/newsfirstlive-kannada/media/post_attachments/wp-content/uploads/2025/05/kiladi.jpg)
ಚಿಕ್ಕಮಗಳೂರು: 45 ವರ್ಷಕ್ಕೆ ಮಗು ಹೆತ್ತು ಮಾರಾಟ ಮಾಡಿದ್ದ ದಂಪತಿ ಪೊಲೀಸರ ಅತಿಥಿಯಾಗಿದ್ದಾರೆ. ಎನ್.ಆರ್.ಪುರ ತಾಲೂಕಿನ ಹರಾವರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರತ್ನ-ಸದಾನಂದ ಮಗು ಮಾರಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾರೆ.
ಇದನ್ನೂ ಓದಿ:ಚಿಕ್ಕೋಡಿ ಮೇಖಳಿ ಮಠ ಧ್ವಂಸ.. ಅಧಿಕಾರಿಗಳ ಇಂಥ ನಿರ್ಧಾರಕ್ಕೆ ಅಸಲಿ ಕಾರಣ ಏನು..?
ಹೌದು, ರತ್ನ-ಸದಾನಂದಗೆ ಜನಿಸಿದ 2 ದಿನದ ಹೆಣ್ಣು ಮಗುವನ್ನು 1 ಲಕ್ಷಕ್ಕೆ ಮಾರಾಟ ಮಾಡಿದ್ದರು. ಈ ಕೇಸ್ನಲ್ಲಿ ಮಗು ಮಾರಾಟಕ್ಕೆ ಸಹಕರಿಸಿದ ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಕುಸುಮರನ್ನು ಪೊಲೀಸರು ಬಂಧಿಸಿದ್ದಾರೆ.
ನಿವೃತ್ತ ನರ್ಸ್ ಸಹೋದರ ಕಾರ್ಕಳದ ರಾಘವೇಂದ್ರ ಎಂಬುವರಿಗೆ 2 ದಿನದ ಹೆಣ್ಣು ಮಗುವನ್ನು 1 ಲಕ್ಷಕ್ಕೆ ಮಾರಾಟ ಮಾಡಲಾಗಿತ್ತು. ಅಲ್ಲದೇ ರತ್ನ-ಸದಾನಂದ ದಂಪತಿಗೆ ಮೂವರು ಮಕ್ಕಳಿದ್ದು, ಇಬ್ಬರನ್ನು ಈಗಾಗಲೇ ಮಾರಾಟ ಮಾಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಸದ್ಯ ಎನ್.ಆರ್.ಪುರ ಪೊಲೀಸರು ಮಗುವನ್ನು ರಕ್ಷಣೆ ಮಾಡಿ, ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ. ಸದ್ಯ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ