newsfirstkannada.com

30 ಕೋಟಿ ವಂಚನೆ ಕೇಸ್​ಗೆ ಬಿಗ್ ಟ್ವಿಸ್ಟ್.. ನಿನ್ನೆ ಕಲಬುರಗಿಯಲ್ಲಿ ನಡೆದಿದ್ದು ಏನು..?

Share :

Published May 29, 2024 at 8:37am

    ವಂಚನೆ ಬಗ್ಗೆ ದೂರು ದಾಖಲಾಗ್ತಿದ್ದಂತೆ ಪರಾರಿ ಆಗಿದ್ದ ದಂಪತಿ

    ದಂಪತಿಯನ್ನ ಮೆಡಿಕಲ್ ಟೆಸ್ಟ್‌ಗೆ ಕರೆದೊಯ್ದಿರುವ ಪೊಲೀಸರು

    ಕಿಲಾಡಿ ದಂಪತಿ 30 ಕೋಟಿಯನ್ನು ಜನರಿಗೆ ಯಾಮಾರಿಸಿದ್ದರು

ಕಲಬುರಗಿ: ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ 30 ಕೋಟಿ ರೂಪಾಯಿ ವಂಚಿಸಿ ಪರಾರಿಯಾಗಿದ್ದ ದಂಪತಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಕ್ಯಾಪಿಟಲ್‌ ಗ್ರೋ ಲರ್ನ್ ಟ್ರೇಡಿಂಗ್ ಕಂಪನಿಯ ಮಾಲೀಕ ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ಇಬ್ಬರು ಕಲಬುರಗಿ JMFC 2 ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಇವರಿಬ್ಬರ ವಿರುದ್ಧ ಕೋಟ್ಯಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿತ್ತು. ವಂಚನೆ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಕಿಲಾಡಿ ದಂಪತಿ ಪರಾರಿಯಾಗಿದ್ದರು. ಕಳೆದ 3 ದಿನಗಳ ಹಿಂದೆ ಆರೋಪಿಗಳ ವಿರುದ್ಧ ರೋಜಾ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿತ್ತು.

ಇದನ್ನೂ ಓದಿ: ಕೊನೆಗೂ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ.. ಎಲ್ಲಿಂದ ಬರ್ತಿದ್ದಾರೆ ಗೊತ್ತಾ?

ದಂಪತಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದರು. ಕಲಬುರಗಿಯಲ್ಲಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿನ್ಸಿಪಲ್ ಜೆಎಂಎಫ್‌ಸಿ ನ್ಯಾಯಾಲಯವು ಇಬ್ಬರಿಗೂ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬೆನ್ನಲ್ಲೆ ಪೊಲೀಸರು ಆರೋಪಿಗಳನ್ನು ಮೆಡಿಕಲ್ ಟೆಸ್ಟ್‌ಗೆ ಕರೆದೊಯ್ದಿದ್ದಾರೆ. ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ನಡೆಯಲಿದೆ. ನಂತರ ಕೇಂದ್ರಿಯ ಕಾರಾಗೃಹಕ್ಕೆ ಕರೆ ತಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

30 ಕೋಟಿ ವಂಚನೆ ಕೇಸ್​ಗೆ ಬಿಗ್ ಟ್ವಿಸ್ಟ್.. ನಿನ್ನೆ ಕಲಬುರಗಿಯಲ್ಲಿ ನಡೆದಿದ್ದು ಏನು..?

https://newsfirstlive.com/wp-content/uploads/2024/05/KLB_30_CRORE.jpg

Load More