/newsfirstlive-kannada/media/post_attachments/wp-content/uploads/2025/05/Corona.jpg)
ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇವತ್ತು ಒಂದೇ ದಿನ ಐದು ಪಾಸಿಟಿವ್ ಕೇಸ್ ದಾಖಲಾಗಿವೆ. ಅಲ್ಲದೇ ಮೊದಲ ಸಾವು ಕೂಡ ಆಗಿದೆ.
84 ವರ್ಷದ ವ್ಯಕ್ತಿ ಒಬ್ಬರು ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಅವರು ಬೆಂಗಳೂರಿನ ವೈಟ್ ಫೀಲ್ಡ್ ಮೂಲದವರಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೇ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಕೊರೊನಾ ಭಯ.. ರಾಜ್ಯದ ಜನತೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಶೇಷ ಮನವಿ
ರಾಜ್ಯದಲ್ಲಿ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 38 ಇದೆ. ಅದರಲ್ಲಿ ಬೆಂಗಳೂರು ಒಂದರಲ್ಲೇ 32 ಕೇಸ್​ಗಳು ದಾಖಲಾಗಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ಕೇಸ್ ದಾಖಲಾಗಿದೆ. ಇನ್ನು ಇಂದು ಬೆಂಗಳೂರಲ್ಲಿ ಎರಡು ಪ್ರಕರಣ, ಮೈಸೂರಲ್ಲಿ 2 ಹಾಗೂ ವಿಜಯನಗರದಲ್ಲಿ ಒಂದು ಕೇಸ್ ದಾಖಲಾಗಿದೆ.
ಇದನ್ನೂ ಓದಿ: ಕನ್ನಡ ಸೇರಿ ಹಲವು ಭಾಷೆಗಳಲ್ಲಿ ನಟಿಸಿದ್ದ ನಟ ಮುಕುಲ್ ದೇವ್ ನಿಧನ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us