/newsfirstlive-kannada/media/post_attachments/wp-content/uploads/2023/10/LPG-Gas.jpg)
ಬೆಂಗಳೂರು: ದಿನ ನಿತ್ಯದ ವಸ್ತುಗಳ ದರ ಹೆಚ್ಚಳದ ನಡುವೆಯೇ ಜನತೆಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಿದ್ದು, ಅಡುಗೆ ಅನಿಲದ ದರವನ್ನು 50 ರೂಪಾಯಿಗೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ. ಇಂದಿನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.
ಇದು ಸಾಮಾನ್ಯ ಸಿಲಿಂಡರ್ ಜತೆ ಉಜ್ವಲಾ ಯೋಜನೆಗೂ ಅನ್ವಯವಾಗಲಿದೆ. ಈ ಬಗ್ಗೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮಾಹಿತಿ ನೀಡಿದ್ದಾರೆ. ಅಡುಗೆ ಅನಿಲದ ದರವನ್ನು ಉಜ್ವಲಾ ಯೋಜನೆ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೆ ಹೆಚ್ಚಿಸಲಾಗಿದೆ. ಹೊಸ ದರದ ಅನ್ವಯ 14.2 ಕೇಜಿ ಅಡುಗೆ ಅನಿಲದ ದರ 803 ರೂಪಾಯಿಯಿಂದ 853ಕ್ಕೆ ಏರಿಕೆಯಾಗಿದೆ.
ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ 503 ರಿಂದ 553ಗೆ ಏರಿಕೆ ಮಾಡಲಾಗಿದೆ ಎಂದಿದ್ದಾರೆ. ಇನ್ನೊಂದೆಡೆ ದೆಹಲಿ ಸೇರಿ ಹಲವು ನಗರಗಳಲ್ಲಿ ಸಿಎನ್‌ಜಿ ದರವನ್ನು 1 ಕೇಜಿಗೆ 2 ರೂಪಾಯಿ ಹೆಚ್ಚಿಸಿದೆ. ಇದರಿಂದ ಸಿಎನ್‌ಜಿ ದರ 75.09 ರೂಪಾಯಿಗೆ ಏರಿಕೆ ಆಗಿದೆ.
ಇದನ್ನೂ ಓದಿ: ಇಂದಿನಿಂದ ಈ ಕಂಪನಿ ಕಾರುಗಳ ಬೆಲೆ ಭಾರೀ ಏರಿಕೆ.. 62,000 ರೂಪಾಯಿ ಹೆಚ್ಚಳವಾದ ಕಾರು ಯಾವುದು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ