_attachments/wp-content/uploads/2023/11/death-ambikapati-2.jpg)
ಕಳೆದ ಕೆಲ ದಿನಗಳ ಹಿಂದೆ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆರ್.ಅಂಬಿಕಾಪತಿ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ 42 ಕೋಟಿ ರೂಪಾಯಿಗೂ ಅಧಿಕ ಮೊತ್ತದ ನಗದು ಪತ್ತೆಯಾಗಿತ್ತು. ಬಳಿಕ ಇಲ್ಲಿನ ಆರ್​ಆರ್​ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆತ್ಮನಾಂದ ಲೇಔಟ್‍ನಲ್ಲಿರುವ ಆರ್. ಅಂಬಿಕಾಪತಿ ಸಂಬಂಧಿ ಪ್ರದೀಪ್ ಎಂಬುವರ ನಿವಾಸದಲ್ಲಿ 23 ಕರ್ಟನ್ ಬಾಕ್ಸ್‍ಗಳಲ್ಲಿ 500 ರೂ. ಮುಖಬೆಲೆಯ ಒಟ್ಟು 42 ಕೋಟಿ ರೂ.ಹಣ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಸುಲ್ತಾನ್ ಪಾಳ್ಯ, ಮಾನ್ಯತಾ ಟೆಕ್ ಪಾರ್ಕ್ ಸೇರಿದಂತೆ ವಿವಿಧೆಡೆ ಆರ್.ಅಂಬಿಕಾಪತಿ ಸೇರಿದ ನಿವಾಸ, ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us