newsfirstkannada.com

ಮಂಡ್ಯದಲ್ಲಿ ಕಾಂಗ್ರೆಸ್‌ಗೆ ಬ್ರಹ್ಮಾಸ್ತ್ರವಾದ HDK ವಿವಾದಾತ್ಮಕ ಹೇಳಿಕೆ; ಡಿ.ಕೆ ಶಿವಕುಮಾರ್‌ ಕೆಂಡಾಮಂಡಲ!

Share :

Published April 14, 2024 at 5:13pm

    ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಹಳ್ಳಿ ತಾಯಂದಿರು ದಾರಿತಪ್ಪಿದ್ದಾರೆ

    ಮಂಡ್ಯದಲ್ಲಿ ಗೋ ಬ್ಯಾಕ್ ಕುಮಾರಸ್ವಾಮಿ ಎಂದು ಕಾಂಗ್ರೆಸ್‌ ಘೋಷಣೆ

    ಇದು ರಾಜ್ಯಕ್ಕೆ, ತಾಯಿ ಚಾಮುಂಡಿಗೆ ಆದ ಅವಮಾನ ಎಂದ ಡಿಕೆ ಶಿವಕುಮಾರ್

ಲೋಕಸಭಾ ಚುನಾವಣೆಯ ಪ್ರಚಾರ ಜೋರಾಗಿರುವಾಗಲೇ ನಾಯಕರ ವಾಕ್ಸಮರ ತಾರಕಕ್ಕೇರಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ವಿರುದ್ಧ ಸಮರ ಸಾರಿರುವ ಬಿಜೆಪಿ, ಜೆಡಿಎಸ್ ನಾಯಕರು ಕಾಂಗ್ರೆಸ್‌ ಸೋಲಿಸಲು ಪಣ ತೊಟ್ಟಿದ್ದಾರೆ. ಮತಯಾಚನೆ ವೇಳೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದು, ಕಾಂಗ್ರೆಸ್ ನಾಯಕರು ಕೆಂಡಾಮಂಡಲರಾಗಿದ್ದಾರೆ.

ತುಮಕೂರಿನ ತುರುವೇಕೆರೆಯ ಪ್ರಚಾರದಲ್ಲಿ ಮಾತನಾಡಿದ್ದ ಹೆಚ್‌.ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿತಪ್ಪಿದ್ದಾರೆ ಎಂದಿದ್ದಾರೆ. ಇವತ್ತಿನ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿ ನಮ್ಮ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪುತ್ತಿದ್ದಾರೆ. ಅವರ ಬದುಕು ಏನಾಗುತ್ತದೆ ಎಂಬುದು ಯೋಚನೆ ಮಾಡಬೇಕಾಗುತ್ತದೆ. ನಿಮ್ಮ ಕುಟುಂಬದ ಬದುಕು ಏನಾಗುತ್ತೆ ಅಂತ ಯೋಚನೆ ಮಾಡಬೇಕಾಗುತ್ತದೆ ಎಂದು ಹೇಳಿದ್ದು ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಮೋದಿ ಆಗಮನಕ್ಕೂ ಮುನ್ನವೇ ಮೈಸೂರಲ್ಲಿ ಮಹತ್ವದ ಬೆಳವಣಿಗೆ; ಕೈ ಕೊಡ್ತಾರಾ ಶ್ರೀನಿವಾಸ ಪ್ರಸಾದ್?

ಮಂಡ್ಯದಲ್ಲಿ ಕುಮಾರಸ್ವಾಮಿ ವಿರುದ್ಧ ಮಹಿಳೆಯರು ಸಿಡಿದೆದ್ದಿದ್ದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ಅವರು ಮಂಡ್ಯ ಬಿಜೆಪಿ, ಜೆಡಿಎಸ್‌ ಅಭ್ಯರ್ಥಿಯಾಗಿದ್ದು, ಸಂಜಯ್ ವೃತ್ತದಲ್ಲಿ ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ ನಡೆದಿದ್ದು, ಗೋ ಬ್ಯಾಕ್ ಕುಮಾರಸ್ವಾಮಿ ಎಂದು ಘೋಷಣೆ ಕೂಗಿದರು. ಹೆಚ್​ಡಿಕೆ ಹೇಳಿಕೆ ಖಂಡಿಸಿ ಗೋ ಬ್ಯಾಕ್ ಪೋಸ್ಟರ್ ಹಿಡಿದು ಆಕ್ರೋಶ ಹೊರ ಹಾಕಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಖಂಡನೆ 
ಹೆಚ್​ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೆಂಡಾಮಂಡಲರಾಗಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೆಚ್‌ಡಿಕೆ ಹೇಳಿಕೆ ಇಡೀ ಮಾನವ ಕುಲಕ್ಕೆ ಆದ ಅವಮಾನ. ನನ್ನ ಅಕ್ಕ-ತಂಗಿ, ತಾಯಂದಿರಿಗೆ ಅಪಮಾನ ಮಾಡಿದ್ದಾರೆ. ಇದು ರಾಜ್ಯಕ್ಕೆ, ತಾಯಿ ಚಾಮುಂಡಿಗೆ ಆದ ಅವಮಾನ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಪ್ರಧಾನಿ ಮೋದಿ ಅವರೇ ಇದಕ್ಕೆ ಉತ್ತರ ನೀಡಬೇಕು. ಮಹಿಳೆಯರ ಹೋರಾಟಕ್ಕೆ ನಾವು ಅಡ್ಡ ಬರುವುದಿಲ್ಲ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು, ಹೆಣ್ಣು ಮಕ್ಕಳು ದಾರಿತಪ್ಪಿದ್ದಾರೆ ಎಂದರೆ ಏನು ಅರ್ಥ. ಹೆಣ್ಣುಮಕ್ಕಳ ಬಗ್ಗೆ ಇರುವ ಮನಸ್ಥಿತಿ ಏನು ಅಂತ ಅರ್ಥವಾಗುತ್ತೆ. ಹೆಣ್ಣುಮಕ್ಕಳ ಬಗ್ಗೆ ಅವರಿಗಿರುವ ಭಾವನೆ ಏನು ಅಂತ ತಿಳಿಯುತ್ತೆ. ಎರಡು ಬಾರಿ ಸಿಎಂ ಆಗಿದ್ದವರು ಈ ರೀತಿ ಮಾತನಾಡಿದ್ರೆ ಹೇಗೆ? ಇದನ್ನು ರಾಜ್ಯದ ಜನರು ಸಹಿಸುತ್ತಾರೆಯೇ? ಅಂತ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಕುಮಾರಸ್ವಾಮಿ ಸ್ಪಷ್ಟನೆ ಏನು?
ಇಷ್ಟೆಲ್ಲಾ ಬೆಳವಣಿಗೆ ಬಳಿಕ ತಮ್ಮ ಹೇಳಿಕೆಯನ್ನ ಮಾಜಿ ಸಿಎಂ ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ. ಗ್ಯಾರಂಟಿ ಹೆಸರಲ್ಲಿ ನಿಮ್ಮನ್ನ ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದೇನೆ. ನಾನು ಮಹಿಳೆಯರನ್ನ ಅವಮಾನ ಮಾಡಿಲ್ಲ. ಮಹಿಳೆಯರ ಬಗ್ಗೆ ನಾನು ಕೇವಲವಾಗಿ ಮಾತಾಡೋದಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ಮಹಿಳೆಯರಿಗಾಗಿ ಸಾಕಷ್ಟು ಯೋಜನೆ ತಂದಿದ್ದೇನೆ. ಕಾಂಗ್ರೆಸ್ ನಾಯಕರು ನನ್ನ ಮೇಲೆ ತಪ್ಪು ಹೊರೆಸುವ ರೀತಿ ಮಾಡ್ತಿದ್ದಾರೆ ಅಂತ ಆರೋಪಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಂಡ್ಯದಲ್ಲಿ ಕಾಂಗ್ರೆಸ್‌ಗೆ ಬ್ರಹ್ಮಾಸ್ತ್ರವಾದ HDK ವಿವಾದಾತ್ಮಕ ಹೇಳಿಕೆ; ಡಿ.ಕೆ ಶಿವಕುಮಾರ್‌ ಕೆಂಡಾಮಂಡಲ!

https://newsfirstlive.com/wp-content/uploads/2024/04/Congress-Hd-Kumaraswamy.jpg

Load More