newsfirstkannada.com

ಸೌಜನ್ಯ ಅತ್ಯಾಚಾರ ಕೊಲೆ ಕೇಸ್‌; ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದ ಕೋರ್ಟ್

Share :

Published June 16, 2023 at 4:38pm

Update June 16, 2023 at 5:02pm

    2012ರ ಅಕ್ಟೋಬರ್‌ 9 ರಂದು ಸೌಜನ್ಯ ನಾಪತ್ತೆಯಾಗಿದ್ದರು

    ಮರುದಿನ ರಾತ್ರಿ ಮಣ್ಣಸಂಕ ಬಳಿ ವಿದ್ಯಾರ್ಥಿನಿ ಮೃತದೇಹ ಪತ್ತೆ

    ತೀವ್ರ ಸಂಚಲನ ಸೃಷ್ಟಿಸಿದ್ದ ಸೌಜನ್ಯ ಅತ್ಯಾಚಾರ & ಕೊಲೆ ಕೇಸ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಆರೋಪಿ ಸಂತೋಷ್ ರಾವ್ ಅವರನ್ನು ದೋಷಮುಕ್ತ ಎಂದು ಆದೇಶಿಸಿದೆ.

2012ರ ಅಕ್ಟೋಬರ್‌ 9 ರಂದು ಸಂಜೆ ಕಾಲೇಜಿನಿಂದ ಮನೆಗೆ ಹೋಗುವಾಗ ಸೌಜನ್ಯ ನಾಪತ್ತೆಯಾಗಿದ್ದರು. ಮರುದಿನ ರಾತ್ರಿ ಮಣ್ಣಸಂಕ ಎಂಬಲ್ಲಿ ವಿದ್ಯಾರ್ಥಿನಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು. ಪಾಂಗಾಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿ ಪುತ್ರಿ ಸೌಜನ್ಯ ಕೊಲೆ ಪ್ರಕರಣಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅತ್ಯಾಚಾರ & ಕೊಲೆ ಕೇಸ್ ದಾಖಲು ಮಾಡಿದ್ದ ಬೆಳ್ತಂಗಡಿಯ ಪೊಲೀಸರು ಆರೋಪಿ ಸಂತೋಷ್ ರಾವ್‌ನನ್ನು ಬಂಧಿಸಿದ್ದರು.

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ನಡೆಸಿರುವ ಸಿಬಿಐ ವಿಶೇಷ ನ್ಯಾಯಾಲಯ ಇಂದು ಆರೋಪಿ ಸಂತೋಷ್ ರಾವ್ ದೋಷಮುಕ್ತ ಎಂದು ಆದೇಶ ನೀಡಿದೆ. ಸಾಕ್ಷ್ಯಾಧಾರ ಕೊರತೆ ಹಿನ್ನೆಲೆ ಆರೋಪಿ ಸಂತೋಷ್ ರಾವ್ ಅವರನ್ನು ಬಿಡುಗಡೆಗೊಳಿಸಿ ಆದೇಶ ನೀಡಿದೆ. ಸಿಬಿಐ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸಂತೋಷ. ಸಿ.ಬಿ. ಈ ಆದೇಶ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಸೌಜನ್ಯ ಅತ್ಯಾಚಾರ ಕೊಲೆ ಕೇಸ್‌; ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದ ಕೋರ್ಟ್

https://newsfirstlive.com/wp-content/uploads/2023/06/Soujanya.jpg

Load More